news18-kannada Updated:April 24, 2020, 7:34 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಲಾಕ್ಡೌನ್ನಿಂದಾಗಿ ನಗರಗಳಲ್ಲಿ ಸಿಲುಕಿಕೊಂಡು ಪರಿತಪಿಸುತ್ತಿದ್ದ ಕೂಲಿ ಕಾರ್ಮಿಕರನ್ನು ಅವರವರ ಊರುಗಳಿಗೆ ಕಳುಹಿಸಿಕೊಡಲು ಸರ್ಕಾರ ನಿರ್ಧರಿಸುವ ಮೂಲಕ ಬಡ ಕಾರ್ಮಿಕರಿಗೆ ಸಿಹಿ ಸುದ್ದಿ ನೀಡಿದೆ.
ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಿದ್ದಾರೆ. ವಲಸೆ ಕಾರ್ಮಿಕರು, ಕೂಲಿ ಕಾರ್ಮಿಕರನ್ನು ಅಂತರ ರಾಜ್ಯದೊಳಗೆ ಸ್ಥಳಾಂತರಿಸಲು ಅವಕಾಶ ಇದೆ. ಹೀಗಾಗಿ ಅವರನ್ನು ಕೆಎಸ್ಆರ್ಟಿಸಿ ಬಸ್ಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಕಳುಹಿಸಿಕೊಡಿ ಎಂದು ಮುಖ್ಯ ಕಾರ್ಯದರ್ಶಿ ಆದೇಶದಲ್ಲಿ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಏ. 19 ರಂದು ಹೊರಡಿಸಿರುವ ಆದೇಶದಲ್ಲಿ ಅಂತರರಾಜ್ಯ ಕಾರ್ಮಿಕರನ್ನು ರಾಜ್ಯದೊಳಗೆ ಸ್ಥಳಾಂತರಿಸಲು ಅನುಮತಿ ನೀಡಿದೆ. ವಲಸೆ ಹಾಗೂ ಕೂಲಿ ಕಾರ್ಮಿಕರನ್ನು ಅವರವರ ಗ್ರಾಮ, ಊರುಗಳಿಗೆ ಕಳುಹಿಸಿಕೊಡಿ. ಕೆಲ ಕೂಲಿ ಕಾರ್ಮಿಕರು ತಮ್ಮ ಹಳ್ಳಿಗಳಲ್ಲಿ ಕೃಷಿ ಚಟುವಟಿಕೆಗಳನ್ನು ಮಾಡಲು ಹಾಗೂ ಆರ್ಥಿಕ ಚಟುವಟಿಕೆ ಮಾಡಲು ಬಯಸಿದ್ದಾರೆ. ಹೀಗಾಗಿ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಶೇ. 40ರಷ್ಟು ಭರ್ತಿ ಮಾಡಿ, ಸ್ಯಾನಿಟೈಸರ್ , ಮಾಸ್ಕ್, ಗ್ಲೌಸ್ ಗಳನ್ನು ಕೊಟ್ಟು ಕಾರ್ಮಿಕರನ್ನು ಕಳುಹಿಸಿಕೊಡಿ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನು ಓದಿ: ಕೋವಿಡ್-19: ರಾಜ್ಯದಲ್ಲಿ 24 ಗಂಟೆಯಲ್ಲಿ 29 ಪ್ರಕರಣ; ಬೆಂಗಳೂರಿನದ್ದೇ ಅತಿ ಹೆಚ್ಚು
First published:
April 24, 2020, 7:34 PM IST