HOME » NEWS » Coronavirus-latest-news » IN 1ST VIRUS RELATED DEATH OF TROOPER IN J K CRPF PERSONNEL DIES OF COVID 19 IN SRINAGAR LG

ಜಮ್ಮು-ಕಾಶ್ಮೀರದಲ್ಲಿ ಕೊರೋನಾಗೆ ಸಿಆರ್​ಪಿಎಫ್​​ ಯೋಧ ಬಲಿ

ದಕ್ಷಿಣ ಕಾಶ್ಮೀರದ ಅನಂತನಾಗ್​ ಜಿಲ್ಲೆಯ ಸೈನಿಕ ಪಡೆಯಲ್ಲಿ ಯೋಧ ಕಾರ್ಯನಿರ್ವಹಿಸುತ್ತಿದ್ದ. ಗುರುವಾರ ಯೋಧನಿಗೆ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಕೂಡಲೇ ಎಸ್​ಕೆಐಎಮ್​ಎಸ್​ ಆಸ್ಪತ್ರೆಗೆ ಆತನನ್ನು ದಾಖಲಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

news18-kannada
Updated:June 8, 2020, 2:48 PM IST
ಜಮ್ಮು-ಕಾಶ್ಮೀರದಲ್ಲಿ ಕೊರೋನಾಗೆ ಸಿಆರ್​ಪಿಎಫ್​​ ಯೋಧ ಬಲಿ
ಸಾಂದರ್ಭಿಕ ಚಿತ್ರ
  • Share this:
ಜಮ್ಮು(ಜೂ.08): ದೇಶದಲ್ಲಿ ದಿನದಿಂದ ದಿನಕ್ಕೆ ಕೊರೋನಾ ವೈರಸ್​ ಆರ್ಭಟ ಹೆಚ್ಚಾಗುತ್ತಿದೆ. ಜಮ್ಮು-ಕಾಶ್ಮೀರದಲ್ಲಿ ಸಿಆರ್​ಪಿಎಫ್​ ಯೋಧ ಕೊರೋನಾಗೆ ಬಲಿಯಾಗಿದ್ದಾನೆ. 40 ವರ್ಷದ ಸೈನಿಕನಿಗೆ ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆ, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೆ ಇಂದು ಕೊರೋನಾಗೆ ಬಲಿಯಾಗಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಈವರೆಗೆ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 42ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ಜಮ್ಮು ಕಾಶ್ಮೀರದ ಸೈನಿಕ ಪಡೆಯಲ್ಲಿ ಕೊರೋನಾ ಸಂಬಂಧಿತ ಮೊದಲ ಸಾವು ಇದಾಗಿದೆ ಎಂದು ತಿಳಿದು ಬಂದಿದೆ.

ರಾಜ್ಯಸಭೆಗೆ ಬಿಜೆಪಿ ಹೈಕಮಾಂಡ್ ಅಚ್ಚರಿಯ ಆಯ್ಕೆ; ಅಶೋಕ್ ಗಸ್ತಿ, ಈರಣ್ಣ ಕಡಾಡಿ ಅಭ್ಯರ್ಥಿಗಳು!

ದಕ್ಷಿಣ ಕಾಶ್ಮೀರದ ಅನಂತನಾಗ್​ ಜಿಲ್ಲೆಯ ಸೈನಿಕ ಪಡೆಯಲ್ಲಿ ಯೋಧ ಕಾರ್ಯನಿರ್ವಹಿಸುತ್ತಿದ್ದ. ಗುರುವಾರ ಯೋಧನಿಗೆ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಕೂಡಲೇ ಎಸ್​ಕೆಐಎಮ್​ಎಸ್​ ಆಸ್ಪತ್ರೆಗೆ ಆತನನ್ನು ದಾಖಲಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಪ್ರದೇಶದಿಂದ ಬಂದಿದ್ದ ಯೋಧನ ಗಂಟಲು ದ್ರವವನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಆಗ ಕೋವಿಡ್​-19 ಸೋಂಕು ತಗುಲಿರುವುದು ದೃಢಪಟ್ಟಿತ್ತು. ಬಳಿಕ ಯೋಧನ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿತ್ತು. ಭಾನುವಾರ ರಾತ್ರಿ ಹೃದಯಾಘಾತವಾಗಿ ಯೋಧ ಅಸುನೀಗಿದ್ದಾನೆ ಎಂದು ತಿಳಿದು ಬಂದಿದೆ.

ಈ ಮೂಲಕ ಜಮ್ಮು-ಕಾಶ್ಮೀರದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 42ಕ್ಕೆ ಏರಿಕೆಯಾಗಿದೆ.
First published: June 8, 2020, 2:48 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories