ಕೊರೋನಾದಿಂದ ಗುಣಮುಕ್ತರಾದ ಎಚ್.ಡಿ.ಕುಮಾರಸ್ವಾಮಿ; 2 ವಾರಗಳ ಕಾಲ ಮನೆಯಲ್ಲಿ ವಿಶ್ರಾಂತಿ

ಎಚ್​.ಡಿ. ಕುಮಾರಸ್ವಾಮಿ ಅವರು ಕೊರೋನಾ ಸೋಂಕಿಗೆ ತುತ್ತಾದ ಬಳಿಕ ಅವರ ಮಗನಾದ ನಿಖಿಲ್ ಕುಮಾರಸ್ವಾಮಿ ಅವರು ಸಹ ಸೋಂಕಿಗೆ ಒಳಗಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅಷ್ಟೇ ಅಲ್ಲದೇ, ಎಚ್​ಡಿಕೆ ತಂದೆ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಅವರ ತಾಯಿ ಚೆನ್ನಮ್ಮ ಅವರು ಸೋಂಕಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.

ಹೆಚ್.ಡಿ. ಕುಮಾರಸ್ವಾಮಿ

ಹೆಚ್.ಡಿ. ಕುಮಾರಸ್ವಾಮಿ

 • Share this:
  ಬೆಂಗಳೂರು: ಕೆಲವು ದಿನಗಳ ಹಿಂದೆ ಕೊರೋನಾ ಸೋಂಕಿಗೆ ತುತ್ತಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಇಂದು ಸೋಂಕಿನಿಂದ ಗುಣಮುಕ್ತರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೋನಾದಿಂದ ಗುಣಮುಖರಾದ ವಿಷಯವನ್ನು ಸ್ವತಃ ಎಚ್.ಡಿ. ಕುಮಾರಸ್ವಾಮಿ ಅವರೇ ಟ್ವೀಟ್ ಮೂಲಕ ತಿಳಿಸಿ, ಶುಭ ಆರೈಸಿದ ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ. ಕುಮಾರಸ್ವಾಮಿ ಅವರು ಕೊರೋನಾ ಸೋಂಕಿಗೆ ತುತ್ತಾಗಿ ಗುಣಮುಕ್ತವಾಗಿರುವುದು ಇದು ಎರಡನೆ ಸಲ.

  ಸಿಎಂ ಬಿಎಸ್ ಯಡಿಯೂರಪ್ಪ ಅವರು ಕೊರೋನಾ ಸೋಂಕಿಗೆ ತುತ್ತಾದ ದಿನವೇ ಮಾಜಿ ಸಿಎಂ ಎಚ್​ಡಿಕೆ ಅವರು ಸೋಂಕಿಗೆ ಒಳಗಾಗಿದ್ದರು. ಬಳಿಕ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡರು. ಇದೀಗ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ನಿಮ್ಮೆಲ್ಲರ ಪ್ರೀತಿ, ಅಕ್ಕರೆ, ಪ್ರಾರ್ಥನೆಯ ಫಲವಾಗಿ ನಾನು ಇಂದು ಕೊರೋನಾ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ಬಂದಿದ್ದೇನೆ. ನಿಮ್ಮೆಲ್ಲರ ಪ್ರೀತಿಯ ಕಾಳಜಿಗೆ ನನ್ನ ಪ್ರಣಾಮಗಳು. ಇನ್ನೂ ಎರಡು ವಾರಗಳ ಕಾಲ ವೈದ್ಯರ ಸಲಹೆ ಮೇರೆಗೆ ಸಾರ್ವಜನಿಕರನ್ನು ಭೇಟಿ ಮಾಡಲು ಸಾಧ್ಯವಿಲ್ಲ. ದಯಮಾಡಿ ಸಹಕರಿಸಿ. ನಿಮ್ಮ ಪ್ರೀತಿಯ ಋಣಭಾರ ನನ್ನ ಮೇಲೆ ಸದಾ ಹೀಗೆ ಇರಲಿ ಎಂದು ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

  ಇದನ್ನು ಓದಿ: Exclusive Story | ಉಚಿತವಾಗಿ ಲಸಿಕೆ ಹಂಚಿಕೆ ವಿಷಯವಾಗಿ ಸರ್ಕಾರದ ಮೇಲೆ ಹೆಚ್ಚಿದ ಒತ್ತಡ; ಸೋಮವಾರ ಮಹತ್ವದ ನಿರ್ಧಾರ?

  ಎಚ್​.ಡಿ. ಕುಮಾರಸ್ವಾಮಿ ಅವರು ಕೊರೋನಾ ಸೋಂಕಿಗೆ ತುತ್ತಾದ ಬಳಿಕ ಅವರ ಮಗನಾದ ನಿಖಿಲ್ ಕುಮಾರಸ್ವಾಮಿ ಅವರು ಸಹ ಸೋಂಕಿಗೆ ಒಳಗಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅಷ್ಟೇ ಅಲ್ಲದೇ, ಎಚ್​ಡಿಕೆ ತಂದೆ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಅವರ ತಾಯಿ ಚೆನ್ನಮ್ಮ ಅವರು ಸೋಂಕಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.
  Published by:HR Ramesh
  First published: