HOME » NEWS » Coronavirus-latest-news » HDK AND ZAMEER AHMED URGES TO FOLLOW THE RULES AND REGULATIONS OF LOCKDOWN AFTER PADARAYANAPURA VIOLENCE MAK

ಪಾದರಾಯನಪುರ ಗಲಾಟೆ: ಗೂಂಡಾಗಿರಿ ಅಪರಾಧ, ಧರ್ಮ ಯಾವುದೇ ಇರಲಿ - ಕಾನೂನು ಪಾಲಿಸಿ: ಹೆಚ್‌ಡಿಕೆ, ಜಮೀರ್

HD Kumaraswamy: ಪೊಲೀಸರು, ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಆಡಳಿತ ವ್ಯವಸ್ಥೆಯ ನೈತಿಕ ಬಲ ಕುಗ್ಗಿಸುವ ಮತ್ತು ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ಮಾಡಿ ದಂಗೆ ಏಳುವವರರ ಹೆಡೆಮುರಿ ಕಟ್ಟಬೇಕು ಎಂದು ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

MAshok Kumar | news18-kannada
Updated:April 20, 2020, 9:55 AM IST
ಪಾದರಾಯನಪುರ ಗಲಾಟೆ: ಗೂಂಡಾಗಿರಿ ಅಪರಾಧ, ಧರ್ಮ ಯಾವುದೇ ಇರಲಿ - ಕಾನೂನು ಪಾಲಿಸಿ: ಹೆಚ್‌ಡಿಕೆ, ಜಮೀರ್
ಹೆಚ್​.ಡಿ. ಕುಮಾರಸ್ವಾಮಿ
  • Share this:
ಬೆಂಗಳೂರು (ಏಪ್ರಿಲ್ 20); ಭಾನುವಾರ ರಾತ್ರಿ ನಗರದ ಪಾದರಾಯನಪುರದಲ್ಲಿ ಪೊಲೀಸರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿಗಳ ಮೇಲೆ ಸ್ಥಳೀಯರು ಹಲ್ಲೆ ನಡೆಸಿರುವುದನ್ನು ತೀವ್ರವಾಗಿ ಖಂಡಿಸಿರುವ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಮತ್ತು ಮಾಜಿ ಸಚಿವ ಜಮೀರ್ ಅಹಮದ್‌ "ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ" ಎಂದು ಒತ್ತಾಯಿಸಿದ್ದಾರೆ.

ಪಾದರಾಯನಪುರವನ್ನು ಈಗಾಗಲೇ ಹಾಟ್‌ಸ್ಪಾಟ್ ಎಂದು ಗುರುತಿಸಲಾಗಿದ್ದು, ಕೊರೋನಾ ಸೋಂಕಿತರ ಜೊತೆ ಸಂಪರ್ಕ ಹೊಂದಿದ್ದವರನ್ನು ಕ್ವಾರಂಟೈನ್‌ನಲ್ಲಿ ಇಡಲು ನಿನ್ನೆ ರಾತ್ರಿ ಪೊಲೀಸರು ಮತ್ತು ವೈದ್ಯಕೀಯ ಸಿಬ್ಬಂದಿಗಳು ಮುಂದಾಗಿದ್ದಾರೆ. ಈ ವೇಳೆ ಸ್ಥಳೀಯರು ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಈ ಕುರಿತ ವಿಡಿಯೋ ಇದೀಗ ವೈರಲ್ ಆಗುತ್ತಿದೆ.

ಈ ಗಲಾಟೆಯ ಕುರಿತು ಸರಣಿ ಟ್ವೀಟ್ ಮಾಡುವ ಮೂಲಕ ಕಿಡಿಕಾರಿರುವ ಹೆಚ್‌ಡಿಕೆ, “ಬೆಂಗಳೂರಿನ ಪಾದರಾಯನಪುರದಲ್ಲಿ ಕೊರೋನಾ ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಗೆ ಕಳುಹಿಸಲು ಮುಂದಾಗಿದ್ದ ಪೊಲೀಸರು, ವೈದ್ಯಕೀಯ, ಬಿಬಿಎಂಪಿ ಸಿಬ್ಬಂದಿಗಳ ಮೇಲೆ ಉದ್ರಿಕ್ತ ಗುಂಪು ಹಲ್ಲೆ ನಡೆಸಿರುವುದು ಖಂಡನೀಯ. ಮುಲಾಜಿಲ್ಲದೆ ಅಂಥವರ ವಿರುದ್ಧ ಕಠಿಣ ಕಾನೂನು ಅಸ್ತ್ರ ಪ್ರಯೋಗಿಸಬೇಕು” ಎಂದಿದ್ದಾರೆ.
ಮತ್ತೊಂದು ಟ್ವೀಟ್‌ನಲ್ಲಿ, “ದೇಶದ ಕಾನೂನಿಗೆ ವ್ಯತಿರಿಕ್ತವಾಗಿ ನಡೆದುಕೊಳ್ಳುವವರನ್ನು ಮುಲಾಜಿಲ್ಲದೆ 'ಬಲಿ' ಹಾಕಬೇಕು. ಇಡೀ ಜಗತ್ತು ಎದುರಿಸುತ್ತಿರುವ ಕರೋನಾ ವೈರಸ್ ವಿರುದ್ಧ ಜನತೆ ಸಂಘರ್ಷ ಮಾಡುತ್ತಿದ್ದಾರೆ. ಇಂತಹ ವಿಷಮ ಪರಿಸ್ಥಿತಿಯಲ್ಲಿ ಧರ್ಮದ ಗುರಾಣಿಯನ್ನು ಅಡ್ಡ ತಂದು ವ್ಯವಸ್ಥೆ ಬುಡಮೇಲು ಮಾಡುವುದನ್ನು ಅತ್ಯುಗ್ರವಾಗಿ ಖಂಡಿಸುತ್ತೇನೆ.



ಪೊಲೀಸರು, ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಆಡಳಿತ ವ್ಯವಸ್ಥೆಯ ನೈತಿಕ ಬಲ ಕುಗ್ಗಿಸುವ ಮತ್ತು ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ಮಾಡಿ ದಂಗೆ ಏಳುವವರರ ಹೆಡೆಮುರಿ ಕಟ್ಟಬೇಕು” ಎಂದು ಅಭಿಪ್ರಾಯಪಟ್ಟಿದ್ದಾರೆ.

ಮಾಜಿ ಸಚಿವ ಜಮೀರ್ ಅಹಮದ್ ಸಹ ಪಾದರಾಯನಪುರ ಗಲಾಟೆ ಕುರಿತು ವಿಷಾಧ ವ್ಯಕ್ತಪಡಿಸಿದ್ದು, “ನಿನ್ನೆ ಪಾದರಾಯನಪುರ ಬಡಾವಣೆಯಲ್ಲಿ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಮೇಲೆ ಸ್ಥಳೀಯ ನಿವಾಸಿಗಳು ಹಲ್ಲೆಗೆ ಯತ್ನಿಸಿರುವುದು ದುಃಖಕರ.



ಸರ್ಕಾರ, ವೈದ್ಯಕೀಯ ಸಿಬ್ಬಂದಿಗಳು ಹಾಗೂ ಪೊಲೀಸ್ ಇಲಾಖೆ ಹಗಲಿರುಳು ಶ್ರಮಿಸುತ್ತಿರುವುದು ನಿಮ್ಮ ಕ್ಷೇಮಕ್ಕಾಗಿ. ಅವರೊಂದಿಗೆ ಸಹಕರಿಸಿ, ಶಾಂತಿ ಕಾಪಾಡುವಂತೆ ಮನವಿ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಬಾವಲಿ ಇರುವ ಮರವನ್ನೇ ಕಡಿದು ಹಾಕಿ; ಬಿಬಿಎಂಪಿಗೆ ಬೆಂಗಳೂರಿಗರಿಂದ ಬರುತ್ತಿದೆ ಹೀಗೊಂದು ಮನವಿ
Youtube Video
First published: April 20, 2020, 9:27 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories