ಅಗತ್ಯ ವಸ್ತುಗಳ ಸರಬರಾಜಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ನೇಮಕ

ಹೊರ ರಾಜ್ಯಗಳಿಂದ ಬರುವ ಅಗತ್ಯ ವಸ್ತುಗಳಿಗೆ ಅಡ್ಡಿಯಾಗದಂತೆ ನೋಡಿಕೊಳ್ಳಬೇಕು‌.  ಹಾಗೂ ಕೈಗೊಂಡಿರುವ ಕ್ರಮಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ವರದಿ ನೀಡುವಂತೆ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರಿಗೆ ಸರ್ಕಾರ ಸೂಚನೆ ನೀಡಿದೆ.

ಐಪಿಎಸ್​ ಅಧಿಕಾರಿ ಅಲೋಕ್ ಕುಮಾರ್

ಐಪಿಎಸ್​ ಅಧಿಕಾರಿ ಅಲೋಕ್ ಕುಮಾರ್

 • Share this:
  ಬೆಂಗಳೂರು: ಕೊರೋನಾ ವೈರಸ್ ನಿಯಂತ್ರಿಸುವ ಸಲುವಾಗಿ ಇಡೀ ದೇಶವನ್ನು ಏಪ್ರಿಲ್ 14ರವರೆಗೆ ಲಾಕ್​ಡೌನ್ ಮಾಡಲಾಗಿದೆ. ಈ ವೇಳೆ ಸಾರ್ವಜನಿಕರಿಗೆ ಬೇಕಾಗುವ ಅಗತ್ಯ ವಸ್ತುಗಳ ಸರಬರಾಜಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಹಿರಿಯ ಐಪಿಎಸ್ ಅಧಿಕಾರಿಯನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

  ಕೆಎಸ್ಆರ್​ಪಿ ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ಅಗತ್ಯ ವಸ್ತುಗಳ ಸರಬರಾಜಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ನೇಮಕ ಮಾಡಲಾಗಿದೆ.

  ಕೊರೋನಾ ಭೀತಿಯಿಂದ ಇಡೀ ದೇಶ ಲಾಕ್ ಡೌನ್ ಮಾಡಲಾಗಿದೆ. ಈ ವೇಳೆ  ಜನಸಾಮಾನ್ಯರಿಗೆ ಅಗತ್ಯ ವಸ್ತುಗಳು ತಲುಪುವಂತಾಗಬೇಕು. ದಿನಸಿ ಪದಾರ್ಥಗಳು, ಹಣ್ಣು ತರಕಾರಿ, ಗ್ಯಾಸ್ ಹಾಗೂ ಮೆಡಿಸಿನ್ ಪೂರೈಕೆಗೆ ತೊಂದರೆಯಾಗದಂತೆ ನೋಡಿಕೊಳ್ಳುವುದು. ಬೆಂಗಳೂರು ಸೇರಿದಂತೆ ಇಡೀ ರಾಜ್ಯಕ್ಕೆ ಸಮರ್ಪಕವಾಗಿ ಅಗತ್ಯ ವಸ್ತುಗಳು ತಲುಪುವಂತೆ ನೋಡಿಕೊಳ್ಳುವ ಉಸ್ತುವಾರಿಯನ್ನು ಅಲೋಕ್​ ಕುಮಾರ್​ ಅವರಿಗೆ ಸರ್ಕಾರ ವಹಿಸಿದೆ.

  ಹೊರ ರಾಜ್ಯಗಳಿಂದ ಬರುವ ಅಗತ್ಯ ವಸ್ತುಗಳಿಗೆ ಅಡ್ಡಿಯಾಗದಂತೆ ನೋಡಿಕೊಳ್ಳಬೇಕು‌.  ಹಾಗೂ ಕೈಗೊಂಡಿರುವ ಕ್ರಮಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ವರದಿ ನೀಡುವಂತೆ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರಿಗೆ ಸರ್ಕಾರ ಸೂಚನೆ ನೀಡಿದೆ.

  ಇದನ್ನು ಓದಿ: ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 834ಕ್ಕೆ ಏರಿಕೆ; ನಿನ್ನೆ ಒಂದೇ ದಿನ 144 ಹೊಸ ಕೇಸ್​ ಪತ್ತೆ
  First published: