ಪಿಡಿಎಸ್ ಅಡಿಯಲ್ಲಿ 3 ತಿಂಗಳವರೆಗೆ ಪ್ರತಿ ವ್ಯಕ್ತಿಗೆ 7 ಕಿ.ಗ್ರಾಂ ಆಹಾರ ಧಾನ್ಯ ಪೂರೈಸಲು ನಿರ್ಧರಿಸಿದ ಕೇಂದ್ರ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯು (ಸಿಸಿಇಎ) ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಅಡಿಯಲ್ಲಿ ನೋಂದಾಯಿಸಲ್ಪಟ್ಟ 80 ಕೋಟಿ ಜನರಿಗೆ ಹೆಚ್ಚುವರಿ ಎರಡು ಕಿಲೋ ಆಹಾರ ಧಾನ್ಯಗಳನ್ನು ಪೂರೈಸಲು ಆಹಾರ ಸಚಿವಾಲಯದ ಪ್ರಸ್ತಾವನೆಯನ್ನು ಅಂಗೀಕರಿಸಿದೆ.

news18-kannada
Updated:March 26, 2020, 3:43 PM IST
ಪಿಡಿಎಸ್ ಅಡಿಯಲ್ಲಿ 3 ತಿಂಗಳವರೆಗೆ ಪ್ರತಿ ವ್ಯಕ್ತಿಗೆ 7 ಕಿ.ಗ್ರಾಂ ಆಹಾರ ಧಾನ್ಯ  ಪೂರೈಸಲು ನಿರ್ಧರಿಸಿದ ಕೇಂದ್ರ
ಸಾಂದರ್ಭಿಕ ಚಿತ್ರ
  • Share this:
ನವದೆಹಲಿ: ಪಿಡಿಎಸ್ ಅಡಿಯಲ್ಲಿ ಮುಂದಿನ ಮೂರು ತಿಂಗಳಲ್ಲಿ ಹೆಚ್ಚುವರಿ 2 ಕೆಜಿ ಆಹಾರ ಧಾನ್ಯಗಳನ್ನು ಸರ್ಕಾರ ಪೂರೈಸಲಿದೆ. ಒಟ್ಟು ಮಾಸಿಕ ಪ್ರತಿ ವ್ಯಕ್ತಿಗೆ 7 ಕೆಜಿ ನೀಡಲಾಗುತ್ತದೆ ಎಂದು ಆಹಾರ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯು(ಸಿಸಿಇಎ) ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಅಡಿಯಲ್ಲಿ ನೋಂದಾಯಿಸಲ್ಪಟ್ಟ 80 ಕೋಟಿ ಜನರಿಗೆ ಹೆಚ್ಚುವರಿ ಎರಡು ಕಿಲೋ ಸಬ್ಸಿಡಿ ಆಹಾರ ಧಾನ್ಯಗಳನ್ನು ಪೂರೈಸಲು ಆಹಾರ ಸಚಿವಾಲಯದ ಪ್ರಸ್ತಾವನೆಯನ್ನು ಅಂಗೀಕರಿಸಿದೆ. ದೇಶದಲ್ಲಿ ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಲಾಕ್ ಡೌನ್ ಘೋಷಿಸಲಾಗಿರುವುದರಿಂದ ಬಡ ಜನರಿಗೆ ಉಪಯೋಗವಾಗಲಿ ಎಂದು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಅಸ್ತಿತ್ವದಲ್ಲಿರುವುದಕ್ಕಿಂತ ಹೆಚ್ಚಿನ ಎರಡು ಕಿಲೋ ಆಹಾರ ಧಾನ್ಯಗಳನ್ನು ಮುಂದಿನ ಮೂರು ತಿಂಗಳವರೆಗೆ ಎಲ್ಲಾ ಪಡಿತರ ಚೀಟಿ ಹೊಂದಿರುವವರಿಗೆ ಪೂರೈಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಲಾಕ್‌ಡೌನ್ ಪರಿಹಾರಕ್ಕಾಗಿ 1.7 ಲಕ್ಷ ಕೋಟಿ ಪ್ಯಾಕೇಜ್ ಘೋಷಿಸಿದ ಕೇಂದ್ರ ಸರ್ಕಾರ; ಯಾವ ವಲಯಕ್ಕೆ ಎಷ್ಟು ಹಣ? ಇಲ್ಲಿದೆ ಮಾಹಿತಿ

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ (ಎನ್ಎಫ್ಎಸ್ಎ) 80 ಕೋಟಿ ಜನರಿಗೆ ಸಬ್ಸಿಡಿ ದರದಲ್ಲಿ ಸರ್ಕಾರ ತಿಂಗಳಿಗೆ 5 ಕೆಜಿ ಆಹಾರ ಧಾನ್ಯಗಳನ್ನು ಪೂರೈಸುತ್ತಿದೆ. ಗೋಧಿಯನ್ನು ಪ್ರತಿ ಕೆ.ಜಿ.ಗೆ 2 ರೂ. ಮತ್ತು ಅಕ್ಕಿಯನ್ನು ಕೆ.ಜಿ.ಗೆ 3 ರೂ ನೀಡಲಿದೆ.

ಮಹಾಮಾರಿ ಕೊರೋನಾ ವೈರಸ್ ದೇಶದಲ್ಲಿ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದ್ದು ಜನರನ್ನು ಆತಂಕಕ್ಕೀಡು ಮಾಡಿದೆ.

(ವರದಿ: ಸಂಧ್ಯಾ ಎಂ)
First published:March 26, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading