• Home
  • »
  • News
  • »
  • coronavirus-latest-news
  • »
  • ಪಾದರಾಯನಪುರ ಪುಂಡರನ್ನು ರಾಮನಗರ ಜೈಲಿಗೆ ಶಿಫ್ಟ್​ ಮಾಡಿದ್ದೀರಿ; ಮುಂದಿನ ಅನಾಹುತಕ್ಕೆ ಸರ್ಕಾರವೇ ಹೊಣೆ; ಎಚ್​​ಡಿಕೆ

ಪಾದರಾಯನಪುರ ಪುಂಡರನ್ನು ರಾಮನಗರ ಜೈಲಿಗೆ ಶಿಫ್ಟ್​ ಮಾಡಿದ್ದೀರಿ; ಮುಂದಿನ ಅನಾಹುತಕ್ಕೆ ಸರ್ಕಾರವೇ ಹೊಣೆ; ಎಚ್​​ಡಿಕೆ

ಹೆಚ್​.ಡಿ. ಕುಮಾರಸ್ವಾಮಿ.

ಹೆಚ್​.ಡಿ. ಕುಮಾರಸ್ವಾಮಿ.

ರಾಮನಗರ ಕಾರಾಗೃಹದಲ್ಲಿ ಅಡುಗೆಯವರು ಮತ್ತು ಶುಚಿತ್ವದ ಸಿಬ್ಬಂದಿ ವಾಸಿಸುತ್ತಿದ್ದು ಜನರೊಂದಿಗೆ ಸಂಪರ್ಕದಲ್ಲಿರುತ್ತಾರೆ. ಗಲಭೆಕೊರರಿಂದ ಅಕಸ್ಮಾತ್ ಸೋಂಕು ತಗುಲಿದರೆ ಜಿಲ್ಲೆಯ ಸ್ವಾಸ್ಥ್ಯ ಹದಗೆಡುತ್ತದೆ ಎಂಬ ಕನಿಷ್ಠ ಪ್ರಜ್ಞೆ ಸರಕಾರಕ್ಕೆ ಬೇಡವೇ ಎಂದು ಕಿಡಿ ಕಾರಿದ್ದಾರೆ.

  • Share this:

    ಬೆಂಗಳೂರು(ಏ.21): ಪಾದರಾಯನಪುರದ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾದ 54 ಮಂದಿ ಪುಂಡರನ್ನು ರಾಮನಗರ ಜಿಲ್ಲಾ ಕಾರಾಗೃಹದಲ್ಲಿ ಇರಿಸಲಾಗಿದೆ. ಒಂದು ವೇಳೆ ಇಂದರಿದೇನಾದರೂ ಮುಂದೆ ಅನಾಹುತವಾದರೇ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಮತ್ತು ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟ್ವೀಟ್​​ ಮೂಲಕ ಎಚ್ಚರಿಸಿದ್ದಾರೆ.


    ಕೊರೋನಾ ಸೋಂಕಿನ ವಿಷಯದಲ್ಲಿ ಹಸಿರು ವಲಯವಾಗಿರುವ ರಾಮನಗರದ ಜೈಲಿನಲ್ಲಿ ಕ್ವಾರಂಟೈನ್​​ಗೆ ಒಳಗಾಗಬೇಕಿದ್ದ ಗಲಭೆಕೋರರನ್ನು ಇರಿಸುವುದು ವಿವೇಕಯುತ ನಿರ್ಧಾರವಲ್ಲ. ಚೋದ್ಯವೆಂದರೆ ರಾಮನಗರ ಜೈಲಿನ ಖೈದಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಲಾಗಿದೆ. ಅದೇ ರಾಮನಗರದ ಕಾರಗೃಹದಲ್ಲಿ ಹದಿನೈದಕ್ಕೂ ಹೆಚ್ಚು ಪಾದರಾಯನಪುರದ ಪುಂಡರನ್ನು ಒಂದೇ ಕೊಠಡಿಯಲ್ಲಿರಿಸುವ ಕಾರಣ ಕೊರೋನಾ ಭೀತಿ ಎದುರಾಗಿದೆ. ಜಿಲ್ಲೆಯ ಜನತೆ ಭಯಗೊಂಡಿದ್ದಾರೆ. ಸರಕಾರ ತಕ್ಷಣವೇ ತನ್ನ ನಿರ್ಧಾರವನ್ನು ಬದಲಿಸಬೇಕು ಎಂದು ಆಗ್ರಹಿಸಿದ್ದಾರೆ.


    ಸೋಮವಾರ ಸೆರೆ ಸಿಕ್ಕ ಐವತ್ತನಾಲ್ಕು ಮಂದಿ ನ್ಯಾಯಾಂಗ ಬಂಧನಕ್ಕೆ ಒಳಗಾದವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿ ಇರಿಸುವುದನ್ನು ಬಿಟ್ಟು ರಾಮನಗರ ಜಿಲ್ಲಾ ಕಾರಾಗೃಹದಲ್ಲಿರಿಸುವ ನಿರ್ಧಾರ ತಗೆದುಕೊಂಡವರು ಯಾರು? ಎಂದು ಪ್ರಶ್ನಿಸಿದ್ದಾರೆ.


    ಹೀಗೆಯೇ ಮುಂದುವರೆದ ಎಚ್​​ಡಿಕೆ ನನಗಿರುವ ಮಾಹಿತಿ ಪ್ರಕಾರ ಹೆಚ್ಚುವರಿ ಪೋಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಇಂತಹದ್ದೊಂದು ದುಡುಕು ನಿರ್ಧಾರಕ್ಕೆ ಕಾರಣರಾಗಿದ್ದಾರೆ. ಈ ಬಗ್ಗೆ ಮುಖ್ಯ ಮಂತ್ರಿ, ಗೃಹ ಸಚಿವರು ಹಾಗೂ ಗೃಹ ಕಾರ್ಯದರ್ಶಿ ಅವರೊಂದಿಗೆ ಎರೆಡೆರಡು ಬಾರಿ ದೂರವಾಣಿಯಲ್ಲಿ ಚರ್ಚಿಸಿದ್ದೇನೆ. ರಾಮನಗರ ಜಿಲ್ಲೆಯ ಜನರು ಮತ್ತು ಜನ ಪ್ರತಿನಿಧಿಗಳು ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಯಾವುದೇ ಪ್ರತಿಭಟನೆಗೆ ಇಳಿಯದಂತೆ ಅವರ ಮನವೊಲಿಸಿದ್ದೇನೆ. ಇದನ್ನು ಸರಕಾರದ ಗಮನಕ್ಕೂ ತರಲಾಗಿದೆ ಎಂದರು.


    ಪಾದರಾಯನಪುರ ಗಲಭೆ ಸಂಬಂಧ ಒಟ್ಟು ಈವರೆಗೆ ನೂರಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ನ್ಯಾಯಾಂಗ ಬಂಧನಕ್ಕೆ ಒಳಗಾಗುವ ಈ ಎಲ್ಲರನ್ನೂ ಬೆಂಗಳೂರಿನ ಯಾವುದಾದರೂ ಸರಕಾರೀ ಆಸ್ಪತ್ರೆ, ಹಾಸ್ಟೆಲ್ ಅಥವಾ ಯಾವುದಾದರೂ ಕಟ್ಟಡದಲ್ಲಿ ಸೂಕ್ತ ಬಂದೊಬಸ್ತನೊಂದಿಗೆ ಇಡುವುದು ಸೂಕ್ತ. ಸರಕಾರ ಇಂತಹ ಸೂಕ್ಷ ವಿಚಾರದಲ್ಲಿ ಜನತೆಯೊಂದಿಗೆ ಚೆಲ್ಲಾಟವಾಡದೇ ತಕ್ಷಣವೇ ತುರ್ತು ಅಗತ್ಯ ಕ್ರಮ ತಗೊಳ್ಳಬೇಕೆಂದು ಎಂದು ಎಚ್​ಡಿಕೆ ಒತ್ತಾಯಿಸಿದರು.


    ರಾಮನಗರ ಕಾರಾಗೃಹದಲ್ಲಿ ಅಡುಗೆಯವರು ಮತ್ತು ಶುಚಿತ್ವದ ಸಿಬ್ಬಂದಿ ವಾಸಿಸುತ್ತಿದ್ದು ಜನರೊಂದಿಗೆ ಸಂಪರ್ಕದಲ್ಲಿರುತ್ತಾರೆ. ಗಲಭೆಕೊರರಿಂದ ಅಕಸ್ಮಾತ್ ಸೋಂಕು ತಗುಲಿದರೆ ಜಿಲ್ಲೆಯ ಸ್ವಾಸ್ಥ್ಯ ಹದಗೆಡುತ್ತದೆ ಎಂಬ ಕನಿಷ್ಠ ಪ್ರಜ್ಞೆ ಸರಕಾರಕ್ಕೆ ಬೇಡವೇ ಎಂದು ಕಿಡಿ ಕಾರಿದ್ದಾರೆ.

    Published by:Ganesh Nachikethu
    First published: