ತಾರತಮ್ಯ ಮಾಡುವ ಕೇಂದ್ರದ ನಿರೀಕ್ಷೆ ಬಿಟ್ಟು, ಬ್ಲಾಕ್​ ಫಂಗಸ್​ ಔಷಧ ನೇರ ಖರೀದಿಗೆ ರಾಜ್ಯ ಸರ್ಕಾರ ಮುಂದಾಗಲಿ; ಎಚ್​ಡಿಕೆ

ಕಪ್ಪು ಶಿಲೀಂಧ್ರದ ರೋಗ ರಾಜ್ಯದಲ್ಲಿ ಮತ್ತಷ್ಟು ಉಲ್ಬಣಗೊಳ್ಳಲಿದೆ. ರಾಜ್ಯ ಸರ್ಕಾರ ಈ ರೋಗದ ಔಷಧಗಳ ಸಂಗ್ರಹಕ್ಕೆ ಇನ್ನು ಕೇಂದ್ರ ಸರ್ಕಾರದ ನಿರೀಕ್ಷೆಯಲ್ಲಿದೆ

ಹೆಚ್​.ಡಿ ಕುಮಾರಸ್ವಾಮಿ.

ಹೆಚ್​.ಡಿ ಕುಮಾರಸ್ವಾಮಿ.

 • Share this:
  ಬೆಂಗಳೂರು (ಮೇ. 22): ಕೊರೋನಾ ಸೋಂಕಿನ ಬೆನ್ನಲ್ಲೇ ಇದೀಗ ಕಪ್ಪು ಶಿಲೀಂಧ್ರ  ರೋಗ ಸೋಂಕಿತರಿಗೆ ಮಾರಕವಾಗಿ ಕಾಡುತ್ತಿದೆ. ಬಹುತೇಕ ಸೋಂಕಿತರಲ್ಲಿ ಕಂಡು ಬರುತ್ತಿರುವ ಈ ಬ್ಲಾಕ್​ ಫಂಗಸ್ ಸೋಂಕಿತರ ಜೀವಕ್ಕೆ ಅಪಾಯ ತಂದೊಡ್ಡುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಮತ್ತಷ್ಟು ಬ್ಲಾಕ್​ ಫಂಗಸ್​ ಪ್ರಕರಣಗಳು ಹೆಚ್ಚಾಗಲಿದೆ. ಆದರೂ ಸರ್ಕಾರ ಇಂತಹ ಮಾರಕ ರೋಗದ ಬಗ್ಗೆ ಸರ್ಕಾರ ನಿರ್ಲಕ್ಷ್ಯ ತಾಳಿದೆ ಎಂದು ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್​ ಮಾಡಿರುವ ಅವರು, ಕಪ್ಪು ಶಿಲೀಂಧ್ರದ ರೋಗ ರಾಜ್ಯದಲ್ಲಿ ಮತ್ತಷ್ಟು ಉಲ್ಬಣಗೊಳ್ಳಲಿದೆ. ರಾಜ್ಯ ಸರ್ಕಾರ ಈ ರೋಗದ ಔಷಧಗಳ ಸಂಗ್ರಹಕ್ಕೆ ಇನ್ನು ಕೇಂದ್ರ ಸರ್ಕಾರದ ನಿರೀಕ್ಷೆಯಲ್ಲಿದೆ. ಈಗಾಗಲೇ ಆಕ್ಸಿಜನ್​, ಲಸಿಕೆಯಲ್ಲಿ ಕೇಂದ್ರದಿಂದ ಇಲ್ಲ ಎನಿಸಿಕೊಂಡಿರುವ ರಾಜ್ಯ ಸರ್ಕಾರ ಈ ರೋಗದ ವಿಚಾರದಲ್ಲಿ ಇನ್ನಾದರೂ ಸ್ವತಂತ್ರ ನಿರ್ಧಾರ ತೆಗೆದುಕೊಳ್ಳಲಿ ಎಂದು ಎಚ್ಚರಿಸಿದ್ದಾರೆ.

  ಕಪ್ಪು ಶಿಲೀಂದ್ರ ಚಿಕಿತ್ಸೆಗೆ ಬೇಕಿರುವ ಆಂಫೊಟೆರಿಸಿನ್​ ಬಿ ಔಷಧ ಹಾಹಾಕಾರ ರಾಜ್ಯದಲ್ಲಿ ಈಗಾಗಲೇ ಕಂಡು ಬಂದಿದೆ. ಈ ನಡುವೆ ಈ ಪ್ರಕರಣಗಳು ಹೆಚ್ಚುತ್ತಲೇ ಇವೆ, ಸೂಕ್ತ ಔಷಧ ಸಿಗದೇ ಜನರು ಪರದಾಡುತ್ತಿದ್ದಾರೆ. ತಕ್ಷಣಕ್ಕೆ ಈ ಔಷಧಗಳ ವ್ಯವಸ್ಥೆಗೆ ಮುಂದಾಗದ ಸರ್ಕಾರ ಇದಕ್ಕಾಗಿ ಕೇಂದ್ರ ಸರ್ಕಾರದತ್ತ ನೊಡುತ್ತಿದೆ. ಮುಂದಿನ ದಿನಗಳಲ್ಲಿ ಔಷಧ ನೀಡುವುದಾಗಿ ಕೇಂದ್ರ ಹೇಳಿದೆ. ಆದರೂ ಕೂಡ ಇತರೆ ರಾಜ್ಯಗಳು ಕೇಂದ್ರಕ್ಕೆ ಕಾಯದೇ ಖಾಸಗಿ ಸಂಸ್ಥೆಗಳಿಂದ ನೇರವಾಗಿ ಖರೀದಿ ಪ್ರಕ್ರಿಯೆ ಮುಂದಾಗಿದ್ದು, ಜನರ ಹಿತರಕ್ಷಣೆ ಮಾಡುತ್ತಿವೆ. ಆದರೆ, ರಾಜ್ಯ ಸರ್ಕಾರ ಮಾತ್ರ ಇನ್ನು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಈ ಮಾರಕ ರೋಗದ ವಿಚಾರದಲ್ಲಿ ರಾಜ್ಯಕ್ಕೆ ಮಾತ್ರ ಏಕೆ ಇಷ್ಟು ಆಲಸ್ಯ? ಎಂದು ಪ್ರಶ್ನಿಸಿದ್ದಾರೆ.

  ರಾಜ್ಯದಲ್ಲಿ ಈ ಪ್ರಕರಣಗಳು ಹೆಚ್ಚುದ್ದು ಸರ್ಕಾರದ ರಾಕ್ಷಸ ಆಲಸ್ಯದಲ್ಲಿರುವ ಹೊತ್ತಲ್ಲೇ ತೆಲಂಗಾಣ ಸರ್ಕಾರ ಆಂಫೊಟೆರಿಸಿನ್​ ಬಿ ತಯಾರಕ ಸಂಸ್ಥೆಗಳಿಗೆ ಪತ್ರ ಬರೆದು ಔಷಧ ಪೂರೈಸಲು ಕೋರಿದೆ. ಇದರ ಮಾಹಿತಿ ನನಗಿದೆ. ಇದು ರೋಗದ ವಿರುದ್ಧ ಸರ್ಕಾರವೊಂದು ವರ್ತಿಸುವ ರೀತಿ ಮತ್ತು ಸರ್ಕಾರಕ್ಕೆ ಜನರ ಮೇಲಿರುವ ಕಾಳಜಿ   ಆದರೆ, ಕನ್ನಡಿಗರ ಮೇಲೆ ಬಿಜೆಪಿ ಸರ್ಕಾರಕ್ಕೆ ಏಕಿಲ್ಲ ಕಾಳಜಿ? ಎಂದು ನೆರೆಯ ರಾಜ್ಯದ ಆಡಳಿತ ಕ್ರಮವನ್ನು ವಿವರಿಸುವ ಮೂಲಕ ಪ್ರಶ್ನಿಸಿದ್ದಾರೆ.

  ಇದನ್ನು ಓದಿ: ದೇಶಾದ್ಯಂತ 7,250 ಬ್ಲ್ಯಾಕ್ ಫಂಗಸ್ ಕೇಸ್ ಪತ್ತೆ: ರಾಜ್ಯದಲ್ಲಿ ಉಚಿತ ಚಿಕಿತ್ಸೆ ಘೋಷಣೆ

  ಮುಂದಿನ ದಿನಗಳಲ್ಲಿ ಪ್ರತಿ ವಾರ 400 ಮಂದಿ ಕಪ್ಪು ಶಿಲೀಂಧ್ರ ರೋಗಕ್ಕೆ ಗುರಿಯಾಗುವುದಾಗಿ ತಜ್ಞರು ಹೇಳಿದ್ದಾರೆ. ಈ ಸಂಖ್ಯೆ ಹೆಚ್ಚಲೂಬಹುದು. ಗಮನಿಸಬೇಕಾದ್ದೇನೆಂದರೆ, ಈ ಕಾಯಿಲೆಗೆ ಮೊದಲ 2 ದಿನಗಳಲ್ಲೇ ಸೂಕ್ತ ಚಿಕಿತ್ಸೆ ನೀಡಬೇಕು. ಇಲ್ಲವಾದರೆ, ಸಾವು ತರುವ ರೋಗವಾಗಿ ಇದು ಪರಿಣಮಿಸುತ್ತದೆ. ಆದರೆ, ರಾಜ್ಯ ಸರ್ಕಾರ ಔಷಧ ಹೊಂದಿಸಿದೆಯೇ? ಎಂದು ಪ್ರಶ್ನಿಸಿದ್ದಾರೆ.

  ಇದನ್ನು ಓದಿ: ಶುಚಿತ್ವವೇ ಮರೀಚಿಕೆ ಈ ಆಸ್ಪತ್ರೆಯಲ್ಲಿ; ಸೋಂಕಿತರು, ವೈದ್ಯರ ಕಷ್ಟ ಹೇಳತೀರದು

  ಆಕ್ಸಿಜನ್‌, ಲಸಿಕೆಗಾಗಿ ಕೇಂದ್ರದತ್ತ ನೋಡಿದ ರಾಜ್ಯ 'ಇಲ್ಲ' ಎನಿಸಿಕೊಂಡಿದೆ. ಅದರ ಪರಿಣಾಮ ಜನರು ಅನುಭವಿಸುತ್ತಿದ್ದಾರೆ. ಈಗ ಕಪ್ಪು ಶಿಲೀಂಧ್ರದ ವಿಚಾರದಲ್ಲೂ ರಾಜ್ಯ ಸರ್ಕಾರ ಆಲಸ್ಯದಿಂದ ಕೇಂದ್ರದ ಕಡೆ ನೋಡುತ್ತಿದೆ. ಈಗಲೂ ಕೇಂದ್ರ ಇಲ್ಲ ಎಂದಿದೆ. ರಾಜ್ಯ ಸರ್ಕಾರ ಈ ವಿಚಾರದಲ್ಲಾದರೂ ಸ್ವತಂತ್ರ ನಿರ್ಧಾರ ಕೈಗೊಳ್ಳಲಿ. ಜನರ ಜೀವ ಉಳಿಸಲಿ ಎಂದು ಮನವಿ ಮಾಡಿದ್ದಾರೆ.

  ರಾಜ್ಯದ ಬಿಜೆಪಿ ಸರ್ಕಾರವು ಪ್ರತಿಯೊಂದಕ್ಕೂ ಕೇಂದ್ರದ ಕಡೆ ನೋಡದೇ, ತಾನೇ ನಿರ್ಧಾರಗಳನ್ನು ಕೈಗೊಳ್ಳಲಿ. ಔಷಧಕ್ಕಾಗಿ ಪರ್ಯಾಯ ಮೂಲಗಳನ್ನು ಹುಡಕಲಿ. ಕಪ್ಪು ಶಿಲೀಂಧ್ರದ ಔಷಧ ಎಲ್ಲೆಲ್ಲಿ ಲಭ್ಯವಿದೆ ಎಂದು ನಾನು ಈ ಹಿಂದೆಯೇ ಸರ್ಕಾರಕ್ಕೆ ತಿಳಿಸಿದ್ದೇನೆ. ಕೂಡಲೇ ಔಷಧ ತಯಾರಕ ಸಂಸ್ಥೆಗಳಿಗೆ ಪತ್ರ ಬರೆದು ಪೂರೈಕೆಗೆ ಸರ್ಕಾರ ಮನವಿ ಮಾಡಬೇಕು.
  Published by:Seema R
  First published: