ಕೊರೋನಾ ಭೀತಿ: ಕರ್ನಾಟಕ ಕೇರಳ ಗಡಿ ದಾಟಿದರೆ ಕೋವಿಡ್ ಸೆಂಟರೇ ಗತಿ...!

ಇನ್ನು ವಿದೇಶದಿಂದ ಬಂದು ಹೋಂ ಕ್ವಾರಂಟೈನ್ ನಲ್ಲಿ ಇರುವವರು ನಿಯಮ ಮೀರಿ ಆಚೆ ಓಡಾಡಿದರೆ ಅವರ ವಿರುದ್ಧ ಕೇಸು ದಾಖಲಿಸುತ್ತೇವೆ. ಕಾನೂನು ಪ್ರಕಾರ ಅವರಿಗೆ ಶಿಕ್ಷೆಯಾಗುತ್ತದೆ.

HR Ramesh | news18-kannada
Updated:March 26, 2020, 7:59 PM IST
ಕೊರೋನಾ ಭೀತಿ: ಕರ್ನಾಟಕ ಕೇರಳ ಗಡಿ ದಾಟಿದರೆ ಕೋವಿಡ್ ಸೆಂಟರೇ ಗತಿ...!
ಬೈಕ್​​ ಸವಾರನಿಗೆ ತರಾಟೆಗೆ ತೆಗೆದುಕೊಂಡ ಪೊಲೀಸರು
  • Share this:
ಕೊಡಗು: ಕೊರೋನಾ ಮಹಾಮಾರಿ ನಿಯಂತ್ರಿಸಲು ಕೊಡಗು ಜಿಲ್ಲಾಡಳಿತ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದೆ. ಅದರಲ್ಲೂ ಅತೀ ಹೆಚ್ಚು ಕೊರೋನಾ ಪಾಸಿಟಿವ್ ಪ್ರಕರಣ ದಾಖಲಾಗಿರುವ ಕೇರಳ ಮತ್ತು ಕರ್ನಾಟಕಕ್ಕೆ ಸಂಪರ್ಕವನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಹೀಗಿದ್ದರೂ ಯಾರಾದರೂ ನಿಯಮ ಮೀರಿ ಕರ್ನಾಟಕದ ಕೊಡಗಿಗೆ ಅಥವಾ ಕೊಡಗಿನಿಂದ ಕೇರಳಕ್ಕೆ ಎಂಟ್ರಿ ಕೊಟ್ಟರೆ ಯಾವುದೇ ಪರಿಶೀಲನೆಯನ್ನೂ ಮಾಡದೇ 14 ದಿನಗಳ ಕಾಲ ಕೋವಿಡ್ ಸೆಂಟರ್​ಗೆ ಕಳುಹಿಸಲಾಗುತ್ತಿದೆ.

ಈ ಸಂಬಂಧ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಿಣಿ ಜಾಯ್, ಯಾರೇ ಗಡಿ ದಾಟಿದರೂ, ಅವರು ವಿದೇಶದಿಂದ ವಾಪಸ್ ಆಗಿರುವ ಇತಿಹಾಸ ಇಲ್ಲದಿದ್ದರೂ ನೇರವಾಗಿ ಕೋವಿಡ್ ಸೆಂಟರ್​ಗೆ ಕಳುಹಿಸುತ್ತಿದ್ದೇವೆ. ಈಗಾಗಲೇ ಕೇರಳದಿಂದ ಬಂದ ಇಬ್ಬರನ್ನು ಕೊಡಗಿನಲ್ಲಿರುವ ಕೋವಿಡ್ ಸೆಂಟರ್​ಗೆ ಕಳುಹಿಸಿದ್ದೇವೆ ಎಂದು ತಿಳಿಸಿದ್ದಾರೆ.

ಇನ್ನು ವಿದೇಶದಿಂದ ಬಂದು ಹೋಂ ಕ್ವಾರಂಟೈನ್ ನಲ್ಲಿ ಇರುವವರು ನಿಯಮ ಮೀರಿ ಆಚೆ ಓಡಾಡಿದರೆ ಅವರ ವಿರುದ್ಧ ಕೇಸು ದಾಖಲಿಸುತ್ತೇವೆ. ಕಾನೂನು ಪ್ರಕಾರ ಅವರಿಗೆ ಶಿಕ್ಷೆಯಾಗುತ್ತದೆ. ಹೀಗೆ ಶಿಕ್ಷೆಗೆ ಒಳಗಾದವರ ಪಾಸ್​ಪೋರ್ಟ್ ಅಥವಾ ವೀಸಾಗಳಿಗೆ ಸಮಸ್ಯೆಯಾಗಲಿದ್ದು, ನಂತರ ಪುನಃ ನೀವು ವಿದೇಶಗಳಿಗೆ ತೆರಳಲು ಸಮಸ್ಯೆಯಾಗುತ್ತದೆ ಎಂದು ಕಟ್ಟುನಿಟ್ಟಿನ ಎಚ್ಚರಿಕೆ ಸಂದೇಶ ನೀಡಿದ್ದಾರೆ.

ಇದನ್ನು ಓದಿ: ಕೊರೋನಾ ಸೋಂಕು ನಿಯಂತ್ರಣ ವಿಷಯವಾಗಿ ಸಿದ್ದರಾಮಯ್ಯ ಸರ್ಕಾರಕ್ಕೆ ನೀಡಿರುವ ಸಲಹೆಗಳು...

ವರದಿ: ರವಿ ಕೊಡಗು
First published: March 26, 2020, 7:59 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading