ಮುಂಬರುವ ದಿನಗಳಲ್ಲಿ ಹಸಿವು-ನಿರುದ್ಯೋಗ ಹೆಚ್ಚಲಿದೆ, ಈಗಲೇ ಮಾರ್ಗೋಪಾಯ ಹುಡುಕಿ; ಸರ್ಕಾರಕ್ಕೆ ಹೆಚ್‌ಡಿಕೆ ಎಚ್ಚರಿಕೆ

ಕೊರೋನಾ ಹರಡುವುದನ್ನು ತಡೆಯುವ ಸಲುವಾಗಿ ಕಳೆದ 5 ವಾರಗಳಿಂದ ದೇಶದಾದ್ಯಂತ ಲಾಕ್‌ಡೌನ್ ಘೋಷಿಸಲಾಗಿದೆ. ಪರಿಣಾಮ ದೇಶದ ಆರ್ಥಿಕತೆ ಮತ್ತು ಜಿಡಿಪಿ ಕುಸಿದಿದ್ದು ಜನ ಬದುಕನ್ನೇ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಡುವ ಮೂಲಕ ಕುಮಾರಸ್ವಾಮಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ

ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ

  • Share this:
ಬೆಂಗಳೂರು (ಏಪ್ರಿಲ್‌ 27); ಕೊರೋನಾದಿಂದಾಗಿ ದೇಶದ ಆರ್ಥಿಕತೆ ತೀವ್ರವಾಗಿ ಕುಸಿದಿದ್ದು ಮುಂಬರುವ ದಿನಗಳಲ್ಲಿ ಪರಿಸ್ಥಿತಿ ಇನ್ನೂ ಬಿಗಡಾಯಿಸಲಿದೆ, ಹಸಿವು-ನಿರುದ್ಯೋಗ ಸಮಸ್ಯೆಗಳು ಎದುರಾಗಲಿವೆ. ಹೀಗಾಗಿ ರಾಜ್ಯ ಸರ್ಕಾರಗಳು ಈಗಲೇ ಈ ಕುರಿತು ಆರ್ಗೋಪಾಯಗಳನ್ನು ಹುಡುಕಬೇಕು. ಜನರ ಕೈನಲ್ಲಿ ಹಣ ಇರುವಂತೆ ನೋಡಿಕೊಳ್ಳಬೇಕು ಎಂದು ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಕೊರೋನಾ ಹರಡುವುದನ್ನು ತಡೆಯುವ ಸಲುವಾಗಿ ಕಳೆದ 5 ವಾರಗಳಿಂದ ದೇಶದಾದ್ಯಂತ ಲಾಕ್‌ಡೌನ್ ಘೋಷಿಸಲಾಗಿದೆ. ಪರಿಣಾಮ ದೇಶದ ಆರ್ಥಿಕತೆ ಮತ್ತು ಜಿಡಿಪಿ ಕುಸಿದಿದ್ದು ಜನ ಬದುಕನ್ನೇ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಡುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಿರುವ ಕುಮಾರಸ್ವಾಮಿ,



"ರಿಸರ್ವ ಬ್ಯಾಂಕ್ ಒಳಗೊಂಡಂತೆ ಅನೇಕ ಸಂಸ್ಥೆಗಳು ಭಾರತದ ಜಿಡಿಪಿ ಬೆಳವಣಿಗೆ ತೀವ್ರ ಕುಸಿತಕ್ಕೆ ಇಳಿಯುವ ಮುನ್ಸೂಚನೆ ಕೊಟ್ಟಿರುವಾಗ ಕೇಂದ್ರ ಮತ್ತು ರಾಜ್ಯ ಸರಕಾರಗಳು ಜನಸಾಮಾನ್ಯನ ಕೈಯಲ್ಲಿ ಹಣ ಉಳಿಸುವ ಮಾರ್ಗೋಪಾಯಗಳನ್ನು ಹುಡುಕಬೇಕಾಗುತ್ತದೆ. ಮುಂಬರುವ ದಿನಗಳಲ್ಲಿ 'ಕಾಸ್ಟ್ ಆಫ್ ಲಿವಿಂಗ್' ಕಡಿಮೆ ಮಾಡುವುದು ಸರಕಾರಗಳ ಆದ್ಯತೆ ಆಗಲಿದೆ.



ಅನೇಕ ಖಾಸಗಿ ಕಂಪನಿಗಳು ಈಗಾಗಲೇ ಸಿಬ್ಬಂದಿ ಕಡಿತ ಮತ್ತು ಸಂಬಳ ಕಡಿತ ಮಾಡುವ ತೀರ್ಮಾನ ತಗೆದುಕೊಂಡಿವೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನೂ ಬಿಗಡಾಯಿಸಲಿದೆ ಹೀಗಾಗಿ ಸರಕಾರ ಜನಕಲ್ಯಾಣ ಯೋಜನೆಗಳ ಮೇಲೆ ಹೆಚ್ಚು ಖರ್ಚು ಮಾಡಬೇಕಾಗುವುದರರಿಂದ ಕುಬೇರ ಉದ್ಯೋಗಪತಿಗಳಿಂದ ಕರೋನ ತೆರಿಗೆಯನ್ನು ಸಂಗ್ರಹಿಸಲಿ" ಎಂದು ಸಲಹೆ ನೀಡಿದ್ದಾರೆ.

ಅಲ್ಲದೆ, ರೈತರ ಮತ್ತು ಕಾರ್ಮಿಕರ ಬಗ್ಗೆಯೂ ಸರ್ಕಾರದ ಗಮನ ಸೆಳೆದಿರುವ ಅವರು, "ರೈತರು ಮತ್ತು ಅಸಂಘಟಿತ ವಲಯದ ಕಾರ್ಮಿಕರ ಜೀವನೋಪಾಯಗಳ ರಕ್ಷಣೆ ಮಾಡುವುದು ತುರ್ತಿನ ಆದ್ಯತೆಯಾಗಿದೆ. ಟ್ಯಾಕ್ಸಿ ಮತ್ತು ಆಟೋ ಚಾಲಕರು, ಗಾರ್ಮೆಂಟ್ ಕೆಲಸಗಾರರು, ಕಟ್ಟಡ ಕಾರ್ಮಿಕರು ಇತ್ಯಾದಿ ನಗರ ಪ್ರದೇಶದ ಬಡ ಸಮುದಾಯಕ್ಕೋಸ್ಕರ ಸರಕಾರ ಹೆಚ್ಚಿನ ಪರಿಹಾರ ಒದಗಿಸುವ ಕೆಲಸ ಮಾಡಬೇಕಾಗಿದೆ" ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜತೆ ಮೋದಿ ಮಹತ್ವದ ಚರ್ಚೆ: ನಿರ್ಧಾರವಾಗಲಿದೆ ಲಾಕ್​ಡೌನ್​​ ಭವಿಷ್ಯ
First published: