ರಾಜ್ಯವನ್ನು ತುರ್ತು ಲಾಕ್‌ಡೌನ್ ಮಾಡದಿದ್ದರೆ ಪರಿಸ್ಥಿತಿ ಕೈಮೀರಲಿದೆ; ಅಧಿಕಾರಿಗಳಿಂದ ಸಿಎಂ ಗೆ ಸಲಹೆ

ಕೊರೋನಾವನ್ನು ತಡೆಗಟ್ಟುವ ಕುರಿತು ಚರ್ಚೆ ನಡೆಸುವ ಸಲುವಾಗಿ ನಿನ್ನೆ ಸಿಎಂ ಬಿಎಸ್‌ವೈ ಹಾಗೂ ಸಚಿವರ ನೇತೃತ್ವದಲ್ಲಿ ಸಭೆ ನಡೆದಿತ್ತು. ಈ ವೇಳೆ ರಾಜ್ಯವನ್ನು ಲಾಕ್‌ಡೌನ್‌ ಮಾಡುವ ಕುರಿತು ಚರ್ಚೆ ನಡಸಲಾಗಿದೆ.

ಪ್ರಾತಿನಿಧಿಕ ಚಿತ್ರ.

ಪ್ರಾತಿನಿಧಿಕ ಚಿತ್ರ.

  • Share this:
ಬೆಂಗಳೂರು (ಮಾರ್ಚ್‌ 23); ಮಾರಣಾಂತಿಕ ಕೊರೋನಾವನ್ನು ತಡೆಗಟ್ಟುವುದು ಅಷ್ಟು ಸುಲಭವಲ್ಲ. ಈಗಾಗಲೇ ಈ ವೈರಸ್‌ ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ವ್ಯಾಪಿಸಿದೆ. ಹೀಗಾಗಿ ರಾಜ್ಯವನ್ನು ತುರ್ತು ಲಾಕ್‌ಡೌನ್ ಮಾಡದಿದ್ದರೆ ಪರಿಸ್ಥಿತಿ ಊಹೆಗೂ ನಿಲುಕದಂತೆ ಕೈಮೀರಿ ಹೋಗಲಿದೆ ಎಂದು ಅಧಿಕಾರಿಗಳು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಕೊರೋನಾವನ್ನು ತಡೆಗಟ್ಟುವ ಕುರಿತು ಚರ್ಚೆ ನಡೆಸುವ ಸಲುವಾಗಿ ನಿನ್ನೆ ಸಿಎಂ ಬಿಎಸ್‌ವೈ ಹಾಗೂ ಸಚಿವರ ನೇತೃತ್ವದಲ್ಲಿ ಸಭೆ ನಡೆದಿತ್ತು. ಈ ವೇಳೆ ರಾಜ್ಯವನ್ನು ಲಾಕ್‌ಡೌನ್‌ ಮಾಡುವ ಕುರಿತು ಚರ್ಚೆ ನಡಸಲಾಗಿದೆ. ಸಿಎಂಗೆ ಸಲಹೆ ನೀಡಿರುವ ಅಧಿಕಾರಿಗಳು, "ಕೊರೊನಾವನ್ನು ತಡೆಗಟ್ಟೋದು ಅಷ್ಟು ಸುಲಭದ ಕೆಲಸವಲ್ಲ. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕಾಗಿದೆ.

ವಿದೇಶಗಳಿಂದ ಬಂದವರಿಂದಲೇ ಕೊರೊನಾ ವೈರಸ್ ಹರಡುತ್ತಿದೆ. ಒಬ್ಬರಿಂದ ಒಬ್ಬರಿಗೆ ಇದು ನಿಧಾನಕ್ಕೆ ಹರಡುತ್ತಿದೆ. ರಾಜ್ಯದಲ್ಲಿ ಕೊರೊನಾ ವೈರಸ್ ಆತಂಕ ನಿರೀಕ್ಷೆಗೂ ಮೀರಿ ವ್ಯಾಪಿಸಲಿದೆ. ಜಾಗೃತೆ ವಹಿಸದಿದ್ದರೆ ಕಷ್ಟ. ನಾವು ಕೈಲಾಗೋ ಪ್ರಯತ್ನ ಮಾಡುತ್ತಿದ್ದೇವೆ. ಸರ್ಕಾರಕ್ಕೆ ಆರ್ಥಿಕ ಹೊಡೆತ ಬೀಳುತ್ತೆ. ಆದರೆ, ಅನಿವಾರ್ಯ ಪರಿಸ್ಥಿತಿ ಎದುರಾಗಿದೆ ಹೀಗಾಗಿ ಇಡೀ ರಾಜ್ಯ ಲಾಕ್ ಡೌನ್ ಮಾಡಬೇಕು ಮತ್ತು ಇದು ಅನಿವಾರ್ಯ" ಎಂದು ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಯಡಿಯೂರಪ್ಪ, "ಇಡೀ ರಾಜ್ಯ ಲಾಕ್ ಡೌನ್ ಮಾಡಿದರೆ ಜನ ಗೊಂದಲಕ್ಕೆ ಒಳಗಾಗುತ್ತಾರೆ. ಹೀಗಾಗಿ ಇಡೀ ರಾಜ್ಯವನ್ನು ಲಾಕ್‌ಡೌನ್ ಮಾಡುವುದು ಅಗತ್ಯವಿಲ್ಲ. ತಕ್ಷಣಕ್ಕೆ 9 ಜಿಲ್ಲೆಗಳನ್ನು ಲಾಕ್‌ಡೌನ್ ಮಾಡಿ ಪರಿಸ್ಥಿತಿಯನ್ನು ಅವಲೋಕಿಸೋಣ ನಂತರ ಇಡೀ ರಾಜ್ಯವನ್ನು ಲಾಕ್‌ಡೌನ್ ಮಾಡುವ ಕುರಿತು ಯೋಚಿಸೋಣ" ಎಂದು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ಲಾಕ್‌ಡೌನ್ ಅನ್ನು ರಾಜ್ಯ ಸರ್ಕಾರಗಳು ಗಂಭೀರವಾಗಿ ಪರಿಗಣಿಸುತ್ತಿಲ್ಲ; ಪ್ರಧಾನಿ ಮೋದಿ ಅಸಮಾಧಾನ
First published: