ರೋಗಲಕ್ಷಣ ಇಲ್ಲದ ಸೋಂಕಿತರಿಗೆ ಆಸ್ಪತ್ರೆವಾಸದ ಅವಧಿ ಇಳಿಕೆ? ಹೊರರಾಜ್ಯಗಳಿಂದ ಬಂದವರಿಗೆ ಮನೆಯಲ್ಲೇ ಕ್ವಾರಂಟೈನ್

ಹೈರಿಸ್ಕ್ ರಾಜ್ಯ ಬಿಟ್ಟು ಬೇರೆ ಕಡೆಯಿಂದ ಬಂದ ವ್ಯಕ್ತಿಗಳನ್ನು ಹೋಟೆಲ್ ಬದಲು ಅವರ ಮನೆಯಲ್ಲೇ ಕ್ವಾರಂಟೈನ್​ಗೆ ಒಳಪಡಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ.

news18-kannada
Updated:May 23, 2020, 10:24 AM IST
ರೋಗಲಕ್ಷಣ ಇಲ್ಲದ ಸೋಂಕಿತರಿಗೆ ಆಸ್ಪತ್ರೆವಾಸದ ಅವಧಿ ಇಳಿಕೆ? ಹೊರರಾಜ್ಯಗಳಿಂದ ಬಂದವರಿಗೆ ಮನೆಯಲ್ಲೇ ಕ್ವಾರಂಟೈನ್
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು(ಮೇ 23): ರಾಜ್ಯದ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಕೊರೋನಾ ಸೋಂಕಿತರಲ್ಲಿ ಶೇ. 84ರಷ್ಟು ಮಂದಿಗೆ ರೋಗ ಲಕ್ಷಣಗಳೇ ಇಲ್ಲ ಎಂಬ ಮಾಹಿತಿ ಇದೆ. ಇವರೆಲ್ಲರೂ ಆರೋಗ್ಯವಾಗಿಯೇ ಇದ್ದಾರೆ. ವೈದ್ಯರ ಪ್ರಕಾರ, ಇವರಿಗೆ ಆಸ್ಪತ್ರೆಯಲ್ಲಿಟ್ಟುಕೊಂಡು ಚಿಕಿತ್ಸೆ ಕೊಡುವ ತುರ್ತು ಅಗತ್ಯ ಇಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರವು ರೋಗಲಕ್ಷಗಳಿಲ್ಲದ ಇಂಥ ವ್ಯಕ್ತಿಗಳನ್ನು ಆಸ್ಪತ್ರೆಯಿಂದ ಬೇಗನೇ ಡಿಸ್​ಚಾರ್ಜ್ ಮಾಡಿ ಮನೆಯಲ್ಲೇ ಕಡ್ಡಾಯ ಕ್ವಾರಂಟೈನ್​ಗೆ ಒಳಪಡಿಸಲು ಯೋಜಿಸಿದೆ.

ಕೋವಿಡ್ ಪಾಸಿಟಿವ್ ಬಂದು ಆಸ್ಪತ್ರೆಗೆ ದಾಖಲಾದ ರೋಗಿ 10 ದಿನವಾದರೂ ರೋಗ ಲಕ್ಷಣ ಕಾಣಿಸದಿದ್ದರೆ ಮಾತ್ರ ಈ ಕ್ರಮ ತೆಗೆದುಕೊಳ್ಳುವ ಸಾಧ್ಯತೆ ಇದೆ. ಒಂದು ವೇಳೆ ರೋಗಿಗೆ ಮನೆಯಲ್ಲಿ ಕ್ವಾರಂಟೈನ್ ಆಗಲು ಸೂಕ್ತ ಸೌಲಭ್ಯ ಇಲ್ಲದಿದ್ದರೆ ಅಂಥವರಿಗೆ ಸರ್ಕಾರವೇ ಬದಲಿ ವ್ಯವಸ್ಥೆ ಮಾಡಲು ಸಿದ್ಧವಿದೆ. ಈ ಬಗ್ಗೆ ಇನ್ನೂ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ. ಆರೋಗ್ಯ ಇಲಾಖೆಯ ಅಧಿಕಾರಿಗಳು ಸಾಧಕ ಬಾಧಕಗಳನ್ನು ಅವಲೋಕಿಸುತ್ತಿದ್ದಾರೆ.

ಇದನ್ನೂ ಓದಿ: Sunday lockdown: ಭಾನುವಾರ ಸಂಪೂರ್ಣ ಲಾಕ್​ಡೌನ್​; ಏನಿರುತ್ತೆ, ಏನಿರಲ್ಲ?; ಇಲ್ಲಿದೆ ಸಂಪೂರ್ಣ ಮಾಹಿತಿ

ಹೋಟೆಲ್ ಬದಲು ಮನೆಯಲ್ಲೇ ಕ್ವಾರಂಟೈನ್:

ಇದೇ ವೇಳೆ, ಹೈರಿಸ್ಕ್ ರಾಜ್ಯ ಬಿಟ್ಟು ಬೇರೆ ಕಡೆಯಿಂದ ಬಂದ ವ್ಯಕ್ತಿಗಳನ್ನು ಹೋಟೆಲ್ ಬದಲು ಅವರ ಮನೆಯಲ್ಲೇ ಕ್ವಾರಂಟೈನ್​ಗೆ ಒಳಪಡಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಮಹಾರಾಷ್ಟ್ರ, ಗುಜರಾತ್, ತಮಿಳುನಾಡು, ದೆಹಲಿ, ರಾಜಸ್ಥಾನ ಮತ್ತು ಮಧ್ಯಪ್ರದೇಶ ರಾಜ್ಯಗಳನ್ನು ಹೈ ರಿಸ್ಕ್ ರಾಜ್ಯಗಳೆಂದು ಕೇಂದ್ರ ಸರ್ಕಾರವೇ ಪಟ್ಟಿ ಮಾಡಿ ಬಿಡುಗಡೆ ಮಾಡಿದೆ. ಈ ಆರು ರಾಜ್ಯಗಳಿಂದ ಬಂದವರನ್ನು 7 ದಿನ ಹೋಟೆಲ್ ಕ್ವಾರಂಟೈನ್ ಮತ್ತು 7 ದಿನ ಹೋಮ್ ಕ್ವಾರಂಟೈನ್​ನಲ್ಲಿಡಲು ನಿರ್ಧರಿಸಲಾಗಿದೆ. ಉಳಿದ ರಾಜ್ಯಗಳಿಂದ ಬಂದವರು ನೇರವಾಗಿ ತಮ್ಮ ಮನೆಗೆ ಹೋಗಿ ಅಲ್ಲಿಯೇ ಕಡ್ಡಾಯವಾಗಿ ಕ್ವಾರಂಟೈನ್​ಗೆ ಒಳಪಡಬೇಕಾಗುತ್ತದೆ.

ಹೈ ರಿಸ್ಕ್ ರಾಜ್ಯಗಳಿಂದ ಬಂದ 60 ವರ್ಷ ಮೇಲ್ಪಟ್ಟ ವಯೋವೃದ್ಧರು, 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮತ್ತು ಗರ್ಭಿಣಿಯರಿಗೆ ವಿನಾಯಿತಿ ನೀಡಲಾಗಿದೆ. ಇವರು ಹೋಟೆಲ್ ಬದಲು ತಮ್ಮ ಮನೆಗೆ ನೇರವಾಗಿ ಹೋಗಿ ಕ್ವಾರಂಟೈನ್​ಗೆ ಒಳಪಡಲು ಅವಕಾಶ ನೀಡಲಾಗಿದೆ. ಇನ್ನು ಏಳು ದಿನ ಹೋಟೆಲ್ ಕ್ವಾರಂಟೈನ್​ನಲ್ಲಿದ್ದವರಿಗೆ 5ನೇ ದಿನದಂದು ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಪರೀಕ್ಷೆಯ ರಿಸಲ್ಟ್ ಆಧರಿಸಿ ಅವರ ಬಿಡುಗಡೆ ಮಾಡಲಾಗುತ್ತದೆ. ಒಂದು ವೇಳೆ ಪಾಸಿಟಿವ್ ಬಂದರೆ ಅವರನ್ನು ನೇರವಾಗಿ ಆಸ್ಪತ್ರೆಗೆ ದಾಖಲಿಸಲಾಗುತ್ತದೆ.Javascript

First published: May 23, 2020, 10:24 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading