ಆನೇಕಲ್(ಮಾ.23) : ರಾಜ್ಯದಲ್ಲಿ ಕೊರೋನಾ ಶಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ, ಹೆಬ್ಬಗೋಡಿ ಸಮೀಪದ ಅಪಾರ್ಟ್ವೊಂದರಲ್ಲಿ ವಿದೇಶಕ್ಕೆ ಭೇಟಿ ನೀಡಿ ವಾಪಸ್ಸು ಬಂದಿದ್ದ ಇಬ್ಬರು ವ್ಯಕ್ತಿಗಳು ಸಾರ್ವಜನಿಕವಾಗಿ ಓಡಾಟ ನಡೆಸಿದ್ದಾರೆ. ಆತಂಕಗೊಂಡ ಸ್ಥಳೀಯರಿಂದ ಹೆಲ್ಪ್ ಲೈನ್ ಗೆ ಮಾಹಿತಿ ನೀಡಿದ್ದಾರೆ.
ಹೊರವಲಯ ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿ ಸಮಿಪದ ಇಟಿನಾ ನಿಲಯ ಅಪಾರ್ಟ್ಮೆಂಟ್ ನಲ್ಲಿ ಇತ್ತೀಚೆಗೆ ನೈಜೀರಿಯಾ ಭೇಟಿ ನೀಡಿ ಬಂದಿದ್ದ ಇಬ್ಬರು ವ್ಯಕ್ತಿಗಳು ಬಂದಿದ್ದಾರೆ. ಯಾವುದೇ ರೋಗ ಲಕ್ಷಣಗಳು ಇಲ್ಲದಿದ್ದರು ಕ್ವಾರಂಟೈನ್ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಒಳಪಡಿಸಿದ್ದರು.
ಅರೋಗ್ಯ ಅಧಿಕಾರಿಗಳು ಅವರ ಕೈಗೆ ಗುರುತಿನ ಸೀಲ್ ಹಾಕಿದ್ದರು. ಅಧಿಕಾರಿಗಳು ಸೂಚನೆ ಉಲ್ಲಂಘಿಸಿ ಅಪಾರ್ಟ್ಮೆಂಟ್ ಸುತ್ತಮುತ್ತ ಓಡಾಟ ನಡೆಸಿದ್ದಾರೆ. ಭಯಭೀತರಾಗಿದ್ದ ಬಡಾವಣೆ ನಿವಾಸಿ ಪೊಲೀಸರು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ನೈಜೀರಿಯಾ ಪ್ರಜೆಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಸಮಯದಲ್ಲಿ ಪೊಲೀಸರಿಗೆ ಕರೋನಾ ಶಂಕಿತನೊಬ್ಬ ಅವಾಜ್ ಹಾಕಿದ್ದಾರೆ. ಕೊನೆಗೆ ರಾಜೀವ್ ಗಾಂಧಿ ಆಸ್ಪತ್ರೆಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಕರೆದೊಯ್ದಿದ್ದಾರೆ.
ಇದನ್ನೂ ಓದಿ :
ರಾಜ್ಯವನ್ನು ತುರ್ತು ಲಾಕ್ಡೌನ್ ಮಾಡದಿದ್ದರೆ ಪರಿಸ್ಥಿತಿ ಕೈಮೀರಲಿದೆ; ಅಧಿಕಾರಿಗಳಿಂದ ಸಿಎಂ ಗೆ ಸಲಹೆ
ಕೊರೋನಾ ವೈರಸ್ ಸೋಂಕಿತರು ಪತ್ತೆಯಾಗಿರುವ ಜಿಲ್ಲೆಗಳನ್ನು ಲಾಕ್ ಡೌನ್ ಮಾಡಲು ಈ ಮೊದಲು ನಿರ್ಧರಿಸಲಾಗಿತ್ತು. ಅಂತೆಯೇ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಗಳೂರು, ಮೈಸೂರು, ಬೆಳಗಾವಿ, ಕಲಬುರ್ಗಿ, ಧಾರವಾಡ, ಚಿಕ್ಕಬಳ್ಳಾಪುರ ಮತ್ತು ಕೊಡಗು ಜಿಲ್ಲೆಗಳಲ್ಲಿ ಮಾರ್ಚ್ 31ರವರೆಗೆ ಬಂದ್ ಮಾಡಲು ಆದೇಶಿಸಲಾಗಿದೆ.
ಭಾರತದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಏರುತ್ತಲೇ ಇದೆ. ಭಾರತದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 8ಕ್ಕೆ ಏರಿದೆ. ಈ ಮೂಲಕ ಮುಂಬೈವೊಂದರಲ್ಲೇ ಮೂರು ವ್ಯಕ್ತಿಗಳು ಕೊರೋನಾಗೆ ಬಲಿಯಾದಂತಾಗಿದೆ. ಕರ್ನಾಟಕದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ 27 ಹಾಗೂ ಭಾರತದಾದ್ಯಂತ ಪ್ರಕರಣಗಳ ಸಂಖ್ಯೆ 415 ದಾಟಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ