HOME » NEWS » Coronavirus-latest-news » HDK URGES TO CM BSY TO BOOK POLICE COMPLAINT ON THOSE WHO SPREAD COMMUNAL HATRED THROUGH NEWS MEDIA MAK

ಮಾಧ್ಯಮಗಳ ಮೂಲಕ ಸಮಾಜದಲ್ಲಿ ಕೋಮು ದ್ವೇಷ ಬಿತ್ತುವ ಎಲ್ಲರ ಮೇಲೂ ಕೇಸು ದಾಖಲಿಸಿ: ಬಿಎಸ್‌ವೈಗೆ ಹೆಚ್‌ಡಿಕೆ ಒತ್ತಾಯ

ಪ್ರಿಂಟ್, ಟಿವಿ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಸಮುದಾಯಗಳ ವಿರುದ್ಧ ದ್ವೇಷವನ್ನು ಬಿತ್ತರಿಸುವ ಎಲ್ಲರ ಮೇಲೂ ಸ್ವಯಂ ಪ್ರೇರಿತ ಕೇಸು ದಾಖಲಿಸಿಕೊಳ್ಳಲು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಲು ಮುಖ್ಯಮಂತ್ರಿಗಳನ್ನು ಆಗ್ರಹಿಸುತ್ತೇನೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

MAshok Kumar | news18-kannada
Updated:April 8, 2020, 4:24 PM IST
ಮಾಧ್ಯಮಗಳ ಮೂಲಕ ಸಮಾಜದಲ್ಲಿ ಕೋಮು ದ್ವೇಷ ಬಿತ್ತುವ ಎಲ್ಲರ ಮೇಲೂ ಕೇಸು ದಾಖಲಿಸಿ: ಬಿಎಸ್‌ವೈಗೆ ಹೆಚ್‌ಡಿಕೆ ಒತ್ತಾಯ
ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಸಿಎಂ ಯಡಿಯೂರಪ್ಪ
  • Share this:
ಬೆಂಗಳೂರು (ಏಪ್ರಿಲ್ 08); ಇಡೀ ರಾಜ್ಯ-ದೇಶ ಕೊರೋನಾ ಭೀತಿಯಲ್ಲಿ ನಲುಗಿರುವ ಸಂದರ್ಭದಲ್ಲೂ ಸಮಾಜದಲ್ಲಿ ಮಾಧ್ಯಮಗಳ ಮೂಲಕ ಕೋಮು ದ್ವೇಷ ಬಿತ್ತುತ್ತಿರುವವರ ವಿರುದ್ಧ ಮತ್ತು ಪ್ರಚೋಧನಾಕಾರಿ ಹೇಳಿಕೆ ನೀಡುತ್ತಿರುವ ತಮ್ಮದೇ ಪಕ್ಷದ ನಾಯಕರ ವಿರುದ್ಧ ಸಿಎಂ ಯಡಿಯೂರಪ್ಪ ಸ್ವಯಂ ಪ್ರೇರಿತರಾಗಿ ಪ್ರಕರಣ ದಾಖಲಿಸಬೇಕು ಎಂದು ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ದೆಹಲಿಯ ನಿಜಾಮುದ್ದೀನ್ ಮರ್ಕಜ್ ಮಸೀದಿ ಮತ್ತು ಬೆಂಗಳೂರಿನ ಆಶಾ ಕಾರ್ಯಕರ್ತೆಯರ ಮೇಲಿನ ಹಲ್ಲೆ ಪ್ರಕರಣವನ್ನು ಮುಂದಿಟ್ಟು ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಮುಸ್ಲಿಂ ಸಮುದಾಯದ ಜನರ ವಿರುದ್ಧ ವ್ಯಾಪಕ ದಾಳಿ ನಡೆಸಲಾಗುತ್ತಿದೆ.

ಇದನ್ನು ಖಂಡಿಸಿದ್ದ ಮುಖ್ಯಮಂತ್ರಿ ಯಡಿಯೂರಪ್ಪ, “ಯಾವುದೋ ಒಂದೆರಡು ಅಹಿತಕರ ಘಟನೆಗಳನ್ನು ಆಧಾರವಾಗಿಟ್ಟುಕೊಂಡು ಇಡೀ ಮುಸ್ಲಿಂ ಸಮುದಾಯದ ಜನರನ್ನು ಅಪರಾಧಿಗಳು ಎಂಬಂತೆ ಬಿಂಬಿಸುವುದು ತಪ್ಪು. ಮುಸ್ಲಿಂ ಬಾಂಧವರ ಕುರಿತು ಯಾರೇ ಮಾತನಾಡಿದರು ಅವರ ವಿರುದ್ಧ ತಕ್ಕ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಕಟು ಎಚ್ಚರಿಕೆ ನೀಡಿದ್ದರು.


ಇದರ ಬೆನ್ನಿಗೆ ಇಂದು ಬಿಎಸ್‌ವೈ ಹೇಳಿಕೆಯನ್ನು ಪ್ರಶಂಶಿಸುತ್ತಲೇ ಮಾಧ್ಯಮಗಳ ಇಂತಹ ನಡೆಯ ಕುರಿತು ಸರಣಿ ಟ್ವೀಟ್ ಮಾಡುವ ಮೂಲಕ ಕಿಡಿಕಾರಿರುವ ಮಾಜಿ ಸಿಎಂ ಕುಮಾರಸ್ವಾಮಿ, “ನೀವು ತಳೆದ ನಿಲುವಿನ ಬಗ್ಗೆ ನಿಮ್ಮದೇ ಪಕ್ಷದ ಕೆಲವು ಜನಪ್ರತಿನಿಧಿಗಳು ಪ್ರಚೋದನಕಾರಿ ಮತ್ತು ವ್ಯತಿರಿಕ್ತ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮುಖ್ಯಮಂತ್ರಿಗಳಾದ ನೀವು ಇಂತಹವುಗಳಿಗೂ ಕಡಿವಾಣ ಹಾಕಬೇಕಿದೆ.ಹಿಂದೆಂದೂ ಕಂಡರಿಯದ ರಾಷ್ಟ್ರೀಯ ಅರೋಗ್ಯ ಸಂಕಟದ ಈ ದಿನಗಳಲ್ಲಿ ಕೋಮು ದ್ವೇಷ ಹೊತ್ತಿಸುವುದು ಅಕ್ಷಮ್ಯ ಅಪರಾಧ. ಅಪರಾಧಿಗಳ ವಿರುದ್ಧ ತಕ್ಷಣವೇ ಕಠಿಣ ಕ್ರಮ ಜರುಗಿಸದೇ ಹೋದರೆ ರಾಜ್ಯವೇ ಕೋಮುದಳ್ಳುರಿಗೆ ಬಲಿಯಾಗುವ ಅಪಾಯ ತಪ್ಪಿದ್ದಲ್ಲ.ಪ್ರಿಂಟ್, ಟಿವಿ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಸಮುದಾಯಗಳ ವಿರುದ್ಧ ದ್ವೇಷವನ್ನು ಬಿತ್ತರಿಸುವ ಎಲ್ಲರ ಮೇಲೂ ಸ್ವಯಂ ಪ್ರೇರಿತ ಕೇಸು ದಾಖಲಿಸಿಕೊಳ್ಳಲು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಲು ಮುಖ್ಯಮಂತ್ರಿಗಳನ್ನು ಆಗ್ರಹಿಸುತ್ತೇನೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಕೊರೋನಾ ಹರಡಲು ಮುಸ್ಲಿಮರೇ ಕಾರಣ ಎಂದ ಇಬ್ಬರು ಬಿಜೆಪಿ ಶಾಸಕರನ್ನು ಬಂಧಿಸಿ‘ - ಸಿದ್ದರಾಮಯ್ಯ ಆಗ್ರಹ
First published: April 8, 2020, 4:23 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading