HOME » NEWS » Coronavirus-latest-news » HEAVY RAIN IN KARNATAKA CAUSES YELLOW ALERT IN MANY DISTRICTS TODAY GNR

Heavy Rain: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಧಾರಾಕಾರ ಮಳೆ

ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ರಾಜ್ಯದ ಬೆಳಗಾವಿ, ಹಾವೇರಿ, ಕಲಬುರ್ಗಿ, ಬೀದರ್​​ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಮುಂದಿನ ಮೂರು ದಿನಗಳ ಕಾಲ ಹಲವೆಡೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.


Updated:August 2, 2020, 6:00 PM IST
Heavy Rain: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಧಾರಾಕಾರ ಮಳೆ
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು(ಆ.02): ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ. ಶಿವಮೊಗ್ಗ, ಮಂಗಳೂರು, ಬೆಂಗಳೂರು, ಚಿಕ್ಕಮಗಳೂರು, ಕೋಲಾರ, ಮೈಸೂರು ಸೇರಿದಂತೆ ಹಲವೆಡೆ ಜೋರು ಮಳೆ ಸುರಿಯುತ್ತಿದೆ. ಜೋರು ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.

ಕರ್ನಾಟಕದ ವಿವಿಧ ಭಾಗಗಳಲ್ಲಿ ಮಾತ್ರವಲ್ಲದೇ ರಾಜಧಾನಿ ಬೆಂಗಳೂರಿನಲ್ಲೂ ಮಳೆ ಸುರಿಯುತ್ತಿದೆ. ನಗರದ ಹೊರವಲಯ ನೆಲಮಂಗಲ ನಗರ ಸೇರಿದಂತೆ ಸುಂಕದಕಟ್ಟೆ, ಬ್ಯಾಡರಹಳ್ಳಿ, ನಾಗರಬಾವಿ, ಬನಶಂಕರಿ, ಜಯನಗರ, ಮಲ್ಲೇಶ್ವರಂ, ಮೆಜೆಸ್ಟಿಕ್​​, ಕೆ.ಆರ್​ ಮಾರ್ಕೆಟ್​, ಕೆ.ಆರ್​​ ಪುರಂ, ಟೌನ್​​ಹಾಲ್​​ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ. ಗುಡುಗು ಸಹಿತ ರಭಸವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಪರದಾಡುವಂತಾಗಿದೆ.

ಇನ್ನು, ಆಗಸ್ಟ್ ಮತ್ತು ಸೆಪ್ಟೆಂಬರ್​​ನಲ್ಲಿ ದೇಶಾದ್ಯಂತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ. ಮಳೆಗಾಲದ ನಾಲ್ಕು ತಿಂಗಳ ದ್ವಿತೀಯಾರ್ಧದಲ್ಲಿ ದೀರ್ಘಕಾಲೀನ ಸರಾಸರಿಯ ಶೇ.97ರಷ್ಟು ಮಳೆಯಾಗುವ ಸಂಭವವಿದೆ ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಕೋವಿಡ್​​-19 ಎಫೆಕ್ಟ್​: ತಮಿಳುನಾಡು ರಾಜ್ಯಪಾಲರು ಆಸ್ಪತ್ರೆಗೆ ದಾಖಲು

ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ರಾಜ್ಯದ ಬೆಳಗಾವಿ, ಹಾವೇರಿ, ಕಲಬುರ್ಗಿ , ಬೀದರ್​​ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಆಗಸ್ಟ್ 2ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Published by: Ganesh Nachikethu
First published: August 2, 2020, 5:53 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading