• ಹೋಂ
  • »
  • ನ್ಯೂಸ್
  • »
  • Corona
  • »
  • Ganesha Festival: ಸಾರ್ವಜನಿಕವಾಗಿ ಗಣೇಶ ಹಬ್ಬ ಆಚರಣೆಗೆ ಸಿಗುತ್ತಾ ಅನುಮತಿ? ನಾಳೆ ಹೊರಬೀಳಲಿದೆ ಸ್ಪಷ್ಟ ಚಿತ್ರಣ

Ganesha Festival: ಸಾರ್ವಜನಿಕವಾಗಿ ಗಣೇಶ ಹಬ್ಬ ಆಚರಣೆಗೆ ಸಿಗುತ್ತಾ ಅನುಮತಿ? ನಾಳೆ ಹೊರಬೀಳಲಿದೆ ಸ್ಪಷ್ಟ ಚಿತ್ರಣ

ಗಣೇಶನ ವಿಗ್ರಹ

ಗಣೇಶನ ವಿಗ್ರಹ

ಗಡಿ ಜಿಲ್ಲೆಗಳಲ್ಲಿನ ಕೋವಿಡ್ ಸ್ಥಿತಿಗತಿ ಬಗ್ಗೆ ಚರ್ಚೆ ನಡೆಸಲಾಗಿದೆ. ಆದರೆ ಹಬ್ಬ ಆಚರಣೆ ಬಗ್ಗೆ ಡಿಸಿಗಳ ಜೊತೆ ಚರ್ಚೆ ಮಾಡಿಲ್ಲ. ಆದರೆ ರಾಜ್ಯದಲ್ಲಿ ಒಟ್ಟಾರೆ ಗಣೇಶ ಹಬ್ಬವನ್ನು ಯಾವ ರೀತಿ ಆಚರಣೆ ಮಾಡಬೇಕು ಎಂದು ನಾಳೆ ಅಂತಿಮವಾದ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ತಿಳಿಸಿದರು.

  • Share this:

ಬೆಂಗಳೂರು: ಸಾರ್ವಜನಿಕವಾಗಿ ಗಣೇಶ ಹಬ್ಬ ಆಚರಣೆಗೆ (Ganesha Festival Celebration) ಅವಕಾಶ ಕೊಡಬೇಕಾ ಬೇಡ್ವಾ ಎಂಬುದರ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದ್ದು, ನಾಳೆ ಈ ಬಗ್ಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ. ಹೌದು ನಾಳೆ ಗೃಹ ಕಚೇರಿ ಕೃಷ್ಣಾದಲ್ಲಿ ಮಧ್ಯಾಹ್ನ 1ಕ್ಕೆ ತಜ್ಞರು, ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆ ಸಿಎಂ (CM Basavaraja Bommai) ಮಹತ್ವದ ಸಮಾಲೋಚನೆ ನಡೆಸಲಿದ್ದಾರೆ. ಸಾರ್ವಜನಿಕವಾಗಿ ಗಣೇಶೋತ್ಸವಕ್ಕೆ ಅವಕಾಶ ಬೇಕಾ..? ಬೇಡ್ವಾ ಎಂಬುದರ ಬಗ್ಗೆ ಸಲಹೆ ಪಡೆದು, ಮಹತ್ವದ ನಿರ್ಣಯ ಪ್ರಕಟ ಮಾಡಲಿದ್ದಾರೆ.


ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ವಿನಾಯಿತಿ ಸಿಗುವ ನಿರೀಕ್ಷೆ


ಇನ್ನೂ ಕಳೆದ ಬಾರಿಯ ಆಚರಣೆಗಿಂತ ಈ ಬಾರಿ ಹೆಚ್ಚು ವಿನಾಯಿತಿ ನೀಡುವ ನಿರೀಕ್ಷೆ ಇದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗೆ ಮನವಿ ಮಾಡಲಾಗಿದ್ದು, ಕೋವಿಡ್ ಕ್ರಮಗಳೊಂದಿಗೆ ಹೆಚ್ಚು ವಿನಾಯಿತಿ ನೀಡುವ ವಿಶ್ವಾಸ ಇದೆ ಎಂದು ಗೃಹ ಕಚೇರಿ ಕೃಷ್ಣಾದಲ್ಲಿ ತಿಳಿಸಿದ್ದಾರೆ.


ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಿ


ಇಂದು ಗಡಿ ಜಿಲ್ಲೆಗಳಾದ ಚಾಮರಾಜನಗರ, ಹಾಸನ, ಉಡುಪಿ, ದಕ್ಷಿಣ ಕನ್ನಡ, ಕೊಡಗು ಡಿಸಿಗಳು, ಎಸ್ಪಿಗಳ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ವೀಡಿಯೋ ಕಾನ್ಪೆರೆನ್ಸ್ ಮೂಲಕ ಸಭೆ ನಡೆಸಿದ್ರು. ಸಭೆಯಲ್ಲಿ ಜಿಲ್ಲೆಗಳ ಕೋವಿಡ್ ಪರಿಸ್ಥಿತಿ ಬಗ್ಗೆ ಅವಲೋಕಿಸಿದ ಸಿಎಂ, ಈ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದರು. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಗಳ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲೆಯ ಪಾಸಿಟಿವಿಟಿ ದರ, ಮರಣ ಪ್ರಮಾಣ, ಆಸ್ಪತ್ರೆ ದಾಖಲಾತಿ ವಿವರ, ಲಸಿಕೆ ಕಾರ್ಯಕ್ರಮದ ಪ್ರಗತಿಯ ಮಾಹಿತಿ ಪಡೆದರು.


ಪರೀಕ್ಷೆ ಪ್ರಮಾಣ ಹೆಚ್ಚಿಸುವ ಮೂಲಕ ತಮ್ಮ ಜಿಲ್ಲೆಯ ಪರಿಸ್ಥಿತಿ ಕುರಿತು ತೀವ್ರ ನಿಗಾ ವಹಿಸುವಂತೆ ಅವರು ಜಿಲ್ಲಾಧಿಕಾರಿಗಳಿಗೆ ನಿರ್ದಶನ ನೀಡಿದರು. ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗ ಮತ್ತು ನಗರ ಪ್ರದೇಶದಲ್ಲಿ ಪರೀಕ್ಷೆ ಪ್ರಮಾಣ ಹಾಗೂ ಲಸಿಕೆಯ ಪ್ರಮಾಣ ಹೆಚ್ಚಿಸಲು ಸೂಚಿಸಿದರು. ಈ ಎಲ್ಲ ಜಿಲ್ಲೆಗಳಲ್ಲಿ ಲಸಿಕೆ ಅಭಿಯಾನ ತೀವ್ರಗೊಳಿಸಬೇಕು. ಶೇ. 35 ರಷ್ಟು ಲಸಿಕೆಯ ಪ್ರಮಾಣ ಹೆಚ್ಚಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ಗಡಿಯಿಂದ 20 ಕಿ.ಮೀ. ವ್ಯಾಪ್ತಿಯ ಗ್ರಾಮಗಳಲ್ಲಿ ಶೇ. 100 ರಷ್ಟು ಲಸಿಕೆ ಹಾಕಿಸಬೇಕು ಎಂದು ತಿಳಿಸಿದರು.


ಇದನ್ನು ಓದಿ: Ganesha Festival: ಗಣೇಶ ಹಬ್ಬದ ಆಚರಣೆಗೆ ಓಕೆ.. ಆದ್ರೆ ಷರತ್ತು ಇರುತ್ತೆ ಜೋಕೆ..!


ಇನ್ನೂ ಈ ಜಿಲ್ಲೆಗಳಲ್ಲಿ ಗಣೇಶ ಹಬ್ಬ ಆಚರಣೆ ಸಂಬಂಧವೂ ಅಗತ್ಯ ಮಾಹಿತಿಯನ್ನು ಸಿಎಂ ಬೊಮ್ಮಾಯಿ ಅವರು ಪಡೆದರು. ಸಭೆ ನಂತರ ಮಾತಾಡಿದ ಸಿಎಂ ಬೊಮ್ಮಾಯಿ, ಈ ಜಿಲ್ಲೆಗಳಲ್ಲಿನ ಕೋವಿಡ್ ಸ್ಥಿತಿಗತಿ ಬಗ್ಗೆ ಚರ್ಚೆ ನಡೆಸಲಾಗಿದೆ. ಆದರೆ ಹಬ್ಬ ಆಚರಣೆ ಬಗ್ಗೆ ಡಿಸಿಗಳ ಜೊತೆ ಚರ್ಚೆ ಮಾಡಿಲ್ಲ. ಆದರೆ ರಾಜ್ಯದಲ್ಲಿ ಒಟ್ಟಾರೆ ಗಣೇಶ ಹಬ್ಬವನ್ನು ಯಾವ ರೀತಿ ಆಚರಣೆ ಮಾಡಬೇಕು ಎಂದು ನಾಳೆ ಅಂತಿಮವಾದ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ತಿಳಿಸಿದರು.


ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಅನಗತ್ಯವಾಗಿ ಯಾರೂ ಮನೆಯಿಂದ ಹೊರಗೆ ಬಾರದೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕಿದೆ. ಹಾಗೂ ಗುಂಪುಗೂಡುವುದನ್ನು ಆದಷ್ಟು ನಿಯಂತ್ರಿಸಬೇಕಿದೆ. ಸರ್ಕಾರ ಕಾಲಕಾಲಕ್ಕೆ ಹೊರಡಿಸುತ್ತಿರುವ ಕೊರೋನಾ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾಲಿಸಬೇಕಿದೆ.

Published by:HR Ramesh
First published: