news18-kannada Updated:July 22, 2020, 4:34 PM IST
ಸಿದ್ದರಾಮಯ್ಯ-ಹೆಚ್.ಡಿ. ಕುಮಾರಸ್ವಾಮಿ.
ಬೆಂಗಳೂರು(ಜು.22): ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧೆ ಮಾಡಿದ್ದರೇ ರಾಜ್ಯದಲ್ಲಿ ಏಳರಿಂದ ಹತ್ತು ಸೀಟು ಗೆಲ್ಲಬಹುದಿತ್ತು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ಮೆಲುಕು ಹಾಕಿದ್ದರು. ಹೀಗಾಗಿಯೇ ನಾನು ಸಿದ್ಧೌಷಧದ ಬಗ್ಗೆ ನೆನಪಿಸಿಕೊಳ್ಳಬೇಕಾಯಿತು ಎಂದು ಟ್ವೀಟ್ ಮಾಡುಇವ ಮೂಲಕ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೆ ಕುಟುಕಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸರಣ ಟ್ವೀಟ್ ಮಾಡುವ ಮುಖೇನ ದಾಳಿ ನಡೆಸಿರುವ ಎಚ್ಡಿಕೆ, ‘ಅವರ ಕನಸು-ಕನವರಿಕೆಗಳನ್ನು ಮೈತ್ರಿ ಸರ್ಕಾರ ಹೋದ ನಂತರವೂ ಜಪಿಸುತ್ತಿರುವುದರಿಂದಲೇ ಹಳೆಯದನ್ನು ನೆನಪಿಸಿಕೊಳ್ಳಬೇಕಾಯಿತು. ನಮ್ಮ ಅವರ ದೋಸ್ತಿ ಕಳಚಿದ ನಂತರ ಈ ಬಗ್ಗೆ ನಾನು ಮಾತನಾಡಿರಲಿಲ್ಲ. ಕಾಂಗ್ರೆಸ್ ನಾಯಕರೇ ಪದೇಪದೇ ಮೈತ್ರಿ ಮುಗಿದ ಅಧ್ಯಾಯ ಎಂದು ಈಗ ತುಟಿ ಬಿಚ್ಚುತ್ತಿರುವುದರಿಂದ ನಾನು ಮೌನ ಮುರಿಯಬೇಕಾಯಿತು ಎಂದು ಮತ್ತೊಂದು ಟ್ವೀಟ್ನಲ್ಲಿ ಕಿಡಿಕಾರಿದ್ದಾರೆ.
ಕಾಂಗ್ರೆಸ್ ನಾಯಕರು ಈಗ ಮರಣೋತ್ತರ ಪರೀಕ್ಷೆ ಬಗ್ಗೆ ರಾಗ ಎಳೆಯುತ್ತಿದ್ದಾರೆ. ಆದರೆ ವರದಿಯಲ್ಲಿ ಏನಿದೆ ಎಂಬ ಸತ್ಯಾಂಶವನ್ನು ನಾನು ಹೇಳಿದರೆ ಆ ಭಾಷೆ ನನಗೆ ಅರ್ಥವಾಗಲಿಲ್ಲ ಎಂದು ಜಾರಿಕೊಳ್ಳುವುದು ತರವಲ್ಲ ಎಂದು ಎಚ್ಡಿಕೆ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಮುನ್ನ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಮೈತ್ರಿ ಸರ್ಕಾರ ಪತನವಾಗಿದ್ದು ಇಂದಿಗೆ ಮುಗಿದು ಹೋದ ಕಥೆ. ಈ ಕುರಿತು ಮಾತನಾಡಿ ಏನೂ ಪ್ರಯೋಜನವಿಲ್ಲ. ಆದರೆ, ಹೆಚ್.ಡಿ. ಕುಮಾರಸ್ವಾಮಿ ಅವರು ಈ ವಿಚಾರವನ್ನು ಯಾಕೆ ರೀಕಾಲ್ ಮಾಡಿಕೊಳ್ಳುತ್ತಿದ್ದಾರೋ? ನನಗಂತೂ ಗೊತ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದರು.
ಕರ್ನಾಟಕ ವಿಧಾನಸಭಾ ಚುನಾವಣೆ 2018ರ ಬಳಿಕ ಕಾಂಗ್ರೆಸ್ ಮತ್ತು ಜೆಡಿಎಸ್ ಒಂದಾಗಿ ರಚಿಸಿದ್ದ ಮೈತ್ರಿ ಸರ್ಕಾರ ಪತನವಾಗಿ ನಾಳೆಗೆ ಒಂದು ವರ್ಷವಾಗಲಿದೆ. ಈ ಸಂದರ್ಭದಲ್ಲಿ ಮತ್ತೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ವಿರುದ್ಧ ಇಂದು ಪತ್ರ ಬರೆಯುವ ಮೂಲಕ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದರು. ಅಲ್ಲದೆ, "ತಮ್ಮ ಸರ್ಕಾರ ಉರುಳಲು ಸಿದ್ಧೌಷಧವೇ ಕಾರಣ" ಎಂದು ಸಿದ್ದರಾಮಯ್ಯ ವಿರುದ್ಧ ನೇರಾ ನೇರ ಟೀಕೆ ಮಾಡಿದ್ದರು.
ಇದನ್ನೂ ಓದಿ: ಮೈತ್ರಿ ಸರ್ಕಾರದ ಪತನ ಮುಗಿದುಹೋದ ಕಥೆ, ಈಗೇಕೆ ಅದರ ರೀಕಾಲ್; ಕುಮಾರಸ್ವಾಮಿಗೆ ಸಿದ್ದರಾಮಯ್ಯ ಟಾಂಗ್ಇದಕ್ಕೆ ಅಷ್ಟೇ ಲೇವಡಿಯಾಗಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, " ಮೈತ್ರಿ ಸರ್ಕಾರ ಪತನವಾಗಿದ್ದು ಇಂದಿಗೆ ಮುಗಿದು ಹೋದ ಕಥೆ. ಇದನ್ನು ಕುಮಾರಸ್ವಾಮಿ ಮತ್ತೆ ಮತ್ತೆ ಏಕೆ ರೀಕಾಲ್ ಮಾಡಿಕೊಳ್ತಾರೋ ಗೊತ್ತಿಲ್ಲ? ಪ್ರಸ್ತುತ ಬಿಜೆಪಿ ಪಕ್ಷ ಅಧಿಕಾರದಲ್ಲಿದೆ. ಇವರ ಬಗ್ಗೆ ಮಾತಾಡೋದು ಬಿಟ್ಟು ಕುಮಾರಸ್ವಾಮಿ ಬಗ್ಗೆ ನಾನ್ಯಾಕೆ ಮಾತಾಡಲಿ? ಅವರ ತಾತ್ಪರ್ಯವೆಲ್ಲ ನಂಗೆ ಅರ್ಥವಾಗಲ್ಲ. ಇನ್ನೂ ಅವರು ಬರೆದಿರೋ ಕನ್ನಡವೂ ನನಗೆ ಅರ್ಥವಾಗಲ್ಲ" ಎಂದು ಅಪಹಾಸ್ಯ ಮಾಡಿದ್ದಾರೆ.
Published by:
Ganesh Nachikethu
First published:
July 22, 2020, 4:29 PM IST