‘ಹಣಕ್ಕಿಂತಲೂ ಜನರ ಆರೋಗ್ಯ ಮುಖ್ಯ, ಇಡೀ ಬೆಂಗಳೂರು ಲಾಕ್​ಡೌನ್​​ ಮಾಡಿ‘ - ಸರ್ಕಾರಕ್ಕೆ ಎಚ್​​ಡಿ ಕುಮಾರಸ್ವಾಮಿ ಆಗ್ರಹ

ಬರೀ ಪ್ಯಾಕೇಜ್ ಘೋಷಣೆ ಮಾಡಿದರೆ ಸಾಲದು. ಅದರ ಅನುಷ್ಠಾನಕ್ಕೆ ತಕ್ಷಣ ಕಾರ್ಯೋನ್ಮುಖವಾಗಬೇಕು. ಪ್ಯಾಕೇಜ್ ಘೋಷಣೆ ಮಾಡಿ, ಸರ್ಕಾರ ಅಂಗೈಯಲ್ಲಿ ಅರಮನೆ ತೋರಿಸಬಾರದು ಎನ್ನುವ ಮೂಲಕ ಕೇಂದ್ರ ಸರ್ಕಾರವನ್ನು ಎಚ್​​ಡಿಕೆ ಕುಟುಕಿದ್ದಾರೆ.

news18-kannada
Updated:June 23, 2020, 9:18 AM IST
‘ಹಣಕ್ಕಿಂತಲೂ ಜನರ ಆರೋಗ್ಯ ಮುಖ್ಯ, ಇಡೀ ಬೆಂಗಳೂರು ಲಾಕ್​ಡೌನ್​​ ಮಾಡಿ‘ - ಸರ್ಕಾರಕ್ಕೆ ಎಚ್​​ಡಿ ಕುಮಾರಸ್ವಾಮಿ ಆಗ್ರಹ
ಬಿ.ಎಸ್.ಯಡಿಯೂರಪ್ಪ ಮತ್ತು ಎಚ್​.ಡಿ.ಕುಮಾರಸ್ವಾಮಿ
  • Share this:
ಬೆಂಗಳೂರು(ಜೂ.23): "ಜನರ ಪ್ರಾಣದ ಜೊತೆ ಚೆಲ್ಲಾಟ ನಿಲ್ಲಿಸಿ. ಕೆಲವೇ ಪ್ರದೇಶಗಳಲ್ಲಿ ಸೀಲ್​​ಡೌನ್, ಲಾಕ್​​ಡೌನ್ ಮಾಡಿದರೆ ಪ್ರಯೋಜನವಿಲ್ಲ.‌ ಬೆಂಗಳೂರು ನಿವಾಸಿಗಳು ಬದುಕುಳಿಯಬೇಕಾದರೆ ಈ ಕೂಡಲೇ ಕನಿಷ್ಟ 20 ದಿನ‌ ಸಂಪೂರ್ಣ ಲಾಕ್​​ಡೌನ್ ಮಾಡಿ. ಇಲ್ಲವಾದಲ್ಲಿ ಬೆಂಗಳೂರು ಮತ್ತೊಂದು ಬ್ರೆಜಿಲ್ ಆಗಲಿದೆ. ಜನರ ಆರೋಗ್ಯ ಮುಖ್ಯವೇ ಹೊರತು ಆರ್ಥಿಕತೆಯಲ್ಲ" ಎಂದು ಟ್ವೀಟ್​ ಮಾಡುವ ಮೂಲಕ ಮಾಜಿ ಸಿಎಂ ಎಚ್​​.ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಬಡವರು, ಕಾರ್ಮಿಕರಿಗೆ ಕೂಡಲೇ ಪಡಿತರ ವಿತರಿಸಿ. ರಾಜ್ಯದ 50 ಲಕ್ಷ ಮಂದಿ ಶ್ರಮಿಕ ವರ್ಗಕ್ಕೆ ತಲಾ ಐದು ಸಾವಿರ ರೂಪಾಯಿ ಪರಿಹಾರ ನೀಡಬೇಕು. ಚಾಲಕರು, ನೇಕಾರರು, ಮಡಿವಾಳರು ಸೇರಿದಂತೆ ವಿವಿಧ ವರ್ಗಕ್ಕೆ ರಾಜ್ಯ ಸರ್ಕಾರ ಈಗಾಗಲೇ ಘೋಷಿಸಿರುವ ಪರಿಹಾರ ದಕ್ಕಿಲ್ಲ ಎಂದು ಮತ್ತೊಂದು ಟ್ವೀಟ್​​ನಲ್ಲಿ ಎಚ್​​ಡಿಕೆ ಆಗ್ರಹಿಸಿದ್ದಾರೆ.

ಬರೀ ಪ್ಯಾಕೇಜ್ ಘೋಷಣೆ ಮಾಡಿದರೆ ಸಾಲದು. ಅದರ ಅನುಷ್ಠಾನಕ್ಕೆ ತಕ್ಷಣ ಕಾರ್ಯೋನ್ಮುಖವಾಗಬೇಕು. ಪ್ಯಾಕೇಜ್ ಘೋಷಣೆ ಮಾಡಿ, ಸರ್ಕಾರ ಅಂಗೈಯಲ್ಲಿ ಅರಮನೆ ತೋರಿಸಬಾರದು ಎನ್ನುವ ಮೂಲಕ ಕೇಂದ್ರ ಸರ್ಕಾರವನ್ನು ಎಚ್​​ಡಿಕೆ ಕುಟುಕಿದ್ದಾರೆ.


ಇದನ್ನೂ ಓದಿ: ಕೊರೋನಾ ಸಂದರ್ಭದಲ್ಲಿ ಕಣ್ಮರೆಯಾದ ಸಿ.ಪಿ.ಯೋಗೇಶ್ವರ್ ; ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ

ಇತ್ತೀಚೆಗೆ ಕರ್ನಾಟಕದಲ್ಲಿ ಕೊರೋನಾ ಆರ್ಭಟ ಮುಂದುವರಿದಿದೆ. ದಿನದಿಂದ ದಿನಕ್ಕೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಬೆಂಗಳೂರಿನಲ್ಲಂತೂ ಸಾವಿರಕ್ಕೂ ಹೆಚ್ಚು ಕೊರೋನಾ ಪಾಸಿಟಿವ್​​ ಕೇಸುಗಳು ವರದಿಯಾಗಿವೆ. ಪ್ರತೀದಿನ ನೂರಾರು ಕೇಸುಗಳು ದಾಖಲಾಗುತ್ತಿವೆ. ಹೀಗಿರುವಾಗ ಸಿಎಂ ಯಡಿಯೂರಪ್ಪ ಸರ್ಕಾರ ಕೋವಿಡ್​​​-19 ಸೋಂಕು ಹೆಚ್ಚಿರುವ ಪ್ರದೇಶಗಳನ್ನು ಮಾತ್ರ ಸೀಲ್​ಡೌನ್​​ ಮಾಡಲಾಗುವುದು ಎಂದಿದ್ದಾರೆ. ಹೀಗಾಗಿ ಎಚ್​​ಡಿಕೆ ಹಣಕ್ಕಿಂತಲೂ ಜನರ ಪ್ರಾಣ ಮುಖ್ಯ ಸಂಪೂರ್ಣ ಬೆಂಗಳೂರು ಲಾಕ್​ಡೌನ್​​ ಮಾಡಿ ಎಂದು ಆಗ್ರಹಿಸಿದ್ದಾರೆ.​
First published:June 23, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading