ಲಾಕ್‌ಡೌನ್​ನಿಂದ ಸಮಸ್ಯೆಗೆ ಸಿಲುಕಿದವರಿಗಾಗಿ ಇಂದಿನಿಂದ ‘ಎಚ್‌ಡಿಕೆ ಜನತಾ ದಾಸೋಹ’ ಆರಂಭ

ಸದ್ಯ ರಾಮನಗರ, ಚನ್ನಪಟ್ಟಣ ತಾಲೂಕಿನಲ್ಲಿ ದಾಸೋಹವನ್ನು ಆರಂಭಿಸಲಾಗಿದ್ದು, ತಮ್ಮ ಈ ನಡೆಯನ್ನೇ ಪಕ್ಷದ ಶಾಸಕರು, ಹಿಂದಿನ ಚುನಾವಣೆಯ ಪರಾಜಿತರು, ಮುಖಂಡರು ತಮ್ಮ ಕ್ಷೇತ್ರಗಳಲ್ಲಿ ಆರಂಭಿಸಬೇಕು ಎಂದೂ ಕುಮಾರಸ್ವಾಮಿ ಅವರು ಈಗಾಗಲೇ ಸಂದೇಶ ರವಾನಿಸಿದ್ದಾರೆ.

HR Ramesh | news18-kannada
Updated:April 1, 2020, 2:32 PM IST
ಲಾಕ್‌ಡೌನ್​ನಿಂದ ಸಮಸ್ಯೆಗೆ ಸಿಲುಕಿದವರಿಗಾಗಿ ಇಂದಿನಿಂದ ‘ಎಚ್‌ಡಿಕೆ ಜನತಾ ದಾಸೋಹ’ ಆರಂಭ
ರಾಮನಗರ, ಚನ್ನಪಟ್ಟಣದಲ್ಲಿ ಆರಂಭಿಸಿರುವ ಎಚ್​ಡಿಕೆ ಜನತಾ ದಾಸೋಹ.
  • Share this:
ಬೆಂಗಳೂರು: ಕೊರೋನಾ ವೈರಸ್​ ನಿಯಂತ್ರಣಕ್ಕಾಗಿ ಇಡೀ ದೇಶವನ್ನು ಲಾಕ್‌ಡೌನ್‌ ಮಾಡಲಾಗಿದೆ. ಇದರಿಂದ ಸಮಸ್ಯೆಗೆ ಸಿಲುಕಿದವರಿಗೆ ಆಹಾರ ಪೂರೈಸಲು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ’ಎಚ್‌ಡಿಕೆ ಜನತಾ ದಾಸೋಹ’ ಆರಂಭಿಸಿದ್ದಾರೆ.

ಬಡವರು, ವಲಸೆ ಕಾರ್ಮಿಕರು, ನಿರ್ಗತಿಕರು, ದುರ್ಬಲರಿಗೆ ಲಾಕ್‌ಡೌನ್‌ ಅವಧಿಯಲ್ಲಿ ನಿತ್ಯ ಆಹಾರ ಪೂರೈಸುವುದು ‘ಎಚ್‌ಡಿಕೆ ಜನತಾ ದಾಸೋಹ’ದ ಗುರಿಯಾಗಿದೆ. ಇದರ ಅಡಿಯಲ್ಲಿ ಬೆಳಗ್ಗೆ, ಮಧ್ಯಾಹ್ನ ಮತ್ತು ರಾತ್ರಿ ಪ್ರತಿ ಅವಧಿಯಲ್ಲೂ ಸಾವಿರ ಮಂದಿಗೆ ಭೋಜನೆ ನೀಡಲಾಗುತ್ತದೆ.

ಸದ್ಯ ರಾಮನಗರ, ಚನ್ನಪಟ್ಟಣ ತಾಲೂಕಿನಲ್ಲಿ ದಾಸೋಹವನ್ನು ಆರಂಭಿಸಲಾಗಿದ್ದು, ತಮ್ಮ ಈ ನಡೆಯನ್ನೇ ಪಕ್ಷದ ಶಾಸಕರು, ಹಿಂದಿನ ಚುನಾವಣೆಯ ಪರಾಜಿತರು, ಮುಖಂಡರು ತಮ್ಮ ಕ್ಷೇತ್ರಗಳಲ್ಲಿ ಆರಂಭಿಸಬೇಕು ಎಂದೂ ಕುಮಾರಸ್ವಾಮಿ ಅವರು ಈಗಾಗಲೇ ಸಂದೇಶ ರವಾನಿಸಿದ್ದಾರೆ.

ಇದಿಷ್ಟೇ ಅಲ್ಲದೇ, ರಾಮನಗರ ಜಿಲ್ಲೆಯ ಸಾರ್ವಜನಿಕರಿಗೆ ದಿನಸಿ ಪೂರೈಸಲೂ ಕುಮಾರಸ್ವಾಮಿ ಅವರು ನಿರ್ಧರಿಸಿದ್ದು, ಇದಕ್ಕಾಗಿ ಮಾಹಿತಿ ಸಂಗ್ರಹ ಕಾರ್ಯ ಆರಂಭವಾಗಿದೆ.

ಇದನ್ನು ಓದಿ: ಭಾರತದಲ್ಲಿ ಮುಂದುವರೆದ ಕೊರೋನಾ ಆರ್ಭಟ; 1,637 ಮಂದಿಗೆ ಸೋಂಕು, 38ಕ್ಕೇರಿದ ಸಾವಿನ ಸಂಖ್ಯೆ

ಮಾರಕ ಕೊರೋನಾ ಸೋಂಕಿಗೆ ಇದುವರೆಗೂ ದೇಶದಲ್ಲಿ 1400ಕ್ಕೂ ಹೆಚ್ಚು ಮಂದಿ ತುತ್ತಾಗಿದ್ದು, 38 ಜನರು ಬಲಿಯಾಗಿದ್ದಾರೆ. ಕರ್ನಾಟಕದಲ್ಲೂ ಸೋಂಕಿತರ ಸಂಖ್ಯೆ ನೂರರ ಗಡಿ ದಾಟಿದ್ದು, ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಮಾರಕ ಸೋಂಕು ನಿಯಂತ್ರಣಕ್ಕಾಗಿ ಇಡೀ ದೇಶವನ್ನು ಏಪ್ರಿಲ್ 14ರವರೆಗೆ ಲಾಕ್​ಡೌನ್ ಮಾಡಲಾಗಿದೆ.
First published: April 1, 2020, 2:29 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading