ಎಚ್ಚರ! ಇನ್ಮುಂದೆ ಅನಗತ್ಯವಾಗಿ ತಿರುಗಿದ್ರೆ ಲಾಠಿ ಏಟು ಬೀಳಲ್ಲ ವಾಹನವೇ ಸೀಜ್​ ಆಗುತ್ತೆ!

India Lockdown Latest News: ಕೊರೋನಾ ವೈರಸ್​ ನಿಯಂತ್ರಣಕ್ಕೆ ಸಾಧ್ಯವಾಗದ ಕಾರಣ ಪ್ರಧಾನಿ ನರೇಂದ್ರ ಮೋದಿ 21 ದಿನಗಳ ಲಾಕ್​ಡೌನ್​ ಆದೇಶ ಹೊರಡಿಸಿದ್ದರು. ಏ.14ರವರೆಗೆ ಈ ಆದೇಶ ಮುಂದುವರಿಯಲಿದೆ. ಆದಾಗ್ಯೂ, ಅನೇಕರು ಅನಗತ್ಯ ಓಡಾಟ ನಡೆಸಿದ್ದು ಕಂಡು ಬಂದಿತ್ತು. 

news18-kannada
Updated:March 30, 2020, 9:26 AM IST
ಎಚ್ಚರ! ಇನ್ಮುಂದೆ ಅನಗತ್ಯವಾಗಿ ತಿರುಗಿದ್ರೆ ಲಾಠಿ ಏಟು ಬೀಳಲ್ಲ ವಾಹನವೇ ಸೀಜ್​ ಆಗುತ್ತೆ!
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು (ಮಾ.30): ಭಾರತದಲ್ಲಿ ಕೊರೋನಾ ವೈರಸ್​ ನಿರಂತರವಾಗಿ ಹರಡುತ್ತಲೇ ಇದೆ. ಹೀಗಾಗಿ ಕೇಂದ್ರ ಸರ್ಕಾರ 21 ದಿನಗಳ ಲಾಕ್​ಡೌನ್​ ಆದೇಶ ಹೊರಡಿಸಿದೆ. ಆದಾಗ್ಯೂ ಅನೇಕರು ರಸ್ತೆಯ ಮೇಲೆ ಅನಗತ್ಯವಾಗಿ ಸುತ್ತಾಡುತ್ತಿದ್ದಾರೆ. ಈ ಬಗ್ಗೆ ಪೊಲೀಸರು ಎಷ್ಟೇ ಸೂಚನೆ ನೀಡಿದರು ಜನರು ಮಾತ್ರ ಬದಲಾಗುತ್ತಿಲ್ಲ. ಹೀಗಾಗಿ ಕಟ್ಟುನಿಟ್ಟಿನ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.

ಕೊರೋನಾ ವೈರಸ್​ ನಿಯಂತ್ರಣಕ್ಕೆ ಸಾಧ್ಯವಾಗದ ಕಾರಣ ಪ್ರಧಾನಿ ನರೇಂದ್ರ ಮೋದಿ 21 ದಿನಗಳ ಲಾಕ್​ಡೌನ್​ ಆದೇಶ ಹೊರಡಿಸಿದ್ದರು. ಏ.14ರವರೆಗೆ ಈ ಆದೇಶ ಮುಂದುವರಿಯಲಿದೆ. ಆದಾಗ್ಯೂ, ಅನೇಕರು ಅನಗತ್ಯ ಓಡಾಟ ನಡೆಸಿದ್ದು ಕಂಡು ಬಂದಿತ್ತು.

ಹೀಗಾಗಿ, ಲಾಕ್​ಡೌನ್ ವೇಳೆ ಕಾರಣ ಇಲ್ಲದೆ ಓಡಾಡಿದರೆ ಅಂಥ ವಾಹನವನ್ನು ಲಾಕ್​ಮಾಡಲು ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಆದೇಶ ಹೊರಡಿಸಿದೆ. ಈ ಮೂಲಕ ಕಠಿಣ ಆದೇಶವನ್ನು ಹೊರಡಿಸಿದೆ. ನಿನ್ನೆಯಿಂದಲೇ ಈ ನಿಯಮ ಜಾರಿಗೆ ಬಂದಿದೆ. ಅಚ್ಚರಿ ಎಂದರೆ ನಿನ್ನೆ ಒಂದೇ ದಿನ 900 ವಾಹನಗಳನ್ನು ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ: ಭಾರತದಲ್ಲಿ 1 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ; 27 ಮಂದಿ ಸಾವು

ಕಟ್ಟುನಿಟ್ಟಾಗಿ ಲಾಕ್ ಡೌನ್ ಜಾರಿಗೆ ತಂದರೂ ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರುಗತಿಯಲ್ಲೇ ಇದೆ. ದೇಶಾದ್ಯಂತ ಕೊರೋನಾ ವೈರಸ್ ಸೋಂಕು ತಗುಲಿದವರ ಸಂಖ್ಯೆ 1,024ಕ್ಕೆ ಮುಟ್ಟಿದೆ ಎಂದು ಇತ್ತೀಚಿನ ವರದಿಗಳು ಹೇಳುತ್ತಿವೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, 901 ಮಂದಿಯಲ್ಲಿ ಈಗ ಕೊರೋನಾ ಸೋಂಕು ಇರುವುದು (Active cases) ಪತ್ತೆಯಾಗಿದೆ. 27 ಮಂದಿ ಸಾವನ್ನಪ್ಪಿದ್ದಾರೆ. 96 ಮಂದಿ ಸೋಂಕಿನಿಂದ ಮುಕ್ತಗೊಂಡು ಆಸ್ಪತ್ರೆಯಿಂದ ಡಿಸ್​ಚಾರ್ಜ್ ಆಗಿದ್ದಾರೆ.
First published: March 30, 2020, 8:02 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading