ಬಿಪಿಎಲ್ ಕಾರ್ಡುದಾರರಿಗೆ ಉಚಿತವಾಗಿ ಕೊರೋನಾ ಚಿಕಿತ್ಸೆ ನೀಡಿ - ಪ್ರಧಾನಿ ಮೋದಿಗೆ ಜಿ.ಸಿ. ಚಂದ್ರಶೇಖರ್ ಪತ್ರ

ಕರ್ನಾಟಕ ಸರ್ಕಾರ ಬಡವರಿಗೆ ಉಚಿತವಾಗಿ ಚಿಕಿತ್ಸೆ ನೀಡಲೆಂದು 'ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್' ರಚಿಸಿದೆ ಎಂಬುದನ್ನು ಪತ್ರದಲ್ಲಿ ಉಲ್ಲೇಖಿಸಿರುವ ಜಿ.ಸಿ. ಚಂದ್ರಶೇಖರ್, ಇದೇ ರೀತಿ ದೇಶವ್ಯಾಪ್ತಿ ಬಿಪಿಎಲ್ ಕಾರ್ಡ್ ಹೊಂದಿರುವ ಎಲ್ಲರಿಗೂ ಉಚಿತ ಚಿಕಿತ್ಸೆ ನೀಡಬೇಕು ಎಂದು ಜಿ.ಸಿ. ಚಂದ್ರಶೇಖರ್ ಹೇಳಿದ್ದಾರೆ.

ನರೇಂದ್ರ ಮೋದಿ

ನರೇಂದ್ರ ಮೋದಿ

  • Share this:
ನವದೆಹಲಿ(ಜೂ.26): ಕೊರೋನಾ ರೋಗಕ್ಕೆ ತುತ್ತಾಗುವ ವಲಸಿಗರು, ಕಾರ್ಮಿಕರು, ಅಸಂಘಟಿತ ಕಾರ್ಮಿಕರು ಒಳಗೊಂಡಂತೆ ಎಲ್ಲಾ ರೀತಿಯ ಬಿಪಿಎಲ್ ಕಾರ್ಡ್​ ಹೊಂದಿರುವ ಬಡವರಿಗೆ ಉಚಿತವಾಗಿ ಚಿಕಿತ್ಸೆ ನೀಡುವಂತೆ  ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್, ಬಡವರಿಗೆ ಉಚಿತವಾಗಿ ಚಿಕಿತ್ಸೆ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದು ಸಲಹೆ ನೀಡಿದ್ದೆ. ಕರ್ನಾಟಕ ಸರ್ಕಾರ ತಮ್ಮ ಸಲಹೆಯನ್ನು ಒಪ್ಪಿ ಉಚಿತ ಚಿಕಿತ್ಸೆ ನೀಡಲು ಮುಂದಾಗಿದೆ. ಕೇಂದ್ರ ಸರ್ಕಾರ ಕರ್ನಾಟಕದ ಮಾದರಿಯನ್ನು ಅಳವಡಿಸಿಕೊಂಡು ದೇಶಾದ್ಯಂತ ಬಡವರಿಗೆ ಉಚಿತವಾಗಿ ಸಿಗುವಂತೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಕರ್ನಾಟಕ ಸರ್ಕಾರ ಬಡವರಿಗೆ ಉಚಿತವಾಗಿ ಚಿಕಿತ್ಸೆ ನೀಡಲೆಂದು 'ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್' ರಚಿಸಿದೆ ಎಂಬುದನ್ನು ಪತ್ರದಲ್ಲಿ ಉಲ್ಲೇಖಿಸಿರುವ ಜಿ.ಸಿ. ಚಂದ್ರಶೇಖರ್, ಇದೇ ರೀತಿ ದೇಶವ್ಯಾಪ್ತಿ ಬಿಪಿಎಲ್ ಕಾರ್ಡ್ ಹೊಂದಿರುವ ಎಲ್ಲರಿಗೂ ಉಚಿತ ಚಿಕಿತ್ಸೆ ನೀಡಬೇಕು ಎಂದು ಜಿ.ಸಿ. ಚಂದ್ರಶೇಖರ್ ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಶಾಸಕರ ಸಭೆ ಮುಕ್ತಾಯ: ಲಾಕ್​ಡೌನ್​ ಮತ್ತೆ ಮಾಡಲ್ಲ ಎಂದು ಸರ್ಕಾರ ಅಧಿಕೃತ ಸ್ಪಷ್ಟನೆ
First published: