ಕೊರೋನಾ ಪರಿಣಾಮ | ನಾಳೆಯಿಂದ ಮಾ.28ರವರೆಗೆ ಸರ್ಕಾರಿ, ಖಾಸಗಿ ಅನುದಾನಿತ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ

ವಿಶ್ವದೆಲ್ಲೆಡೆ ಆತಂಕ ಮೂಡಿಸಿರುವ ಮಾರಣಾಂತಿಕ ಕೊರೋನಾಗೆ ರಾಜ್ಯದಲ್ಲಿ ಈಗಾಗಲೇ 6 ಜನ ಸೋಂಕಿತರಾಗಿದ್ದು, ಕಲಬುರ್ಗಿ ವೃದ್ಧ ಸಾವನ್ನಪ್ಪುವ ಮೂಲಕ ರಾಜ್ಯದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ವೈದ್ಯರು ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಿಎಂ ಬಿಎಸ್​ ಯಡಿಯೂರಪ್ಪ ಸಭೆ ನಡೆಸಿದ್ದಾರೆ.

ಪ್ರಾತಿನಿಧಿಕ ಚಿತ್ರ.

ಪ್ರಾತಿನಿಧಿಕ ಚಿತ್ರ.

  • Share this:
    ಬೆಂಗಳೂರು: ಮಾರಕ ಕೊರೋನಾ ವೈರಸ್ ವ್ಯಾಪಕವಾಗಿ ಎಲ್ಲೆಡೆ ಹರಡುತ್ತಿರುವ ಪರಿಣಾಮ ಸರ್ಕಾರ ಹಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ. ಮುನ್ನೆಚ್ಚರಿಕೆಯಾಗಿ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕಾಲೇಜು ಶಿಕ್ಷಣ ಇಲಾಖೆ ರಜೆ ಘೋಷಣೆ ಮಾಡಿದೆ. 

    ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾರ್ಚ್ 14 ರಿಂದ ಮಾರ್ಚ್ 28ವರೆಗೆ 15 ದಿನಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಆದರೆ ಎಂದಿನಂತೆ ಕಾಲೇಜು ಕಚೇರಿಗಳಲ್ಲಿ ಕೆಲಸ ಕಾರ್ಯಗಳು ನಿರ್ವಹಿಸಲಿವೆ ಎಂದು ಕಾಲೇಜು ಶಿಕ್ಷಣ ಇಲಾಖೆ ಆದೇಶದಲ್ಲಿ ತಿಳಿಸಿದೆ.

    ವಿಶ್ವದೆಲ್ಲೆಡೆ ಆತಂಕ ಮೂಡಿಸಿರುವ ಮಾರಣಾಂತಿಕ ಕೊರೋನಾಗೆ ರಾಜ್ಯದಲ್ಲಿ ಈಗಾಗಲೇ 6 ಜನ ಸೋಂಕಿತರಾಗಿದ್ದು, ಕಲಬುರ್ಗಿ ವೃದ್ಧ ಸಾವನ್ನಪ್ಪುವ ಮೂಲಕ ರಾಜ್ಯದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ವೈದ್ಯರು ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಿಎಂ ಬಿಎಸ್​ ಯಡಿಯೂರಪ್ಪ ಸಭೆ ನಡೆಸಿದ್ದರು. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬಿಎಸ್​ವೈ, ಮಹಾಮಾರಿ ಕೊರೋನಾ ವೈರಸ್ ​ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಜನಸಂದಣಿ ಸೇರುವ ಮಾಲ್​ ಹಾಗೂ ಥಿಯೇಟರ್​ಗಳನ್ನು ಒಂದು ವಾರದ ಮಟ್ಟಿಗೆ ಬಂದ್​ ಮಾಡುವಂತೆ ಆದೇಶ ಮಾಡಲಾಗಿದೆ ಎಂದು ತಿಳಿಸಿದರು.

    ಇದನ್ನು ಓದಿ: ರಾಜ್ಯದಲ್ಲಿ ಕೊರೋನಾ ಎಮರ್ಜೆನ್ಸಿ: ಬಹುತೇಕ ಸಾರ್ವಜನಿಕ ವಲಯಕ್ಕೆ ನಿಷೇಧ, ಏನಿರತ್ತೆ? ಏನಿರಲ್ಲ?

    ವೈದ್ಯಕೀಯ ನುರಿತರ ಅಭಿಪ್ರಾಯ ಪಡೆದು ಈ ನಿರ್ಣಯ ಕೈಗೊಳ್ಳಲಾಗಿದ್ದು, ಒಂದು ವಾರದ ಬಳಿಕ ಪರಿಸ್ಥಿತಿ ನೋಡಿಕೊಂಡು ಮುಂದಿನ ಕ್ರಮಕೈಗೊಳ್ಳಲಾಗುವುದು. ಸಾರ್ವಜನಿಕರು ಸಾಧ್ಯವಾದರೆ ಪ್ರವಾಸ ರದ್ದು ಮಾಡುವುದು ಒಳ್ಳೆಯದು ಎಂದ ಬಿಎಸ್​ವೈ, ಒಂದರಿಂದ ಆರನೇ ತರಗತಿ ವಿದ್ಯಾರ್ಥಿಗಳಿಗೆ ಯಾವುದೇ ಪರೀಕ್ಷೆ ಇರುವುದಿಲ್ಲ. ಆದರೆ, ಎಸ್​ಎಸ್​ಎಲ್​ಸಿ, ಪಿಯುಸಿ ಪರೀಕ್ಷೆಗಳು ಎಂದಿನಂತೆ ನಡೆಯಲಿದೆ. ಜೊತೆಗೆ ಮಕ್ಕಳಿಗೆ ಬೇಸಿಗೆ ಶಿಬಿರ ನಡೆಸದಂತೆ ಕೂಡ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
    First published: