news18-kannada Updated:August 4, 2020, 1:37 PM IST
ಸಿದ್ದರಾಮಯ್ಯ
ಬೆಂಗಳೂರು (ಆ.4): ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಮಧ್ಯರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೋನಾ ಪರೀಕ್ಷೆಗೆ ಒಳಪಡಿಸಿದ ವೇಳೆ ಅವರಿಗೆ ಸೋಂಕು ಇರುವುದು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಅವರ ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್ ಮಾಡಲಾಗಿದೆ.
ಕೊರೋನಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ. ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.
ಇದನ್ನೂ ಓದಿ: ಸಿಎಂ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯಗೆ ಮಣಿಪಾಲ್ ಆಸ್ಪತ್ರೆಯ ಒಂದೇ ಮಹಡಿಯಲ್ಲಿ ಚಿಕಿತ್ಸೆ
ಸಿದ್ದರಾಮಯ್ಯ ಟ್ರಾವೆಲ್ ಹಿಸ್ಟರಿ ಹೀಗಿದೆ:
- ಜುಲೈ 27
ಕೆಪಿಸಿಸಿ ಕಚೇರಿಯಲ್ಲಿ ಹಿರಿಯ ನಾಯಕರ ಸಭೆಯಲ್ಲಿ ಭಾಗಿ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿ ಗೋಷ್ಠಿ. ನಂತರ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಕೊಲೆ ಮಾಡುತ್ತಿದ್ದು, ಇದನ್ನು ವಿರೋಧಿಸಿ ಹಮ್ಮಿಕೊಂಡ ಪ್ರಜಾಪ್ರಭುತ್ವ ಉಳಿಸಿ - ಸಂವಿಧಾನ ರಕ್ಷಿಸಿ ಹೆಸರಿನಲ್ ಪ್ರತಿಭಟನೆಯಲ್ಲಿ ಭಾಗಿ. ಪ್ರತಿಭಟನೆ ವೇಳೆ ಸಿದ್ದರಾಮಯ್ಯ ಜೊತೆಗೆ , ಡಿಕೆಶಿ , ಮಲ್ಲಿಕಾರ್ಜುನ ಖರ್ಗೆ , ಸಲೀಂ ಅಹಮದ್ , ರಿಜ್ವಾನ್ ಅರ್ಷದ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಭಾಗಯಾಗಿದ್ದರು.
- ಜುಲೈ 28
ಬೆಂಗಳೂರಿನ ತಮ್ಮ ಅಧಿಕೃತ ನಿವಾಸದಲ್ಲಿ ವಾಸ್ತವ್ಯ
- ಜುಲೈ 29
ಮೈಸೂರು ಜಿಲ್ಲಾ ಪ್ರವಾಸ. ತಮ್ಮ ನಿವಾಸದಲ್ಲಿ ವಿಶ್ರಾಂತಿ
- ಜುಲೈ 30
ಮೈಸೂರಿನ ಪ್ರೆಸ್ ಕ್ಲಬ್ನ ಸಂವಾದ ಕಾರ್ಯಕ್ರಮದಲ್ಲಿ ಭಾಗಿ
- ಜುಲೈ 31
ಮಂಡ್ಯ ಜಿಲ್ಲೆಯ ಪ್ರವಾಸ , ಸರ್ಕಾರದ ವಿರುದ್ಧ ಸುದ್ದಿ ಗೋಷ್ಠಿ. ರಾಜ್ಯ ಸರ್ಕಾರದ ವೈಫಲ್ಯ ಮತ್ತು ಭ್ರಷ್ಟಾಚಾರ ವಿರುದ್ಧ ಕಾಂಗ್ರೆಸ್ ಸ್ಪೀಕ್ ಆಫ್ ಕರ್ನಾಟಕ ಹೆಸರಲ್ಲಿ ಕಾರ್ಯಕ್ರಮ
- ಆಗಸ್ಟ್ 01
ಮೈಸೂರಿನ ತಮ್ಮ ನಿವಾಸದಲ್ಲಿ ಕುಟುಂಬ ಸದಸ್ಯರ ಜೊತೆಗೆ ವಿಶ್ರಾಂತಿ
- ಆಗಸ್ಟ್ 02
ಬೆಂಗಳೂರಿಗೆ ಆಗಮನ , ಯಾವುದೇ ಸಭೆಗಳಲ್ಲಿ ಭಾಗಿಯಾಗಿಲ್ಲ
- ಆಗಸ್ಟ್ 3:
ಬೆಂಗಳೂರಿನ ತಮ್ಮ ನಿವಾಸದಲ್ಲಿ ವಾಸ್ತವ್ಯ. ತಡ ರಾತ್ರಿ ಮಣಿಪಾಲ್ ಅಸ್ಪತ್ರೆ ದಾಖಲು
Published by:
Rajesh Duggumane
First published:
August 4, 2020, 1:35 PM IST