ಬೆಂಗಳೂರು (ಏ. 14): ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಕೊರೋನಾ 2ನೇ ಅಲೆಯ ಪ್ರಭಾವದಿಂದ ರಾಜ್ಯದ ಜನರು ಕಂಗೆಟ್ಟಿದ್ದಾರೆ. ಕರ್ನಾಟಕದಲ್ಲಿ ಲಾಕ್ಡೌನ್ ಜಾರಿಗೊಳಿಸುವ ಯೋಚನೆಯಿಲ್ಲ ಎಂದಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಏ.1ರಂದು ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಕೊರೋನಾ ನಿಯಂತ್ರಣಕ್ಕೆ ಲಾಕ್ಡೌನ್ ಹೊರತಾಗಿ ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಬಹುದು ಎಂಬ ಬಗ್ಗೆ ವಿರೋಧಪಕ್ಷಗಳ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳ ಬಗ್ಗೆ ಸರ್ಕಾರದ ನಿರ್ಲಕ್ಷ್ಯದ ಕುರಿತು ಅಸಮಾಧಾನ ಹೊರಹಾಕಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ಗಳನ್ನು ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಕೋವಿಡ್ ನಿಯಂತ್ರಣಕ್ಕಾಗಿ ಬಿಗಿ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಹೇಳಿದೆ. ಈ ಬಗ್ಗೆ ವಿಪಕ್ಷಗಳೊಂದಿಗೆ ಸಭೆ ನಡೆಸುವುದಾಗಿಯೂ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಆದರೆ, ಕೋವಿಡ್ ಚಿಕಿತ್ಸೆಗೆ ಬೇಕಾಗುವ ಮೂಲಸೌಕರ್ಯಗಳನ್ನು ಹೊಂದಿಸಿಟ್ಟುಕೊಂಡಿಲ್ಲ. ರೋಗದ ನಿಯಂತ್ರಣಕ್ಕೆ ವ್ಯವಸ್ಥೆ ಮಾಡಿಕೊಂಡಿಲ್ಲ. ಎಚ್ಚರಿಕೆ ಕಡೆಗಣಿಸಿದ ಸರ್ಕಾರ ಯಾವ ಸಭೆ ನಡೆಸಿ ಏನು ಉಪಯೋಗ? ಎಂದು ಪ್ರಶ್ನಿಸಿದ್ದಾರೆ.
ಕೋವಿಡ್ ನಿಯಂತ್ರಣಕ್ಕಾಗಿ ಬಿಗಿ ಕ್ರಮ ಕೈಗೊಳ್ಳುವುದಾಗಿಯೂ, ಈ ಬಗ್ಗೆ ವಿಪಕ್ಷಗಳೊಂದಿಗೆ ಸಭೆ ನಡೆಸುವುದಾಗಿಯೂ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಆದರೆ, ಕೋವಿಡ್ ಚಿಕಿತ್ಸೆಗೆ ಬೇಕಾಗುವ ಮೂಲಸೌಕರ್ಯ ಹೊಂದಿಸಿಟ್ಟುಕೊಳ್ಳದ, ರೋಗದ ನಿಯಂತ್ರಣಕ್ಕೆ ವ್ಯವಸ್ಥೆ ಮಾಡಿಕೊಳ್ಳದ, ಎಚ್ಚರಿಕೆ ಕಡೆಗಣಿಸಿದ ಸರ್ಕಾರ ಯಾವ ಸಭೆ ನಡೆಸಿ ಏನು ಉಪಯೋಗ?
1/5
— H D Kumaraswamy (@hd_kumaraswamy) April 14, 2021
ಕೇಂದ್ರ, ರಾಜ್ಯ ಸರ್ಕಾರಗಳಿಗೆ 2ನೇ ಅಲೆ ಕಾಣಿಸಿಕೊಳ್ಳುವ ಎಚ್ಚರಿಕೆಗಳಿದ್ದವು. ಅದನ್ನು ಗಂಭೀರವಾಗಿ ಪರಿಗಣಿಸಿದ್ದರೆ ಪರಿಸ್ಥಿತಿ ಹೀಗಾಗುತ್ತಿರಲಿಲ್ಲ. ಇದೆಲ್ಲದರ ಮಧ್ಯೆ ಕೋವಿಡ್ ಚಿಕಿತ್ಸೆಗೆ ಬಳಸಲಾಗುವ ರೆಮ್‌ಡಿಸಿವಿರ್ ಎಂಬ ಚುಚ್ಚು ಮದ್ದಿಗೆ ದೇಶದಲ್ಲಿ ಅಭಾವ ಸೃಷ್ಟಿಯಾಗಿದೆ. ಸೋಂಕಿತರಿಗೆ ಚಿಕಿತ್ಸೆಯೇ ಖಾತ್ರಿ ಇಲ್ಲದಂತಾಗಿದೆ.
2/5
— H D Kumaraswamy (@hd_kumaraswamy) April 14, 2021
ರೆಮ್‌ಡಿಸಿವಿರ್ ಚುಚ್ಚುಮದ್ದನ್ನು ಇಷ್ಟ ಬಂದಂತೆ ರಫ್ತು ಮಾಡಿದ್ದ ಕೇಂದ್ರ ಸರ್ಕಾರವು ಟೀಕೆಗಳು ಬರುತ್ತಲೇ, ಔಷಧಿಗೆ ಅಭಾವ ಎದುರಾಗುತ್ತಲೇ ರಫ್ತು ನಿಷೇಧಿಸಿದೆ. ಆದರೆ, ಈಗ ಕಾಲ ಮಿಂಚಿದೆ. ಒಂದೆಡೆ ಕೋವಿಡ್ ಪ್ರಕರಣಗಳು ದಿಢೀರ್ ಏರಿಕೆಯಾಗಿದೆ. ಆದರೆ, ದೇಶದ ಆಸ್ಪತ್ರೆಗಳು ರೆಮ್‌ಡಿಸಿವಿರ್‌ಗಾಗಿ ಕಾದು ಕೂರುವ ಪರಿಸ್ಥಿತಿ ಉದ್ಭವಿಸಿದೆ.
3/5
— H D Kumaraswamy (@hd_kumaraswamy) April 14, 2021
ಕೋವಿಡ್ ನಿಯಂತ್ರಿಸುವ ವಿಚಾರದಲ್ಲಿ ಸರ್ಕಾರಗಳಿಗೆ ನಮ್ಮ ಬೆಂಬಲ ಇದ್ದೇ ಇರುತ್ತದೆ. ಆದರೆ, ಎಚ್ಚರಿಕೆಗಳನ್ನು ಕಡೆಗಣಿಸಿ, ನಾಗರಿಕರ ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ತೋರುವ ನಡೆಗಳು ಖಂಡನೀಯ. ಸರ್ಕಾರಗಳು ಕನಿಷ್ಠ, ಚಿಕಿತ್ಸೆಗೆ ಅಗತ್ಯವಿರುವ ಔಷಧಗಳನ್ನಾದರೂ ದಾಸ್ತಾನು ಮಾಡಿಕೊಳ್ಳಬೇಕು. ಅದಿಲ್ಲದೇ, ಸಭೆಗಳನ್ನು ನಡೆಸಿ ಪ್ರಯೋಜನವಿಲ್ಲ.
5/5
— H D Kumaraswamy (@hd_kumaraswamy) April 14, 2021
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ