ಪಣಜಿ (ಜೂ. 28): ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆ ಕಾಣುತ್ತಿದ್ದಂತೆ ನಿಧಾನವಾಗಿ ಪ್ರವಾಸಿತಾಣಗಳು ಸಾರ್ವಜನಿಕರಿಗೆ ಮುಕ್ತವಾಗಲಾರಂಭಿಸಿದೆ. ಅದರಲ್ಲೂ ಗೋವಾ ಕಡಲ ಕಿನಾರೆಗಳು ಈಗ ಎಲ್ಲರನ್ನು ಕೈ ಚಾಚಿ ಕರೆಯುತ್ತಿದೆ. ಗೋವಾದಲ್ಲಿ ಸೋಂಕಿನ ದರ ಶೇ 6ಕ್ಕಿಂತ ಕಡಿಮೆಯಾದ ಹಿನ್ನಲೆ ಹೊರ ರಾಜ್ಯದವರಿಗೆ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ಆದರೆ, ರಾಜ್ಯಕ್ಕೆ ಭೇಟಿ ನೀಡುವವರು ಎರಡು ಡೋಸ್ ಕೋವಿಡ್ ಲಸಿಕೆಯನ್ನು ಕಡ್ಡಾಯವಾಗಿ ಪಡೆದಿರಬೇಕು ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದಾರೆ. ರಾಜ್ಯಕ್ಕೆ ಭೇಟಿ ನೀಡುವ ಪ್ರವಾಸಿಗರು, ಉದ್ಯಮಿಗಳು ಅಥವಾ ಯಾರೇ ಆಗಲಿ ಎರಡು ಡೋಸ್ ಲಸಿಕೆ ಪಡೆದಿರುವ ಪ್ರಮಾಣಪತ್ರವನ್ನು ಹಾಜರು ಪಡಿಸಬೇಕು ಎಂದಿದ್ದಾರೆ.
ಎರಡು ಡೋಸ್ ಲಸಿಕೆ ಪ್ರಮಾಣ ಪತ್ರವನ್ನು ಹಾಜರು ಪಡಿಸುವ ಹಿನ್ನಲೆ ಕೋವಿಡ್ ನೆಗೆಟಿವ್ ಪ್ರಮಾಣ ಪತ್ರ ತೋರಿಸುವ ಅವಶ್ಯಕತೆ ಇಲ್ಲ ಎಂದಿದ್ದಾರೆ.
ಗೋವಾದ ಪ್ರಮುಖ ರೈಲ್ವೆ ನಿಲ್ದಾಣಗಳಲ್ಲಿ ಪರೀಕ್ಷಾ ಸೌಲಭ್ಯಗಳನ್ನು ಕೂಡ ಕಲ್ಪಿಸಲು ರಾಜ್ಯ ಸರ್ಕಾರ ಚಿಂತಿಸುತ್ತಿದೆ, ಈ ನಿಟ್ಟಿನಲ್ಲಿ ಖಾಸಗಿ ಪ್ರಯೋಗಾಲಯಗಳೊಂದಿಗೂ ಕೂಡ ಮಾತುಕತೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು
ಗೋವಾದಲ್ಲಿ ಪಾಸಿಟಿವಿಟಿ ಪ್ರಮಾಣ 6ರಷ್ಟು ಇಳಿಕೆ ಕಂಡಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಶೇ. 5ರಷ್ಟು ಇಳಿಕೆ ಕಾಣಲಿದೆ. ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಸಂಪೂರ್ಣ ನಿಯಂತ್ರಣ ಬಂದಿದೆ. ಇದೇ ವೇಳೆ ಸೋಂಕಿನ ಚೇತರಿಗೆ ಪ್ರಮಾಣವು ಹೆಚ್ಚುತ್ತಿದೆ, ರಾಜ್ಯದಲ್ಲಿ ಜುಲೈ ಅಂತ್ಯದ ವೇಳೆ ರಾಜ್ಯದಲ್ಲಿ ಶೇ 100ರಷ್ಟು ಮೊದಲ ಡೋಸ್ ಕೋವಿಡ್ ಲಸಿಕೆ ನೀಡಲಾಗುವುದು ಎಂದರು
ಇದನ್ನು ಓದಿ: ರಾಜ್ಯದಲ್ಲಿ ಮತ್ತಷ್ಟು ಇಳಿಕೆ ಕಂಡ ಸೋಂಕು; 2ಕ್ಕಿಂತಲೂ ಕಡಿಮೆ ಇದೆ ಪಾಸಿಟಿವಿಟಿ ದರ
ಇನ್ನು ಗೋವಾದ ನೆರೆಯ ರಾಜ್ಯಗಳಾದ ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ಕೋವಿಡ್ ವೈರಸ್ ಕಂಡು ಬಂದಿದ್ದು, ಆತಂಕ ಮೂಡಿಸಿದೆ. ಇದೇ ಹಿನ್ನಲೆ ಜುಲೈ 5ರವರೆಗೆ ರಾಜ್ಯದಲ್ಲಿ ಕರ್ಫ್ಯೂ ವಿಸ್ತರಣೆ ಮಾಡಲಾಗಿದೆ ಎಂದು ಘೋಷಿಸಿದ್ದಾರೆ. ಅಲ್ಲದೇ ಗಡಿಯಲ್ಲಿ ಕೂಡ ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಒಂದು ವೇಳೆ ಗೋವಾಗೆ ಪ್ರವೇಶಿಸಿದ ವ್ಯಕ್ತಿಯಲ್ಲಿ ಸೋಂಕು ಕಂಡು ಬಂದರೆ ಅವರನ್ನು ಐಸೋಲೇಷನ್ಗೆ ಒಳಪಡಿಸಲಾಗುವುದು ಇಲ್ಲ. ಆಸ್ಪತ್ರೆಗೆ ದಾಖಲಿಸಲಾಗುವುದು ಎಂದು ಅವರು ತಿಳಿಸಿದರು.
ರಾಜ್ಯದಲ್ಲಿ ಸಂಪೂರ್ಣ ಲಾಕ್ಡೌನ್ನಿಂದಾಗಿ ಪ್ರವಾಸೋದ್ಯಮದ ಮೇಲೆ ನಷ್ಟ ಉಂಟಾಗಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಮುಖ್ಯಮಂತ್ರಿ ಕಳೆದ ವಾರ ನಿರ್ಬಂಧಗಳನ್ನು ಸಡಿಲಿಸಲಾಗಿತ್ತು. ಅಲ್ಲದೇ, ದಿನಕ ಬೆಳಿಗ್ಗೆ 7 ರಿಂದ ಮಧ್ಯಾಹ್ನ 3 ರವರೆಗೆ ಎಲ್ಲಾ ಮಳಿಗೆಗಳು ಮತ್ತು ಅಂಗಡಿಗಳು ಕಾರ್ಯನಿರ್ವಹಿಸಬಹುದು ಎಂದು ಹೇಳಿದ್ದಾರೆ.
ಇದನ್ನು ಓದಿ: ಸರ್ಕಾರಿ ಶಿಕ್ಷಕರಿಗೆ ಗುಡ್ ನ್ಯೂಸ್: ಬುಧವಾರದಿಂದಲೇ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ
ಗೋವಾ ಪ್ರವೇಶಿಸುವ ಜನರಿಗೆ ಈ ನಿಯಮಗಳಿಂದ ಸ್ವಲ್ಪ ಅನಾನುಕೂಲತೆ ಉಂಟಾಗುತ್ತದೆ. ಆದರೆ ಯಾವುದೇ ಆಯ್ಕೆಗಳಿಲ್ಲ. COVID-19 ವಿರುದ್ಧ ಜನರ ಸುರಕ್ಷಿತವಾಗಿಡಲು ಈ ಕ್ರಮವನ್ನು ಅನುಸರಿಸುವುದು ಅನಿವಾರ್ಯವಾಗಿದೆ. ಈ ಹಿನ್ನಲೆ ಎಲ್ಲರು ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಿದೆ ಎಂದಿದ್ದಾರೆ.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್ಡೌನ್ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ