Coronavirus Updates: ಭಾರತದಲ್ಲಿ ಕೋವಿಡ್​​-19 ತೀವ್ರತೆ; ಒಂದೇ ದಿನ 19,459 ಕೇಸ್​ ಪತ್ತೆ; 5,48,318 ಸೋಂಕಿತರು

ಇದಲ್ಲದೆ ಭಾನುವಾರ 380 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ 16,475ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೋನಾದಿಂದ ಗುಣ ಆದವರು 3,21,723 ಜನ ಮಾತ್ರ. ದೇಶದಲ್ಲಿ ಇನ್ನೂ 2,10,120 ಜನರಲ್ಲಿ ಕೊರೋನಾ ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.

news18-kannada
Updated:June 29, 2020, 10:31 AM IST
Coronavirus Updates: ಭಾರತದಲ್ಲಿ ಕೋವಿಡ್​​-19 ತೀವ್ರತೆ; ಒಂದೇ ದಿನ 19,459 ಕೇಸ್​ ಪತ್ತೆ; 5,48,318 ಸೋಂಕಿತರು
ಸಾಂದರ್ಭಿಕ ಚಿತ್ರ
  • Share this:
ನವದೆಹಲಿ(ಜೂ.29): ಕೊರೋನಾ ಸೋಂಕು ಹರಡುವಿಕೆ ಬಹಳ‌ ಕಡಿಮೆ ಇದ್ದಾಗ ಲಾಕ್ಡೌನ್ ಜಾರಿ ಮಾಡಲಾಗಿತ್ತು. ಆದರೀಗ, ಸೋಂಕು ಹರಡುವಿಕೆ ಹೆಚ್ಚಾದಾಗ ನಾಮಕಾವಸ್ತೆಗೆ ಮಾತ್ರ ಲಾಕ್ಡೌನ್ ಜಾರಿಗೊಳಿಸಿದ ಪರಿಣಾಮ ಭಾರತದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಶರವೇಗದಲ್ಲಿ ಸಾಗುತ್ತಿದೆ. ಒಂದೇ ವಾರದಲ್ಲಿ ಒಂದು ಲಕ್ಷ ಹೊಸ ಪ್ರಕರಣಗಳು ಪತ್ತೆಯಾಗಿ ದೇಶದ ಕೊರೋನಾ ಪೀಡಿತರ ಸಂಖ್ಯೆ ಐದು ಲಕ್ಷದ ಗಡಿ ದಾಟಿತ್ತು. ಈಗ ಪ್ರತಿದಿನ 19 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗತೊಡಗಿವೆ.

ಭಾರತದಲ್ಲಿ ಪ್ರತಿದಿನ ಜೂನ್ 11ರಿಂದ 10 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜೂನ್ 12ತಾರೀಖಿನಿಂದ 11 ಸಾವಿರಕ್ಕೂ ಹೆಚ್ಚು‌ ಪ್ರಕರಣಗಳು, ಜೂನ್ 17ರಿಂದ 12 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜೂನ್ 18ರಿಂದ 13 ಸಾವಿರಕ್ಕೂ‌ ಹೆಚ್ಚು‌ ಪ್ರಕರಣಗಳು, ಜೂನ್ 19ರಿಂದ 14 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜೂನ್ 23ರಿಂದ 15 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜೂನ್ 24ರಿಂದ 16 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜೂನ್  25ರಿಂದ17 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜೂನ್ 26ರಿಂದ 18 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದ್ದವು. ಈಗ ಜೂನ್ 27ರಿಂದ 19 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗತೊಡಗಿವೆ. ಭಾನುವಾರ 19,459 ಪ್ರಕರಣಗಳು ಕಂಡುಬಂದಿದ್ದು ದೇಶದ ಕೊರೋನಾ ಪೀಡಿತರ ಸಂಖ್ಯೆ 5,48,318ಕ್ಕೆ ಏರಿಕೆಯಾಗಿದೆ.

ಇದಲ್ಲದೆ ಭಾನುವಾರ 380 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ 16,475ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೋನಾದಿಂದ ಗುಣ ಆದವರು 3,21,723 ಜನ ಮಾತ್ರ. ದೇಶದಲ್ಲಿ ಇನ್ನೂ 2,10,120 ಜನರಲ್ಲಿ ಕೊರೋನಾ ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.


ಇದನ್ನೂ ಓದಿ: ದೆಹಲಿಯ ಮಂಡೋಲಿ ಜೈಲಿಗೂ ತಟ್ಟಿದ ಕೊರೋನಾ ಬಿಸಿ: ಐವರು ಕೈದಿಗಳಿಗೆ ಸೋಂಕು

ಕೇಂದ್ರ ಆರೋಗ್ಯ ಇಲಾಖೆ ಮಾಹಿತಿಗಳ ಪ್ರಕಾರ ಮೇ 10ರಿಂದ  ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಪ್ರತಿನಿತ್ಯ ನಾಲ್ಕು ಸಾವಿರಕ್ಕಿಂತ ಹೆಚ್ಚಾಗುತ್ತಲೇ ಇದೆ.‌ ಮೇ 10ರಂದು 4,213 ಜನರಿಗೆ, ಮೇ 11ರಂದು 3,064 ಮಂದಿಗೆ, ಮೇ 12 ರಂದು 3,525 ಜನರಿಗೆ, ಮೇ13ರಂದು 3,722 ಮಂದಿಗೆ ಹಾಗೂ ಮೇ 14ರಂದು 3,967 ಜನರಿಗೆ, ಮೇ 15ರಂದು 3,970 ಮಂದಿಗೆ, ಮೇ 16ರಂದು 4,987 ಜನರಿಗೆ, ಮೇ 17ರಂದು 5,242, ಮೇ 18ರಂದು 4,970, ಮೇ 19ರಂದು 5,611, ಮೇ 20ರಂದು 5,609, ಮೇ 21ರಂದು 6,088, ಮೇ 22ರಂದು 6,654, ಮೇ 23ರಂದು 6,767, ಮೇ 24ರಂದು 6,977, ಮೇ 25ರಂದು 6,535, ಮೇ 26ರಂದು 6,387, ಮೇ 27ರಂದು 6,566, ಮೇ 28ರಂದು 7,466, ಮೇ 29ರಂದು 7,964, ಮೇ 30ರಂದು 8,380, ಮೇ 31ರಂದು 8,392, ಜೂನ್ 1ರಂದು 8,171, ಜೂನ್ 2ರಂದು 8,909, ಜೂನ್ 3ರಂದು 9,304, ಜೂನ್ 4ರಂದು 9,851, ಜೂನ್ 5ರಂದು 9,887, ಜೂನ್ 6ರಂದು 9,971, ಜೂ 7ರಂದು 9,983, ಜೂನ್ 8ರಂದು 9987, ಜೂನ್‌ 9ರಂದು 9,985, ಜೂನ್ 10ರಂದು 9,996, ಜೂನ್ 11ರಂದು 10,956, ಜೂನ್ 12ರಂದು‌ 11,458, ಜೂನ್ 13ರಂದು 11,929, ಜೂನ್ 14ರಂದು 11,502, ಜೂನ್ 15ರಂದು 10,667, ಜೂನ್ 16ರಂದು 10,974, ಜೂನ್ 17ರಂದು 12,881, ಜೂನ್‌ 18ರಂದು 13,586, ಜೂನ್ 19ರಂದು 14,516, ಜೂನ್ 20ರಂದು 15,413, ಜೂನ್ 21ರಂದು 14,821, ಜೂನ್ 22ರಂದು 14,933, ಜೂನ್ 23ರಂದು 15,968, ಜೂನ್ 24ರಂದು‌ 16,922, ಜೂನ್ 25ರಂದು 17,296, ಜೂನ್ 26ರಂದು 18,552, ಜೂನ್ 27ರಂದು 19,906 ಹಾಗೂ ಜೂನ್ 28ರಂದು 19,459 ಹೊಸ ಪ್ರಕರಣಗಳು ಕಂಡುಬಂದಿವೆ.
First published:June 29, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading