Corona: ಚಾಮರಾಜನಗರ ಜಿಲ್ಲೆಯಲ್ಲಿ ಆರು ಅಂತರರಾಜ್ಯ ಚೆಕ್ ಪೋಸ್ಟ್ ಕಾರ್ಯಾರಂಭ: ಕೇರಳ ಗಡಿಯಲ್ಲಿ ಕಟ್ಟೆಚ್ಚರ

ಇಂದು  ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಖುದ್ದು ಮೂಲೆಹೊಳೆ ಚೆಕ್ ಪೋಸ್ಟ್ ಗೆ ಭೇಟಿ ನೀಡಿ ಚೆಕ್ ಪೋಸ್ಟ್ ನಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.

ಇಂದು  ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಖುದ್ದು ಮೂಲೆಹೊಳೆ ಚೆಕ್ ಪೋಸ್ಟ್ ಗೆ ಭೇಟಿ ನೀಡಿ ಚೆಕ್ ಪೋಸ್ಟ್ ನಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.

ಇಂದು  ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಖುದ್ದು ಮೂಲೆಹೊಳೆ ಚೆಕ್ ಪೋಸ್ಟ್ ಗೆ ಭೇಟಿ ನೀಡಿ ಚೆಕ್ ಪೋಸ್ಟ್ ನಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.

  • Share this:
ಚಾಮರಾಜನಗರ (ಜು.31) ನೆರೆಯ ಕೇರಳ ರಾಜ್ಯದಲ್ಲಿ ದಿನೇದಿನೇ ಕೊರೋನಾ ಪ್ರಕರಣಗಳ ಸಂಖ್ಯೆ ಏರತೊಡಗಿದೆ. ಕೇರಳದಲ್ಲಿ ಕಳೆದ ನಾಲ್ಕು ದಿನಗಳಿಂದ  ಪ್ರತಿ ದಿನ 20 ಸಾವಿರಕ್ಕು ಹೆಚ್ಚು ಪ್ರಕರಣಗಳು ದಾಖಲಾಗಿದ್ದು ಕೇರಳಕ್ಕೆ ಹೊಂದಿಕೊಂಡಂತಿರುವ ಚಾಮರಾಜ‌ಗರ ಜಿಲ್ಲೆಗೆ ಆತಂಕ ಎದುರಾಗಿದೆ. ಅದರಲ್ಲು ಚಾಮರಾಜನಗರ ಜಿಲ್ಲೆ ಪಕ್ಕದಲ್ಲೇ ಇರುವ ಕೇರಳದ ವೈನಾಡು ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಪಾಸಿಟಿವಿಟಿ   ದರ ಹೆಚ್ಚಾಗಿದೆ. ಇದಲ್ಲದೆ ಪಕ್ಕದ  ತಮಿಳುನಾಡು ರಾಜ್ಯದಲ್ಲು ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿದ್ದು ಮತ್ತಷ್ಟು ಆತಂಕ ತಂದೊಡ್ಡಿದೆ. ಈ ಹಿನ್ನಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. 

ಕೇರಳಕ್ಕೆ ಸಂಪರ್ಕ ಕಲ್ಪಿಸುವ ಗುಂಡ್ಲುಪೇಟೆ ತಾಲೋಕು ಬಂಡೀಪುರ ಮೂಲೆಹೊಳೆ ಚೆಕ್ ಪೋಸ್ಟ್ ಮೂಲಕ ಎರಡೂ ರಾಜ್ಯಗಳ ನಡುವೆ ಪ್ರತಿ ದಿನ ನೂರಾರು ವಾಹನಗಳು ಸಂಚರಿಸುತ್ತವೆ. ಈ ಹಿನ್ನಲೆಯಲ್ಲಿ ಮೂಲೆ ಹೊಳೆ ಚೆಕ್ ಪೋಸ್ಟ್ ನಲ್ಲಿ   ತಪಾಸಣೆ ತೀವ್ರಗೊಳಿಸಲಾಗಿದೆ. ಇದಕ್ಕಾಗಿ ಆರೋಗ್ಯ, ಕಂದಾಯ, ಪೊಲೀಸ್ ಹಾಗು ಅರಣ್ಯ ಇಲಾಖೆ ನೌಕರರನ್ನು ಕೇರಳದಿಂದ ಬರುವವರಿಗೆ 72 ಗಂಟೆ ಒಳಗಿನ ಆರ್.ಟಿ‌.ಪಿ.ಸಿ.ಆರ್ ನೆಗೆಟಿವ್ ವರದಿ ಕಡ್ಡಾಯ ಮಾಡಲಾಗಿದೆ.  ಕನಿಷ್ಠ ಒಂದು ಡೋಸ್ ಕೋವಿಡ್ ಲಸಿಕೆ ಪಡೆದಿರುವವರಿಗೆ ಪ್ರವೇಶಾವಕಾಶ ನೀಡಲಾಗುತ್ತಿದೆ. ನೆಗೆಟಿವ್ ವರದಿ ಇಲ್ಲದವರನ್ನು ಚೆಕ್ ಪೋಸ್ಟ್ ನಿಂದ ವಾಪಸ್ ಕಳುಹಿಸಲಾಗುತ್ತಿದೆ. ಕೇರಳಕ್ಕೆ ಹೋಗಿ ಬರುವ ಸರಕು ಸಾಗಾಣೆ ವಾಹನ ಚಾಲಕರು ಹಾಗು ಪ್ರತಿನಿತ್ಯ ಪ್ರಯಾಣಿಸುವವರಿಗೆ 15 ದಿನಗಳಿಗೊಮ್ಮೆ ಆರ್.‌ಟಿ.ಪಿ.ಸಿ.ಆರ್ ಪರೀಕ್ಷೆ  ಕಡ್ಡಾಯ ಮಾಡಲಾಗಿದೆ.

ಇದನ್ನು ಓದಿ: 8 ಜಿಲ್ಲೆಗಳಲ್ಲಿ ಸೋಂಕು ಹೆಚ್ಚಳ; ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ

ಇನ್ನೊಂದೆಡೆ ತಮಿಳುನಾಡು ರಾಜ್ಯ ಕ್ಕೆ ಸಂಪರ್ಕ ಕಲ್ಪಿಸುವ ಪುಣಜನೂರು, ಕೆಕ್ಕನಹಳ್ಳ, ಪಾಲಾರ್, ನಾಲಾರೋಡ್, ಅರ್ಧನಾರೀಪುರ ಚೆಕ್ ಪೋಸ್ಟ್ ಗಳಲ್ಲು ಬಿಗಿ ಕ್ರಮ ಕೈಗೊಳ್ಳಲಾಗಿದ್ದು ತಪಾಸಣಾ ಕಾರ್ಯ ಚುರುಕುಗೊಳಿಸಲಾಗಿದೆ, ಕೋವಿಡ್ ಲಕ್ಷಣ ಇರುವವರು ಕಂಡು ಬಂದಲ್ಲಿ ವಾಪಸ್ ಕಳುಹಿಸುವಂತೆ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಇಂದು  ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಖುದ್ದು ಮೂಲೆಹೊಳೆ ಚೆಕ್ ಪೋಸ್ಟ್ ಗೆ ಭೇಟಿ ನೀಡಿ ಚೆಕ್ ಪೋಸ್ಟ್ ನಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು. ಯಾವುದೇ ಕಾರಣಕ್ಕು ನೆಗೆಟಿವ್ ವರದಿ ಇಲ್ಲದವರಿಗೆ ಪ್ರವೇಶಾವಕಾಶ ನೀಡಬಾರದು ಎಂದು ಚೆಕ್ ಪೋಸ್ಟ್ ಗೆ ನಿಯೋಜಿಸಿರುವ ಆರೋಗ್ಯ, ಕಂದಾಯ, ಪೊಲೀಸ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಗೆ ಸೂಚಿಸಿದರು.

ಆಂದೋಲನ ಮಾದರಿಯಲ್ಲಿ ಜಿಲ್ಲೆಯ  ಗಡಿಭಾಗದ ಗ್ರಾಮಗಳ ಜನರಿಗೆ ಕೋವಿಡ್ ಲಸಿಕೆ  ಹಾಕುವ ಕಾರ್ಯ ನಡೆಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಅವರು  ನಿರ್ದೇಶನ ನೀಡಿದ್ದಾರೆ.

ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳು, ಪ್ರವಾಸಿತಾಣಗಳು, ಯಾತ್ರಾ ಸ್ಥಳಗಳಲ್ಲಿ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು, ನಿಯಮ ಉಲ್ಲಂಘಿಸಿ  ಹೆಚ್ಚು ಜನಸಂದಣಿ ಕಂಡುಬಂದಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ವಿರುದ್ದ ವಿಪತ್ತು ನಿರ್ವಹಣಾ ಕಾಯ್ದೆ ಅನುಸಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು
Published by:Seema R
First published: