ಭಾರತದಲ್ಲಿ 151ಕ್ಕೇರಿದ ಕೊರೋನಾ ಸೋಂಕಿತರ ಸಂಖ್ಯೆ; ಜಾಗತಿಕವಾಗಿ 2 ಲಕ್ಷ ಜನರಿಗೆ ಕೋವಿಡ್​​-19

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  ನವದೆಹಲಿ(ಮಾ.18): ಜಾಗತಿಕವಾಗಿ ಕೊರೋನಾ ಪೀಡಿತರ ಸಂಖ್ಯೆ ಎರಡು ಲಕ್ಷ ದಾಟಿದೆ. ಇಲ್ಲಿಯವರೆಗೂ 2,03,614 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಈ ಪೈಕಿ 8,226 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಕಳೆದ 24 ಗಂಟೆಗಳಲ್ಲಿ ಇಟಲಿಯೊಂದರಲ್ಲೇ 345 ಜನ ಈ ಕೋವಿಡ್​​-19 ಸೋಂಕಿನಿಂದ ಮೃತರಾಗಿದ್ದಾರೆ. ಇತ್ತ ಚೀನಾದಲ್ಲಿ ಸಾವಿಗೀಡಾದವರ ಸಂಖ್ಯೆ ಕಡಿಮೆಯಾಗುತ್ತಿದ್ದರೆ, ಇಟಲಿಯಲ್ಲಿ ಮಾತ್ರ ಏರಿಕೆಯಾಗುತ್ತಲೇ ಇದೆ. 

  ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 151ಕ್ಕೆ ಏರಿಕೆಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ 1,200 ಜನರನ್ನು ಗೃಹಬಂಧನದಲ್ಲಿರಿಸಲಾಗಿದೆ. ಇಂದು ಒಂದೇ ದಿನ 10 ಹೊಸ ಕೊರೋನಾ ಪ್ರಕರಣ ಪತ್ತೆಯಾಗಿವೆ.

  ಪುಣೆಯಲ್ಲಿ ಹೊಸದಾಗಿ ಕೊರೋನಾ ವೈರಸ್ ಪ್ರಕರಣ ಪತ್ತೆಯಾಗಿದೆ. ಫ್ರಾನ್ಸ್​ನಿಂದ ಬಂದಿದ್ದ ವ್ಯಕ್ತಿಯಲ್ಲಿ ಕೊರೋನಾ ವೈರಸ್ ಕಂಡುಬಂದಿದೆ. ಇಂಗ್ಲೆಂಡ್​ನಿಂದ ಭಾರತಕ್ಕೆ ವಾಪಾಸಾದ ಪಶ್ಚಿಮ ಬಂಗಾಳದ 18 ವರ್ಷದ ಯುವಕನಲ್ಲಿ ಕೊರೋನಾ ವೈರಸ್ ಪತ್ತೆಯಾಗಿದೆ. ಪಶ್ಚಿಮ ಬಂಗಾಳದಲ್ಲಿ ಇದು ಮೊದಲ ಪ್ರಕರಣವಾಗಿದೆ. ಸೋಂಕಿತ ಯುವಕನನ್ನು ಆಸ್ಪತ್ರೆಯಲ್ಲಿ ಪ್ರತ್ಯೇಕ ಕೊಠಡಿಯಲ್ಲಿರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಯುವಕನ ರಕ್ತದ ಮಾದರಿ ಹಾಗೂ ಗಂಟಲಿನ ದ್ರವವನ್ನು ಸಂಗ್ರಹಿಸಿದ್ದ ವೈದ್ಯರು ಪರೀಕ್ಷೆ ನಡೆಸಿದಾಗ ಕೊರೋನಾ ಸೋಂಕು ತಗುಲಿರುವುದು ಖಚಿತವಾಗಿದೆ.

  ಇದನ್ನೂ ಓದಿ: ಕೊರೋನಾ ಎಫೆಕ್ಟ್​: ಶೇ. 60ರಷ್ಟು ಟಿಕೆಟ್ ಕ್ಯಾನ್ಸಲ್​​ ಮಾಡಿದ​​ ರೈಲ್ವೆ ಇಲಾಖೆ

  ಇದೇ ಮೊದಲ ಬಾರಿಗೆ ಭಾರತೀಯ ಸೈನಿಕನಲ್ಲೂ ಕೊರೋನಾ ಸೋಂಕು ಪತ್ತೆಯಾಗಿದೆ. ಲಡಾಕ್​ನಲ್ಲಿರುವ ಭಾರತೀಯ ಸೈನಿಕನಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಆ ಸೈನಿಕನ ಅಪ್ಪ ಇರಾನ್​ನಿಂದ ಇತ್ತೀಚೆಗಷ್ಟೆ ವಾಪಾಸಾಗಿದ್ದರು. ಅವರಿಗೂ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಆ ಸೈನಿಕನ ತಂಗಿ ಮತ್ತು ಹೆಂಡತಿಯನ್ನೂ ಗೃಹಬಂಧನದಲ್ಲಿ ಇರಿಸಲಾಗಿದೆ. ಆ ಸೈನಿಕನ ಜೊತೆ ನಿಕಟ ಸಂಪರ್ಕ ಹೊಂದಿದ್ದ 10 ಸೈನಿಕರನ್ನು ಐಸೋಲೇಷನ್ ವಾರ್ಡ್​ನಲ್ಲಿ ಇರಿಸಲಾಗಿದೆ.

  ಭಾರತದಲ್ಲಿ ಈಗಾಗಲೇ ಮೂರು ಜನ ಕೊರೋನಾ ವೈರಸ್​ಗೆ ಬಲಿಯಾಗಿದ್ದಾರೆ. ಕರ್ನಾಟಕದ ಕಲಬುರ್ಗಿ, ದೆಹಲಿ ಮತ್ತು ಮುಂಬೈನಲ್ಲಿ ಕೊರೋನಾದಿಂದ ಸಾವನ್ನಪ್ಪಿದ್ದಾರೆ. ದಿನದಿಂದ ದಿನಕ್ಕೆ ಸೋಂಕಿತರ ಪ್ರಮಾಣ ಹೆಚ್ಚಳವಾಗುತ್ತಿದೆ. ಭಾರತದಲ್ಲಿ ಕರ್ನಾಟಕ, ಕೇರಳ, ಮಹಾರಾಷ್ಟ್ರ, ತೆಲಂಗಾಣ, ದೆಹಲಿ ಸೇರಿದಂತೆ ಹಲವು ಭಾಗಗಳಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ.

  !function(e,i,n,s){var t="InfogramEmbeds",d=e.getElementsByTagName("script")[0];if(window[t]&&window[t].initialized)window[t].process&&window[t].process();else if(!e.getElementById(n)){var o=e.createElement("script");o.async=1,o.id=n,o.src="https://e.infogram.com/js/dist/embed-loader-min.js",d.parentNode.insertBefore(o,d)}}(document,0,"infogram-async");

   
  Loading...

   

  First published: