HOME » NEWS » Coronavirus-latest-news » IN A HUMBLE APPEAL RAVI SHANKAR PRASAD ASKS RAHUL GANDHI TO GET HIMSELF VACCINATED MAK

ಮೊದಲು ರಾಹುಲ್ ಗಾಂಧಿ ಲಸಿಕೆ ಹಾಕಿಸಿಕೊಳ್ಳಲಿ ಇದು ನನ್ನ ವಿನಮ್ರ ಮನವಿ; ಸಚಿವ ರವಿಶಂಕರ್ ಪ್ರಸಾದ್

ಕಳೆದ ವಾರ, ಕಾಂಗ್ರೆಸ್‍ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಲಸಿಕೆಯ ಎರಡನೇ ಡೋಸ್ ತೆಗೆದುಕೊಂಡಿದ್ದಾರೆ. ರಾಹುಲ್ ಗಾಂಧಿ ಅವರು ಮೇ ತಿಂಗಳಲ್ಲಿ ಸೋಂಕಿಗೆ ಒಳಗಾಗಿ ಗುಣಮುಖರಾದ ಕಾರಣಕ್ಕೆ ಈಗಲೇ ಲಸಿಕೆ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂದು ಕಾಂಗ್ರೆಸ್ ತಿಳಿಸಿದೆ.

news18-kannada
Updated:June 21, 2021, 6:23 PM IST
ಮೊದಲು ರಾಹುಲ್ ಗಾಂಧಿ ಲಸಿಕೆ ಹಾಕಿಸಿಕೊಳ್ಳಲಿ ಇದು ನನ್ನ ವಿನಮ್ರ ಮನವಿ; ಸಚಿವ ರವಿಶಂಕರ್ ಪ್ರಸಾದ್
ರಾಹುಲ್ ಗಾಂಧಿ-ರವಿಶಂಕರ್ ಪ್ರಸಾದ್.
  • Share this:
ನವ ದೆಹಲಿ (ಜೂನ್ 21); ಕೇಂದ್ರ ಸರ್ಕಾರ ಮೇ 01 ರಿಂದಲೇ ರಾಷ್ಟ್ರಾದ್ಯಂತ 18-44 ವಯಸ್ಸಿನ ಎಲ್ಲರಿಗೂ ಕೊರೋನಾ ಲಸಿಕೆ ನೀಡುವುದಾಗಿ ಘೋಷಿಸಿತ್ತು. ಆದರೆ, ತದ ನಂತರ ಈ ಜವಾಬ್ದಾರಿ ರಾಜ್ಯ ಸರ್ಜಾರಕ್ಕೆ ಹಸ್ತಾಂತರಿಸಿದ್ದಲ್ಲದೆ, ಲಸಿಕೆಯನ್ನು ಉಚಿತವಾಗಿ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿತ್ತು. ಸುಪ್ರೀಂ ಕೋರ್ಟ್​ ಚಾಟಿಯ ನಂತರ ಲಸಿಕೆಯನ್ನು ತಾನೇ ನೀಡಲು ಮುಂದಾಗಿತ್ತು. ಹೀಗಾಗಿ ಕಾಂಗ್ರೆಸ್ ಪಕ್ಷದ ಮಾಜಿ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಆರಂಭದಿಂದಲೂ ಕೇಂದ್ರ ಸರ್ಕಾರದ ಲಸಿಕೆ ನೀತಿಯ ವಿರುದ್ಧ ವ್ಯಾಪಕವಾಗಿ ಟೀಸಿಸುತ್ತಿದ್ದರು. ಆದರೆ, ಇಂದು ಲಸಿಕೆ ವಿಚಾರವಾಗಿ ರಾಹುಲ್ ಗಾಂಧಿಯ ಬಳಿ ಮನವಿ ಮಾಡಿರುವ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್, "ರಾಹುಲ್ ಗಾಂಧಿಯವರು ದಯವಿಟ್ಟು ಲಸಿಕೆಯನ್ನು ಪಡೆಯಬೇಕು ಎಂದು ನಾನು ವಿನಮ್ರವಾಗಿ ಮನವಿ ಮಾಡುತ್ತೇನೆ" ಎಂದು ತಿಳಿಸಿದ್ದಾರೆ.

ಈ ಬಗ್ಗೆ ಬಿಹಾರದ ಪಾಟ್ನಾದಲ್ಲಿ ಮಾತನಾಡಿರುವ ರವಿಶಂಕರ್ ಪ್ರಸಾದ್, "ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇನ್ನೂ ಲಸಿಕೆ ಹಾಕಿಸಿಕೊಂಡಿದ್ದಾರೋ ಇಲ್ಲವೋ ಎಂಬುದು ದೇಶಕ್ಕೆ ತಿಳಿದಿಲ್ಲ. ರಾಹುಲ್‍ ಗಾಂಧಿ ಅವರೇ, ಇನ್ನೂ ಲಸಿಕೆ ಪಡೆಯದಿದ್ದರೆ ಕೂಡಲೇ ಲಸಿಕೆ ಹಾಕಿಸಿಕೊಳ್ಳಿ. ಇದು ನನ್ನ ವಿನಮ್ರ ಮನವಿ" ಎಂದು ತಿಳಿಸಿದ್ದಾಗಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಆದರೆ, ಸಚಿವ ರವಿಶಂಕರ್ ಪ್ರಸಾದ್​ ಹೇಳಿಕೆಗೆ ತಿರುಗೇಟು ನೀಡಿರುವ ಕಾಂಗ್ರೆಸ್​, "ಕಳೆದ ವಾರ, ಕಾಂಗ್ರೆಸ್‍ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಲಸಿಕೆಯ ಎರಡನೇ ಡೋಸ್ ತೆಗೆದುಕೊಂಡಿದ್ದಾರೆ. ರಾಹುಲ್ ಗಾಂಧಿ ಅವರು ಮೇ ತಿಂಗಳಲ್ಲಿ ಸೋಂಕಿಗೆ ಒಳಗಾಗಿ ಗುಣಮುಖರಾದ ಕಾರಣಕ್ಕೆ ಈಗಲೇ ಲಸಿಕೆ ತೆಗೆದುಕೊಳ್ಳುವ ಅಗತ್ಯವಿಲ್ಲ" ಎಂದು ತಿಳಿಸಿದೆ.

ಇದನ್ನೂ ಓದಿ: ಬಿಜೆಪಿ ಜೊತೆ ಮೈತ್ರಿ ಸಾಧಿಸಿ ನಮ್ಮನ್ನು ಉಳಿಸಿ; ಸಿಎಂ ಉದ್ಧವ್​ ಠಾಕ್ರೆಗೆ ಶೀವಸೇನೆ ಶಾಸಕನ ಪತ್ರ!

"ಮೇ 16 ರಂದು ರಾಹುಲ್ ಗಾಂಧಿ ಲಸಿಕೆ ತೆಗೆದುಕೊಳ್ಳಲು ನಿರ್ಧರಿಸಿದ್ದರು. ಆದರೆ ಒಂದು ದಿನ ಮೊದಲು ಕೊರೊನಾ ಪಾಸಿಟಿವ್‍ ಫಲಿತಾಂಶ ಬಂದಿತು ಎಂದು ಪಕ್ಷದ ಹಿರಿಯ ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ. “ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಲಸಿಕೆಯ ಎರಡೂ ಡೋಸ್ ತೆಗೆದುಕೊಂಡಿದ್ದಾರೆ. ರಾಹುಲ್ ಗಾಂಧಿಯವರು ಕಡ್ಡಾಯ ಕಾಯುವ ಅವಧಿ ಮುಗಿದ ನಂತರ ಲಸಿಕೆ ತೆಗೆದುಕೊಳ್ಳುತ್ತಾರೆ" ಎಂದು ಕಾಂಗ್ರೆಸ್‍ ನಾಯಕರೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಹಲವಾರು ಕೇಂದ್ರ ಸಚಿವರು ಮತ್ತು ಬಿಜೆಪಿ ನಾಯಕರು, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಉನ್ನತ ಕಾಂಗ್ರೆಸ್ ನಾಯಕರು ಕೋವಿಡ್ ಲಸಿಕೆ ತೆಗೆದುಕೊಂಡಿದ್ದಾರೆಯೇ ಎಂಬ ವಿವರಗಳನ್ನು ಸಾರ್ವಜನಿಕವಾಗಿ ಪ್ರಕಟಿಸಲು ಕೇಳಿದ ನಂತರ ಈ ಹೇಳಿಕೆ ಬಂದಿದೆ. ಕೊರೊನಾ ಪಾಸಿಟಿವ್‍ಗೆ ಒಳಗಾದವರು ಸಂಪೂರ್ಣವಾಗಿ ಚೇತರಿಸಿಕೊಂಡ ಮೂರು ತಿಂಗಳ ನಂತರ ಲಸಿಕೆ ತೆಗೆದುಕೊಳ್ಳಬೇಕು ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.

ಇದನ್ನೂ ಓದಿ: Explained| ಸದ್ಯಕ್ಕೆ ಯಡಿಯೂರಪ್ಪ ಸ್ಥಾನ ಭದ್ರ....ಆದರೂ, ಆ ಮೂವರು ಕಮಲ ನಾಯಕರು ಸಿಎಂ ವಿರುದ್ಧ ಬಂಡಾಯ ಎದ್ದಿರುವುದು ಏಕೆ?ಕೊರೊನಾ ನಿರ್ವಹಣೆಯಲ್ಲಿ ಕೇಂದ್ರದ ವೈಫಲ್ಯವನ್ನು ರಾಹುಲ್ ಗಾಂಧಿ ಅತ್ಯಂತ ತೀವ್ರವಾಗಿ ಟೀಕಿಸುತ್ತರ ಬಂದಿದ್ದಾರೆ. ಕೇಂದ್ರದ ಲಸಿಕಾ ನೀತಿಯ ವಿರುದ್ಧ ನಿರಂತರವಾಗಿ ದಾಳಿ ಮಾಡುತ್ತ ಬಂದಿದ್ದಾರೆ. ಇದೇ ಕಾರಣಕ್ಕೆ ಬಿಜೆಪಿ ಕೇಂದ್ರ ಸಚಿವ ರಾಹುಲ್ ಗಾಂಧಿಯವರು ಮೊದಲು ಲಸಿಕೆ ಪಡೆಯಲಿ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.
Youtube Video

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
Published by: MAshok Kumar
First published: June 21, 2021, 6:23 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories