HOME » NEWS » Coronavirus-latest-news » HD KUMARASWAMY AFTER BS YEDIYURAPPA FORMER CM HD KUMARASWAMY TESTS COVID 19 POSITIVE SCT

HD Kumaraswamy: ಯಡಿಯೂರಪ್ಪ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿಗೂ ಕೊರೋನಾ ಸೋಂಕು

HD Kumaraswamy Covid-19: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೂ ಕೊರೋನಾ ಸೋಂಕು ತಗುಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಅವರಿಗೂ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

news18-kannada
Updated:April 17, 2021, 11:13 AM IST
HD Kumaraswamy: ಯಡಿಯೂರಪ್ಪ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿಗೂ ಕೊರೋನಾ ಸೋಂಕು
ಹೆಚ್.ಡಿ. ಕುಮಾರಸ್ವಾಮಿ
  • Share this:
ಬೆಂಗಳೂರು (ಏ. 17): ಕರ್ನಾಟಕದಲ್ಲಿ ಕೊರೋನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ರಾಜ್ಯದಲ್ಲಿ ನಿನ್ನೆ ಮತ್ತೆ 14,859 ಕೊರೋನಾ ಕೇಸ್​ಗಳು ಪತ್ತೆಯಾಗಿದ್ದು, 78 ಜನರು ಸಾವನ್ನಪ್ಪಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೂ ಕೊರೋನಾ ಸೋಂಕು ತಗುಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಅವರಿಗೂ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ. ನಾನು ಕೋವಿಡ್-19 ಪರೀಕ್ಷೆ ಮಾಡಿಸಿಕೊಂಡಿದ್ದು, ಕೊರೋನಾ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಅವರು ಟ್ವೀಟ್ ಮಾಡಿದ್ದಾರೆ.


ಕರ್ನಾಟಕದಲ್ಲಿ ನಿನ್ನೆ ಮತ್ತೆ 15 ಸಾವಿರದ ಗಡಿ ಸಮೀಪಿಸಿರುವ ಕೊರೋನಾ ಸೋಂಕಿತರ ಸಂಖ್ಯೆ ಇಂದು ಮತ್ತಷ್ಟು ಹೆಚ್ಚುವ ಸಾಧ್ಯತೆಯಿದೆ. ನಿನ್ನೆ ಒಂದೇ ದಿನ ರಾಜ್ಯದಲ್ಲಿ ಕೊರೋನಾದಿಂದ 78 ಜನರು ಸಾವನ್ನಪ್ಪಿದ್ದಾರೆ. 577 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರೊಂದರಲ್ಲೇ ಸುಮಾರು 10 ಸಾವಿರ ಕೊರೋನಾ ಕೇಸ್​ಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 9,917 ಕೊರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. 57 ಜನರು ಸಾವನ್ನಪ್ಪಿದ್ದಾರೆ.

ಕೊರೋನಾ ಸೋಂಕು ತಗುಲಿರುವುದರಿಂದ ಆಸ್ಪತ್ರೆಯಿಂದಲೇ ಸಚಿವರಿಗೆ ಸೂಚನೆಗಳನ್ನು ನೀಡುತ್ತಿರುವ ಸಿಎಂ ಯಡಿಯೂರಪ್ಪ ಸರ್ವ ಪಕ್ಷ ಸಭೆಯನ್ನು ಮುಂದೂಡಿದ್ದಾರೆ. ರಾಜ್ಯದಲ್ಲಿ 15 ಸಾವಿರದ ಗಡಿಯತ್ತ ಕೊರೋನಾ ಕೇಸುಗಳು ದಾಪುಗಾಲಿಡುತ್ತಿದ್ದರೂ ಲಾಕ್​ಡೌನ್​ಗೆ ಸಿಎಂ ಯಡಿಯೂರಪ್ಪ ಸುತಾರಾಂ ಒಪ್ಪುತ್ತಿಲ್ಲ ಎನ್ನಲಾಗುತ್ತ್ತಿದೆ.

ಕರ್ನಾಟಕದಲ್ಲಿ ಕೊರೋನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ತರೆದ ಪ್ರದೇಶದ ಮದುವೆ ಸಮಾರಂಭದಲ್ಲಿ 200 ಜನರು ಮೀರದಂತೆ ಹಾಗೂ ಕಲ್ಯಾಣ ಮಂಟಪದಲ್ಲಿ 100 ಜನರು ಮೀರದಂತೆ ಕ್ರಮ ಕೈಗೊಳ್ಳಲಾಗಿದೆ. ಜನ್ಮ ದಿನ ಸೇರಿದಂತೆ ಇತರೆ ಆಚರಣೆಗಳು 50 ( ತೆರದ ಪ್ರದೇಶ), ಒಳಾಂಗಣದಲ್ಲಿ 25, ಶವ ಸಂಸ್ಕಾರ 50 ( ತೆರೆದ ), ಒಳಾಂಗಣದಲ್ಲಿ 25, ಅಂತ್ಯಕ್ರಿಯೆ 25 ಜನರಿಗೆ ಮಾತ್ರ ಅವಕಾಶ ನೀಡಲು ನಿರ್ಧರಿಸಲಾಗಿದೆ. ಎಲ್ಲಾ ಧಾರ್ಮಿಕ ಆಚರಣೆಗಳಿಗೆ ನಿಷೇಧ ಹೇರಲಾಗಿದ್ದು, ರಾಜಕೀಯ ಸಮಾರಂಭಗಳಲ್ಲಿ 200 ಮೀರದಂತೆ ( ತೆರೆದ) ಸೂಚನೆ ನೀಡಲಾಗಿದೆ.
Published by: Sushma Chakre
First published: April 17, 2021, 11:13 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories