ಮೇ.31 ರಂದು ರಾಜ್ಯದಿಂದ ಕಾರ್ಮಿಕರಿಗಾಗಿ ಉಚಿತ ಶ್ರಮಿಕ್‌ ರೈಲು; ಸಿಎಂ ಯಡಿಯೂರಪ್ಪ ಘೋಷಣೆ

ಲಾಕ್‌ಡೌನ್‌ ಸಂದರ್ಭದಲ್ಲಿ ಕಾರ್ಮಿಕರನ್ನು ಉಚಿತವಾಗಿ ಮನೆ ಸೇರಿಸಬೇಕು ಎಂಬುದು ಎಲ್ಲರ ಆಗ್ರಹವಾಗಿತ್ತು. ಆದರೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈವರೆಗೆ ಉಚಿತ ಸಾರಿಗೆ ಕುರಿತು ಚಿಂತನೆ ನಡೆಸಿರಲಿಲ್ಲ. ಇದು ಬಡವರ್ಗದ ಜನರ ಆಕ್ರೋಶಕ್ಕೆ ಕಾರಣವಾಗಿತ್ತು.

ಸಿಎಂ ಬಿ.ಎಸ್‌. ಯಡಿಯೂರಪ್ಪ.

ಸಿಎಂ ಬಿ.ಎಸ್‌. ಯಡಿಯೂರಪ್ಪ.

  • Share this:
ಬೆಂಗಳೂರು (ಮೇ 22); ಶ್ರಮಿಕ್ ರೈಲುಗಳ ಮೂಲಕ ಮೇ.31 ರಂದು ಸ್ವಗ್ರಾಮಗಳಿಗೆ ತೆರಳ ಬಯಸುವ ವಲಸೆ ಕಾರ್ಮಿಕರು ಹಾಗೂ ಲಾಕ್‌ಡೌನ್‌ನಲ್ಲಿ ಸಿಲುಕಿರುವವರ ಪ್ರಯಾಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ತಿಳಿಸಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಲಕ್ಷಾಂತರ ವಲಸೆ ಕಾರ್ಮಿಕರು ನಾನಾ ರಾಜ್ಯದಲ್ಲಿ ಸಿಲುಕಿಕೊಂಡಿದ್ದಾರೆ. ಇವರನ್ನು ಸ್ವಗ್ರಾಮಗಳಿಗೆ ಕಳುಹಿಸುವ ಸಲುವಾಗಿ ಕಳೆದ ಎರಡು ವಾರಗಳಿಂದ ಶ್ರಮಿಕ್‌ ರೈಲುಗಳನ್ನು ಚಾಲನೆ ಮಾಡಲಾಗುತ್ತಿದೆ. ಆದರೆ, ಇದಕ್ಕೆ ಕಾರ್ಮಿಕರಿಂದ ದುಬಾರಿ ಪ್ರಯಾಣ ದರವನ್ನು ವಸೂಲಿ ಮಾಡಲಾಗುತ್ತಿದೆ.ಲಾಕ್‌ಡೌನ್‌ ಸಂದರ್ಭದಲ್ಲಿ ಕಾರ್ಮಿಕರನ್ನು ಉಚಿತವಾಗಿ ಮನೆ ಸೇರಿಸಬೇಕು ಎಂಬುದು ಎಲ್ಲರ ಆಗ್ರಹವಾಗಿತ್ತು. ಆದರೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈವರೆಗೆ ಉಚಿತ ಸಾರಿಗೆ ಕುರಿತು ಚಿಂತನೆ ನಡೆಸಿರಲಿಲ್ಲ. ಇದು ಬಡವರ್ಗದ ಜನರ ಆಕ್ರೋಶಕ್ಕೆ ಕಾರಣವಾಗಿತ್ತು.ಈ ಕುರಿತು ಕೊನೆಗೂ ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. ಇಂದು ಟ್ವೀಟ್‌ ಮಾಡಿರುವ ಸಿಎಂ ಯಡಿಯೂರಪ್ಪ, "ತಮ್ಮ ಸ್ವಗ್ರಾಮಗಳಿಗೆ ಹಿಂದಿರುಗಲು ಪ್ರಯಾಣದ ವೆಚ್ಚವನ್ನು ಭರಿಸಲು ಸಾಧ್ಯವಾಗುತ್ತಿಲ್ಲವೆಂಬ ವಲಸೆ ಕಾರ್ಮಿಕರ ಮನವಿಯನ್ನು ಸರ್ಕಾರವು ಪರಿಗಣಿಸಿದೆ.

ನಮ್ಮ ದೇಶದ ದೂರದ ಭಾಗಗಳಿಂದ ಬಂದಿರುವ ವಲಸೆ ಕಾರ್ಮಿಕರನ್ನು ನಾವು ನಮ್ಮದೇ ರಾಜ್ಯದ ಜನರು ಎಂದು ಭಾವಿಸುತ್ತೇವೆ ಮತ್ತು ಅವರ ಕಷ್ಟಕ್ಕೆ ಸರ್ಕಾರವು ಸ್ಪಂದಿಸಬೇಕೆಂಬುದು ನನ್ನ ದೃಢ ನಿರ್ಧಾರ.

ಈ ಹಿನ್ನೆಲೆಯಲ್ಲಿ ದಿನಾಂಕ: 31-05-2020 ವರೆಗೆ ಶ್ರಮಿಕ್ ರೈಲುಗಳ ಮೂಲಕ ಸ್ವಗ್ರಾಮಗಳಿಗೆ ತೆರಳಬಯಸುವ ವಲಸೆ ಕಾರ್ಮಿಕರು ಹಾಗೂ ಲಾಕ್ ಡೌನ್‍ ನಲ್ಲಿ ಸಿಲುಕಿರುವವರ ಪ್ರಯಾಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ" ಎಂದು ಆಶ್ವಾಸನೆ ನೀಡಿದ್ದಾರೆ.

ಇದನ್ನೂ ಓದಿ : ದರ ಹೆಚ್ಚಳದೊಂದಿಗೆ ಎರಡು-ಮೂರು ದಿನಗಳಲ್ಲಿ ಖಾಸಗಿ ಬಸ್ ಸಂಚಾರ ಆರಂಭ; ಡಿಸಿಎಂ ಲಕ್ಷ್ಮಣ ಸವದಿ
First published: