ಜೀವಕ್ಕಿಂತ ಯಾವ ಧರ್ಮವೂ ದೊಡ್ಡದಲ್ಲ, ದೇಶದ ಸ್ವಾಸ್ಥ್ಯ, ಸಂವಿಧಾನಕ್ಕಿಂತ ಯಾರೂ ದೊಡ್ಡವರಲ್ಲ; ಎಚ್​ಡಿಕೆ

ಬೆಂಗಳೂರಿನ ಹೆಗಡೆ‌ನಗರದ ಬಳಿ ಬರುವ ಸಾಧಿಕ್‌ನಗರದಲ್ಲಿ ಆಶಾ ಕಾರ್ಯಕರ್ತೆಯರು ತಪಾಸಣೆ ಮಾಡುವ ವೇಳೆ‌ ಯುವಕರು ಗುಂಪಾಗಿ ಸೇರಿ ಅಸಭ್ಯವಾಗಿ ವರ್ತಿಸಿ ಹಲ್ಲೆ ಮಾಡಿದ್ದು ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಎಂದು ಎಚ್​ಡಿಕೆ ಆಗ್ರಹಿಸಿದ್ದಾರೆ.

HR Ramesh | news18-kannada
Updated:April 2, 2020, 6:24 PM IST
ಜೀವಕ್ಕಿಂತ ಯಾವ ಧರ್ಮವೂ ದೊಡ್ಡದಲ್ಲ, ದೇಶದ ಸ್ವಾಸ್ಥ್ಯ, ಸಂವಿಧಾನಕ್ಕಿಂತ ಯಾರೂ ದೊಡ್ಡವರಲ್ಲ; ಎಚ್​ಡಿಕೆ
ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಸಿಎಂ ಯಡಿಯೂರಪ್ಪ
  • Share this:
ಬೆಂಗಳೂರು: ಮಾರಕ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಅತಿರೇಕಕ್ಕೆ ಹೋಗುತ್ತಿದ್ದು, ವೈರಸ್ ನಿಯಂತ್ರಣಕ್ಕೆ ಸರ್ಕಾರಗಳು, ವಿರೋಧ ಪಕ್ಷಗಳು ಪಕ್ಷಬೇಧ ಮರೆತು ಕೆಲಸ ಮಾಡುತ್ತಿವೆ. ಇದೇ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಟ್ವೀಟ್ ಮಾಡಿದ್ದಾರೆ.

ದೆಹಲಿಯ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡವರು ಸ್ವಯಂಪ್ರೇರಿತವಾಗಿ ತಪಾಸಣೆಗೆ ಒಳಗಾಗಬೇಕು ಹಾಗೂ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಜಾತಿ-ಧರ್ಮವನ್ನು ಬದಿಗೊತ್ತಿ ಎಲ್ಲರೂ ವರ್ತಿಸಬೇಕು. ಹಾಗೆಯೇ ಆಶಾ ಕಾರ್ಯಕರ್ತೆಯರ ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ಎಚ್​.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ.

"ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದವರೆಲ್ಲರೂ ಕಡ್ಡಾಯವಾಗಿ ಸ್ವಯಂಪ್ರೇರಿತರಾಗಿ ವೈದ್ಯಕೀಯ ತಪಾಸಣೆಗೆ ಒಳಗಾಗಬೇಕು. ಜೀವಕ್ಕಿಂತ ಯಾವ ಧರ್ಮವೂ ದೊಡ್ಡದಲ್ಲ. ತಪಾಸಣೆ ಮಾಡಲು ಬಂದ ವೈದ್ಯಕೀಯ ಸಿಬ್ಬಂದಿಯ ಮೇಲೆ ಹಲ್ಲೆ ಮಾಡುವುದು, ತಿರುಗಿ ಬೀಳುವುದು ಖಂಡನೀಯ.ದೇಶದ ಸ್ವಾಸ್ಥ್ಯ ಮತ್ತು ಸಂವಿಧಾನಕ್ಕಿಂತ ಯಾರೂ ದೊಡ್ಡವರಲ್ಲ. ರಾಷ್ಟ್ರದ ಹಿತಾಸಕ್ತಿ ವಿರುದ್ಧ ಯಾರೂ ಧ್ವನಿ ಎತ್ತಬಾರದು. ಅತಿರೇಕದ ವರ್ತನೆಗಳಿಗೆ ಖಂಡಿತಾ ನನ್ನ ಬೆಂಬಲವಿಲ್ಲ. ಇದು ಜಾತಿ-ಧರ್ಮಗಳ ಪ್ರಶ್ನೆಯಲ್ಲ. ರಾಷ್ಟ್ರದ ಭವಿಷ್ಯದ ಪ್ರಶ್ನೆ," ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಹಾಗೆಯೇ, "ಬೆಂಗಳೂರಿನ ಹೆಗಡೆ‌ನಗರದ ಬಳಿ ಬರುವ ಸಾಧಿಕ್‌ನಗರದಲ್ಲಿ ಆಶಾ ಕಾರ್ಯಕರ್ತೆಯರು ತಪಾಸಣೆ ಮಾಡುವ ವೇಳೆ‌ ಯುವಕರು ಗುಂಪಾಗಿ ಸೇರಿ ಅಸಭ್ಯವಾಗಿ ವರ್ತಿಸಿ ಹಲ್ಲೆ ಮಾಡಿದ್ದು ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು." ಎಂದು ಎಚ್​ಡಿಕೆ ಆಗ್ರಹಿಸಿದ್ದಾರೆ.

ಇದನ್ನು ಓದಿ: ನಾಳೆ ಬೆಳಗ್ಗೆ 9 ಗಂಟೆಗೆ ವಿಡಿಯೋ ಸಂದೇಶ ಬಿಡುಗಡೆ ಮಾಡಲಿರುವ ಪ್ರಧಾನಿ ಮೋದಿ; ಕೊರೋನಾ ಕುರಿತಾದ ಮಾಹಿತಿ ಹಂಚಿಕೆ

ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದವರೆಲ್ಲರೂ ಕಡ್ಡಾಯವಾಗಿ ಸ್ವಯಂಪ್ರೇರಿತರಾಗಿ ವೈದ್ಯಕೀಯ ತಪಾಸಣೆಗೆ ಒಳಗಾಗಬೇಕು. ಜೀವಕ್ಕಿಂತ ಯಾವ ಧರ್ಮವೂ ದೊಡ್ಡದಲ್ಲ. ತಪಾಸಣೆ ಮಾಡಲು ಬಂದ ವೈದ್ಯಕೀಯ ಸಿಬ್ಬಂದಿಯ ಮೇಲೆ ಹಲ್ಲೆ ಮಾಡುವುದು, ತಿರುಗಿ ಬೀಳುವುದು ಖಂಡನೀಯ. ದೇಶದ ಸ್ವಾಸ್ಥ್ಯ ಮತ್ತು ಸಂವಿಧಾನಕ್ಕಿಂತ ಯಾರೂ ದೊಡ್ಡವರಲ್ಲ

First published: April 2, 2020, 6:24 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading