ಆರೋಗ್ಯ ಸಚಿವ ಶ್ರೀರಾಮುಲುಗೆ ಕೊರೋನಾ ಸೋಂಕು ದೃಢ; ಶಿವಾಜಿನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಕೊರೋನಾ ಕಾಣಿಸಿಕೊಂಡ ಸಮಯದಿಂದಲೂ 30 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಜನರಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ಮಾಡುವ ಸರ್ಕಾರದ ಆಶಯಕ್ಕೆ ತಕ್ಕಂತೆ ಕೆಲಸ ಮಾಡುತ್ತಿರುವ ಈ ಸಂದರ್ಭದಲ್ಲಿ ನನಗೆ ಸತ್ವಪರೀಕ್ಷೆಯ ಸಮಯ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದೇನೆ ಎಂದು ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಸಚಿವ ಶ್ರೀರಾಮುಲು.

ಸಚಿವ ಶ್ರೀರಾಮುಲು.

  • Share this:
ಬೆಂಗಳೂರು (ಆಗಸ್ಟ್‌ 09); ಕರ್ನಾಟಕದ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಶಿವಾಜಿ ನಗರದ ಸರ್ಕಾರಿ ಸ್ವಾಮ್ಯದ ಬೌರಿಂಗ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೆ, ಅವರ ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸ್ವತಃ ಶ್ರೀರಾಮುಲು ಟ್ವೀಟ್ ಮಾಡುವ ಮೂಲಕ ಮನವಿ ಮಾಡಿದ್ದಾರೆ.

ಕೊರೋನಾ ಸೋಂಕು ದೃಢಪಟ್ಟರೆ ಸಚಿವರು ಸೇರಿದಂತೆ ಸಾರ್ವಜನಿಕ ವಲಯದಲ್ಲಿರುವ ಎಲ್ಲಾ ನಾಯಕರು ಹಾಗೂ ಅಧಿಕಾರಿ ವರ್ಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವುದು ಸಾಮಾನ್ಯ. ಆದರೆ, ಸಚಿವ ಶ್ರೀರಾಮುಲು ಕೊರೋನಾ ಸೋಂಕು ದೃಢಪಟ್ಟ ನಂತರ ಬೆಂಗಳೂರಿನ ಶಿವಾಜಿನಗರದ ಸರ್ಕಾರಿ ಸ್ವಾಮ್ಯದ ಬೋರಿಂಗ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುವ ಮೂಲಕ ಇತರರಿಗೂ ಮಾದರಿಯಾಗುವಂತಹ ಕೆಲಸಕ್ಕೆ ಮುಂದಾಗಿದ್ದಾರೆ.

ಇಂದು ಸರಣಿ ಟ್ವೀಟ್ ಮಾಡುವ ಮೂಲಕ ತಮಗೆ ಕೊರೋನಾ ಸೋಂಕು ತಗುಲಿರುವುದನ್ನು ಖಚಿತಪಡಿಸಿರುವ ಸಚಿವ ಶ್ರೀರಾಮುಲು, "ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೋನಾ ಪಾಸಿಟಿವ್ ಬಂದಿದೆ. ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನನ್ನ ಇಲಾಖೆ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳೂ ಜೀವದ ಹಂಗು ತೊರೆದು ಮಹಾಮಾರಿಯ ವಿರುದ್ಧ ಹಗಲಿರುಳೂ ಶ್ರಮಿಸುತ್ತಿವೆ.



ಕೊರೋನಾ ಕಾಣಿಸಿಕೊಂಡ ಸಮಯದಿಂದಲೂ 30 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಜನರಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ಮಾಡುವ ಸರ್ಕಾರದ ಆಶಯಕ್ಕೆ ತಕ್ಕಂತೆ ಕೆಲಸ ಮಾಡುತ್ತಿರುವ ಈ ಸಂದರ್ಭದಲ್ಲಿ ನನಗೆ ಸತ್ವಪರೀಕ್ಷೆಯ ಸಮಯ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದೇನೆ.

ಆದಷ್ಟೂ ಬೇಗ ಗುಣಮುಖನಾಗಿ ಸಂಕಷ್ಟ ಸಮಯದಲ್ಲಿ ಇನ್ನಷ್ಟು ಜನಸೇವೆ ಮಾಡಲು ಶಕ್ತಿ ಕೊಡುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಇತ್ತೀಚಿಗೆ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಮುನ್ನೆಚ್ಚರಿಕೆ ಕ್ರಮ ವಹಿಸಲು ಕೋರುತ್ತೇನೆ" ಎಂದು ತಿಳಿಸಿದ್ದಾರೆ.

ಈ ಹಿಂದೆ ಕೊರೋನಾ ಟಾಸ್ಕ್‌ಪೋರ್ಸ್‌‌ನಲ್ಲಿನ ಕೆಲಸ ಮಾಡಿದ್ದ ಸಚಿವ ಡಾ. ಸುಧಾಕರ್‌ ಸಹ ಕೊರೋನಾ ಸೋಂಕಿನಿಂದಾಗಿ ಕ್ವಾರಂಟೈನ್‌ಗೆ ಒಳಗಾಗಿದ್ದರು. ಇತ್ತೀಚೆಗೆ ಸಿಎಂ ಬಿ.ಎಸ್‌. ಯಡಿಯೂರಪ್ಪ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಹ ಕೊರೋನಾ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದು ಉಲ್ಲೇಖಾರ್ಹ.
Published by:MAshok Kumar
First published: