ಎಟಿಎಂಗಳು ಎಷ್ಟು ಸುರಕ್ಷಿತ; ನ್ಯೂಸ್ 18 ಕನ್ನಡ ವರದಿ ಪ್ರಸ್ತಾಪಿಸಿ ಸುರಕ್ಷೆ ವ್ಯವಸ್ಥೆ ಕಲ್ಪಿಸಲು ಸರ್ಕಾರಕ್ಕೆ ಎಚ್​ಡಿಕೆ ಆಗ್ರಹ

ಈ ಬಗ್ಗೆ ನ್ಯೂಸ್ 18 ಕನ್ನಡ ವಿಶೇಷ ವರದಿವನ್ನು ಪ್ರಕಟಿಸಿದೆ. ವರದಿ ಪ್ರಸಾರವಾದ ಬಳಿಕ ಈ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿ, ಸರ್ಕಾರ ಬ್ಯಾಂಕ್​ಗಳಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಿಎಂ ಬಿಎಸ್​ ಯಡಿಯೂರಪ್ಪ ಮತ್ತು ಎಚ್​ಡಿ ಕುಮಾರಸ್ವಾಮಿ

ಸಿಎಂ ಬಿಎಸ್​ ಯಡಿಯೂರಪ್ಪ ಮತ್ತು ಎಚ್​ಡಿ ಕುಮಾರಸ್ವಾಮಿ

  • Share this:
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಮಿತಿಮೀರಿದ್ದು, ಎಲ್ಲೆಡೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಆದರೆ, ದಿನನಿತ್ಯ ಸಾವಿರಾರು ಜನರು ಬಂದು ಹೋಗುವ ಎಟಿಎಂಗಳಲ್ಲಿ ಜನರ ಸುರಕ್ಷತೆಗಾಗಿ ಬ್ಯಾಂಕುಗಳು ಯಾವುದೇ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳದಿರುವ ಬಗ್ಗೆ ನ್ಯೂಸ್ 18 ಕನ್ನಡ ರಿಯಾಲಿಟಿ ಚೆಕ್​ ನಡೆಸಿದ ವೇಳೆ ಕಂಡು ಬಂದಿದೆ.

ಈ ಬಗ್ಗೆ ನ್ಯೂಸ್ 18 ಕನ್ನಡ ವಿಶೇಷ ವರದಿವನ್ನು ಪ್ರಕಟಿಸಿದೆ. ವರದಿ ಪ್ರಸಾರವಾದ ಬಳಿಕ ಈ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿ, ಸರ್ಕಾರ ಬ್ಯಾಂಕ್​ಗಳಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

ಬ್ಯಾಂಕ್ ಎಟಿಎಂಗಳಲ್ಲಿ ಗ್ರಾಹಕರಿಗೆ ಹ್ಯಾಂಡ್ ಸ್ಯಾನಿಟೈಸರ್​ಗಳನ್ನು ಒದಗಿಸದಿರುವ ಕುರಿತು ನ್ಯೂಸ್ 18 ಕನ್ನಡ ರಿಯಾಲಿಟಿ ಚೆಕ್ ಮೂಲಕ ಎಟಿಎಂ ಎಷ್ಟು ಸುರಕ್ಷಿತ ಅನ್ನುವ ವಾಸ್ತವತೆಯನ್ನು ಬಿಚ್ಚಿಟ್ಟಿದೆ. ಸರ್ಕಾರ ಎಲ್ಲಾ ಬ್ಯಾಂಕ್ ಎಟಿಎಂಗಳಲ್ಲಿ ಸ್ಯಾನಿಟೈಸರ್ ಸೌಲಭ್ಯಗಳನ್ನು ಒದಗಿಸುವಂತೆ ಸಂಬಂಧಿಸಿದ ಬ್ಯಾಂಕ್ ಗಳಿಗೆ ಸೂಚನೆ ನೀಡಬೇಕು ಎಂದು ಎಚ್​.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ.ಇದನ್ನು ಓದಿ: ಕೊರೋನಾ ವೈರಸ್ ಎಫೆಕ್ಟ್ ; ಇಂದಿನಿಂದ ಮದ್ಯ ಮಾರಾಟ ಬಂದ್
First published: