• Home
 • »
 • News
 • »
 • coronavirus-latest-news
 • »
 • ‘ನಾನು, ಸುಧಾಕರ್​​​ ಜತೆಜತೆಗೆ ಕೊರೋನಾ ತಡೆಗೆ ಕೆಲಸ ಮಾಡುತ್ತಿದ್ದೇವೆ‘: ಎಚ್​​ಡಿಕೆಗೆ ಶ್ರೀರಾಮುಲು ತಿರುಗೇಟು

‘ನಾನು, ಸುಧಾಕರ್​​​ ಜತೆಜತೆಗೆ ಕೊರೋನಾ ತಡೆಗೆ ಕೆಲಸ ಮಾಡುತ್ತಿದ್ದೇವೆ‘: ಎಚ್​​ಡಿಕೆಗೆ ಶ್ರೀರಾಮುಲು ತಿರುಗೇಟು

ಸಚಿವ ಶ್ರೀರಾಮುಲು ಮತ್ತು ಮಾಜಿ ಸಿಎಂ ಕುಮಾರಸ್ವಾಮಿ.

ಸಚಿವ ಶ್ರೀರಾಮುಲು ಮತ್ತು ಮಾಜಿ ಸಿಎಂ ಕುಮಾರಸ್ವಾಮಿ.

ಭಾರತದಲ್ಲಿ ಒಟ್ಟಾರೆ ಇದುವರೆಗೂ 107 ಕೋವಿಡ್-19 ಪ್ರಕರಣಗಳು ದಾಖಲಾಗಿವೆ. ಕರ್ನಾಟಕದಲ್ಲಿ ಓರ್ವ ಮೃತಪಟ್ಟಿದ್ದು, 6 ಸೋಂಕಿತ ಪ್ರಕರಣ ಪತ್ತೆಯಾಗಿವೆ. ದೆಹಲಿಯಲ್ಲಿ ಒಬ್ಬರು, ಕಲಬುರ್ಗಿಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. 107 ಪ್ರಕರಣಗಳಲ್ಲಿ 10 ಜನರು ಗುಣಮುಖರಾಗಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದೆ.

ಮುಂದೆ ಓದಿ ...
 • Share this:

  ಬೆಂಗಳೂರು(ಮಾ.15): "ಆರೋಗ್ಯ ಸಚಿವರು ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಒಮ್ಮತದಿಂದ ಕಾರ್ಯ ನಿರ್ವಹಿಸಲಿ" ಎಂದ ಮಾಜಿ ಸಿಎಂ ಎಚ್​​.ಡಿ ಕುಮಾರಸ್ವಾಮಿಗೆ ಆರೋಗ್ಯ ಸಚಿವ ಶ್ರೀರಾಮುಲು ತಪರಾಕಿ ಬಾರಿಸಿದ್ದಾರೆ. ಕುಮಾರಸ್ವಾಮಿಯವರೇ ನಾನು ಹಾಗೂ ಶ್ರೀ. ಸುಧಾಕರ್ ಜೊತೆಜೊತೆಗೆ ಜನರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡುತ್ತಿದ್ದೇವೆ. ನಿಮ್ಮ ಗೊಂದಲದಲ್ಲಿ ಯಾವುದೇ ಹುರುಳಿಲ್ಲ. ಇತ್ತೀಚೆಗೆ ಭಾರೀ ಗೊಂದಲದಲ್ಲಿರುವ ನೀವು, ಜನರನ್ನು ಗೊಂದಲಕ್ಕೆ ದೂಡುವ ಕೆಲಸ ಮಾಡದಿರಿ ಎಂದು ಶ್ರೀರಾಮುಲು ತಿರುಗೇಟು ನೀಡಿದ್ಧಾರೆ.

  ಈ ಹಿಂದೆ ಟ್ವೀಟ್​​ ಮಾಡಿದ್ದ ಮಾಜಿ ಸಿಎಂ ಎಚ್​​.ಡಿ ಕುಮಾರಸ್ವಾಮಿಯವರು, ಕೊರೋನಾ ವೈರಸ್​​ ವಿರುದ್ಧ ಕೈಗೊಂಡ ಕ್ರಮಗಳ ಕುರಿತ ಸುದ್ದಿಯನ್ನು ಜನರಿಗೆ ತಿಳಿಸುವ ವಿಚಾರದಲ್ಲಿ ಸರ್ಕಾರದಲ್ಲಿ ಎರಡು ಧ್ರುವಗಳು ಸೃಷ್ಟಿಯಾದಂತಿವೆ. ಆರೋಗ್ಯ ಸಚಿವರು ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಒಮ್ಮತದಿಂದ ಕಾರ್ಯ ನಿರ್ವಹಿಸಲಿ. ಪರಸ್ಪರರ ನಡುವೆ ಸಹಕಾರವಿರಲಿ. ಇದು ಪ್ರಚಾರ ಪಡೆಯುವ ಪ್ರಹಸನವಾಗಬಾರದು. ಜನರಲ್ಲಿ ಗೊಂದಲ ಮೂಡದಿರಲಿ ಎಂದಿದ್ದರು. ಈ ಬೆನ್ನಲ್ಲೇ ಇದಕ್ಕೆ ಪ್ರತಿಕ್ರಿಯಿಸಿರುವ ಶ್ರೀರಾಮುಲು ನಾವು ಪರಸ್ಪರ ಕೆಲಸ ಮಾಡುತ್ತೇವೆ ಎನ್ನುವ ಮೂಲಕ ಮಾಜಿ ಸಿಎಂಗೆ ಕಪಾಳಮೋಕ್ಷ ಮಾಡಿದ್ದಾರೆ.

  ಕೊರೋನಾ ವೈರಸ್‍ನಿಂದ 63 ಸಾವಿರ ಜನ ಗುಣಮುಖರಾಗಿದ್ದಾರೆ. ಈ ವೈರಾಣು ಹರಡದಂತೆ ತಡೆಗಟ್ಟಲು ಆರೋಗ್ಯ ಇಲಾಖೆ ಎಲ್ಲಾ ಕ್ರಮಕೈಗೊಂಡಿದೆ. ರಾಜ್ಯದ ಜನ ಭಯ ಪಡುವ ಅಗತ್ಯವಿಲ್ಲ ಎಂದು ಈಗಾಗಲೇ ಸಚಿವ ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು ಕಲಬುರಗಿ ಜೇಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಸುದ್ದಿಗಾರರ ಜತೆ ಮಾತಾಡುವ ವೇಳೆ ಹೀಗೆ ಹೇಳಿಕೆ ನೀಡಿದ್ದರು.

  ಇದನ್ನೂ ಓದಿ: ಕೊರೋನಾ ವೈರಸ್​​: ‘ಸೋಂಕಿತರ ಚಿಕಿತ್ಸೆಗಾಗಿ ಖಾಲಿಯಿರುವ ಸರ್ಕಾರಿ ಕಟ್ಟಡಗಳನ್ನು ಬಳಸಿ‘ - ಎಚ್​​ಡಿಕೆ

  ಇನ್ನು, ಭಾರತದಲ್ಲಿ ಸಾವಿನ ಭೀತಿ ಸೃಷ್ಟಿಸಿರುವ ಕೊರೋನಾ ವೈರಸ್​ನಿಂದಾಗಿ ಮಾಲ್, ಥಿಯೇಟರ್, ಅಂಗಡಿಗಳು, ಶಾಪಿಂಗ್ ಕಾಂಪ್ಲೆಕ್ಸ್​ಗಳು ಬಹುತೇಕ ಬಂದ್ ಆಗಿವೆ. ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 100ರ ಗಡಿ ದಾಟಿದ್ದು, ಸೋಂಕಿನ ಪ್ರಕರಣ ಇನ್ನಷ್ಟು ಹೆಚ್ಚಾಗುವ ಆತಂಕ ಮೂಡಿದೆ. ದೇಶದಲ್ಲಿ ಕೊರೋನಾಗೆ ಮೊದಲ ಬಲಿಯಾಗಿರುವುದು ಕರ್ನಾಟಕದಲ್ಲಿ. ಹೀಗಾಗಿ, ರಾಜ್ಯದೆಲ್ಲೆಡೆ ಹೆಚ್ಚಿನ ಮುಂಜಾಗ್ರತೆ ವಹಿಸಲಾಗಿದೆ.

  ಭಾರತದಲ್ಲಿ ಒಟ್ಟಾರೆ ಇದುವರೆಗೂ 107 ಕೋವಿಡ್-19 ಪ್ರಕರಣಗಳು ದಾಖಲಾಗಿವೆ. ಕರ್ನಾಟಕದಲ್ಲಿ ಓರ್ವ ಮೃತಪಟ್ಟಿದ್ದು, 6 ಸೋಂಕಿತ ಪ್ರಕರಣ ಪತ್ತೆಯಾಗಿವೆ. ದೆಹಲಿಯಲ್ಲಿ ಒಬ್ಬರು, ಕಲಬುರ್ಗಿಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. 107 ಪ್ರಕರಣಗಳಲ್ಲಿ 10 ಜನರು ಗುಣಮುಖರಾಗಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದೆ.

  First published: