ದೆಹಲಿಯಲ್ಲಿ ಕೊರೋನಾ ಸೋಂಕು ಕಮ್ಯುನಿಟಿ ಸ್ಪ್ರೆಡ್ ಆಗಿದೆ; ಆದರೆ ಕೇಂದ್ರ ಸರ್ಕಾರ ಘೋಷಣೆ ಮಾಡುತ್ತಿಲ್ಲ; ಸತ್ಯೇಂದ್ರ ಜೈನ್

ಕಳೆದ 24 ಗಂಟೆಯಲ್ಲಿ ದೆಹಲಿಯಲ್ಲಿ ಹೊಸದಾಗಿ 1366 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 31,309ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಕೊರೋನಾದಿಂದ 31 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 905ಕ್ಕೆ ಏರಿಕೆಯಾಗಿದೆ.

news18-kannada
Updated:June 10, 2020, 8:51 AM IST
ದೆಹಲಿಯಲ್ಲಿ ಕೊರೋನಾ ಸೋಂಕು ಕಮ್ಯುನಿಟಿ ಸ್ಪ್ರೆಡ್ ಆಗಿದೆ; ಆದರೆ ಕೇಂದ್ರ ಸರ್ಕಾರ ಘೋಷಣೆ ಮಾಡುತ್ತಿಲ್ಲ; ಸತ್ಯೇಂದ್ರ ಜೈನ್
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್
  • Share this:
ನವದೆಹಲಿ(ಜೂ.10): ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮಾರಕ ಕೊರೋನಾ ಸೋಂಕು ಸಮುದಾಯಕ್ಕೂ ಹರಡಿದೆ. ಆದರೆ ಕೇಂದ್ರ ಸರ್ಕಾರ ಈ ವಿಷಯವನ್ನು ಅಧಿಕೃತವಾಗಿ ಘೋಷಣೆ ಮಾಡುತ್ತಿಲ್ಲ ಎಂದು ದೆಹಲಿಯ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಹೇಳಿದ್ದಾರೆ.

ದೆಹಲಿಯಲ್ಲಿ ಕೊರೋನಾ ಸೋಂಕು ಸಮುದಾಯಕ್ಕೂ ಹರಡಿರುವ ವಿಷಯವನ್ನು ಪ್ರಖ್ಯಾತ ಏಮ್ಸ್ ಆಸ್ಪತ್ರೆಯ ವೈದ್ಯ ಡಾ. ರಂದೀಪ್ ಗುಲೇರಿಯಾ ಅವರೇ ಒಪ್ಪಿಕೊಂಡಿದ್ದಾರೆ. ಆದರೂ ಕೇಂದ್ರ ಸರ್ಕಾರ ಕೊರೋನಾ ಸೋಂಕು ಸಮುದಾಯಕ್ಕೂ ಹರಡಿರುವ ವಿಷಯವನ್ನು ಅಧಿಕೃತವಾಗಿ ಘೋಷಿಸುತ್ತಿಲ್ಲ ಎಂದು ಸತ್ಯೇಂದ್ರ ಜೈನ್ ಕಿಡಿಕಾರಿದ್ದಾರೆ.

ಮೊದಲ ದಿನದಿಂದ ಕೇಜ್ರಿವಾಲ್​ ದೆಹಲಿ ಜನತೆಗೆ ಸುಳ್ಳನ್ನೇ ಹೇಳುತ್ತಿದ್ದಾರೆ-ಸಂಸದ ಗೌತಮ್​ ಗಂಭೀರ್​

ಕೊರೋನಾ ಸೋಂಕು ಸಮುದಾಯಕ್ಕೂ ಹರಡಿರುವುದನ್ನು ಕೇಂದ್ರ ಸರ್ಕಾರ ಅಧಿಕೃತವಾಗಿ ಘೋಷಣೆ ಮಾಡಬೇಕು. ನಾವು ಕೇಂದ್ರ ಸರ್ಕಾರದ ಅಧಿಕೃತ ಘೋಷಣೆಗಾಗಿ ಕಾಯುತ್ತಿದ್ದೇವೆ. ಕಮ್ಯುನಿಟಿ ಸ್ಪ್ರೆಡ್ ಬಗ್ಗೆ ರಾಜ್ಯ ಸರ್ಕಾರ ಘೋಷಣೆ ಮಾಡಲು ಸಾಧ್ಯವಿಲ್ಲ ಎಂದು ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಹೇಳಿದ್ದಾರೆ.

ದೆಹಲಿಯಲ್ಲಿ ಕೊರೋನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಈವರೆಗೆ ಸುಮಾರು 31 ಸಾವಿರಕ್ಕೂ ಹೆಚ್ಚು ಕೊರೋನಾ ಪ್ರಕರಣಗಳು ದೃಢಪಟ್ಟಿವೆ. ಒಟ್ಟು 905 ಮಂದಿ ಮಾರಕ ಕೊರೋನಾಗೆ ಬಲಿಯಾಗಿದ್ದಾರೆ. ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​​ ಕೂಡ ಕೊರೋನಾ ಪರೀಕ್ಷೆಗೆ ಒಳಗಾಗಿದ್ದರು. ಆದರೆ ವರದಿಯಲ್ಲಿ ನೆಗೆಟಿವ್​ ಬಂದ ಹಿನ್ನೆಲೆ, ಸದ್ಯ ಅವರು ಹೋಂ ಕ್ವಾರಂಟೈನ್​ನಲ್ಲಿ ಇದ್ದಾರೆ.

ಲಾಕ್​ಡೌನ್​​ನಿಂದ ಮೂಲೆ ಸೇರಿದ ವಾಹನಗಳು; ಈಗ ವೆಹಿಕಲ್ ಬ್ಯಾಟರಿಗಳಿಗೆ ಭಾರೀ ಬೇಡಿಕೆ

 
First published: June 10, 2020, 8:22 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading