Coronavirus Updates: ದೇಶದಲ್ಲಿ 8 ಲಕ್ಷ ದಾಟಿದ ಕೊರೋನಾ ಪೀಡಿತರ ಸಂಖ್ಯೆ; ಕಳೆದ ನಾಲ್ಕು ದಿನದಲ್ಲಿ 1 ಲಕ್ಷ ಕೇಸ್​​ ಪತ್ತೆ

ಶುಕ್ರವಾರ 519 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 22 ಸಾವಿರ ದಾಟಿದ್ದು, 22,123ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೋನಾದಿಂದ ಗುಣ ಆದವರು 5,15,386 ಜನ ಮಾತ್ರ. ದೇಶದಲ್ಲಿ ಇನ್ನೂ 2,83,407 ಜನರಲ್ಲಿ ಕೊರೋನಾ ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.

news18-kannada
Updated:July 11, 2020, 11:45 AM IST
Coronavirus Updates: ದೇಶದಲ್ಲಿ 8 ಲಕ್ಷ ದಾಟಿದ ಕೊರೋನಾ ಪೀಡಿತರ ಸಂಖ್ಯೆ; ಕಳೆದ ನಾಲ್ಕು ದಿನದಲ್ಲಿ 1 ಲಕ್ಷ ಕೇಸ್​​ ಪತ್ತೆ
ಕೊರೋನಾ ವೈರಸ್ ಸ್ಯಾಂಪಲ್
  • Share this:
ನವದೆಹಲಿ(ಜು.11): ಕೊರೋನಾ ಸೋಂಕು ಹರಡುವಿಕೆ ವ್ಯಾಪಕವಾಗಿದ್ದರೂ ಲಾಕ್ಡೌನ್ ನಿಯಮಗಳನ್ನು ಸಡಿಲಿಸಿ ಅನ್​​ಲಾಕ್ 1 ಮತ್ತು 2 ಅನ್ನು ಜಾರಿ ಮಾಡಲಾಗಿದೆ. ಇದರ ಪರಿಣಾಮ ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಶರವೇಗದಲ್ಲಿ ಸಾಗುತ್ತಾ 8 ಲಕ್ಷ ದಾಟಿದೆ. ಅಲ್ಲದೆ ಕೇವಲ ನಾಲ್ಕು ದಿನಗಳಲ್ಲಿ 1 ಲಕ್ಷಕ್ಕೂ ‌ಹೆಚ್ಚು ಜನರು‌ ಸೋಂಕು ಪೀಡಿತರಾಗಿದ್ದಾರೆ.

ಭಾರತದಲ್ಲಿ ಜುಲೈ 1ರಿಂದ 19 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 2ರಿಂದ 20 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಜುಲೈ 3ರಿಂದ 22  ಸಾವಿರಕ್ಕೂ ಹೆಚ್ಚು ಪ್ರಕರಣಗಳು ಹಾಗೂ ಜುಲೈ 4ರಿಂದ 24 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದವು. ಈ ನಡುವೆ ಜುಲೈ 5ರಿಂದ ಮತ್ತೆ ಇಳಿಕೆಯಾಗಿ ಜುಲೈ 7ರವರೆಗೂ (ಮೂರು ದಿನ‌ ಮಾತ್ರ) 22 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಮಾತ್ರ ಕಂಡುಬಂದಿದ್ದವು.‌ ಜುಲೈ 8ರಿಂದ ಮತ್ತೆ 24 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು. ಜುಲೈ 9ರಿಂದ 26 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗತೊಡಗಿದ್ದವು. ಬಳಿಕ‌ ಜುಲೈ 10ರಂದು ಶುಕ್ರವಾರ 27,114 ಪ್ರಕರಣಗಳು ಪತ್ತೆಯಾಗಿದ್ದು, ದೇಶದ ಕೊರೋನಾ ಪೀಡಿತರ ಸಂಖ್ಯೆ 8,20,916ಕ್ಕೆ ಏರಿಕೆಯಾಗಿದೆ.

ಇದಲ್ಲದೆ ಶುಕ್ರವಾರ 519 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 22 ಸಾವಿರ ದಾಟಿದ್ದು, 22,123ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೋನಾದಿಂದ ಗುಣ ಆದವರು 5,15,386 ಜನ ಮಾತ್ರ. ದೇಶದಲ್ಲಿ ಇನ್ನೂ 2,83,407 ಜನರಲ್ಲಿ ಕೊರೋನಾ ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಕೋವಿಡ್​​-19 ಆರ್ಭಟ: ಸೋಮವಾರ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಜತೆ ಸಿಎಂ ಯಡಿಯೂರಪ್ಪ ಸಭೆ

ಕೇಂದ್ರ ಆರೋಗ್ಯ ಇಲಾಖೆ ಮಾಹಿತಿಗಳ ಪ್ರಕಾರ ಜೂನ್ 11ರಂದು 10,956, ಜೂನ್ 12ರಂದು 11,458, ಜೂನ್ 13ರಂದು 11,929, ಜೂನ್ 14ರಂದು 11,502, ಜೂನ್ 15ರಂದು 10,667, ಜೂನ್ 16ರಂದು 10,974, ಜೂನ್ 17ರಂದು 12,881, ಜೂನ್ 18ರಂದು 13,586, ಜೂನ್ 19ರಂದು 14,516, ಜೂನ್ 20ರಂದು 15,413, ಜೂನ್ 21ರಂದು 14,821, ಜೂನ್ 22ರಂದು 14,933, ಜೂನ್ 23ರಂದು 15,968, ಜೂನ್ 24ರಂದು 16,922, ಜೂನ್ 25ರಂದು 17,296, ಜೂನ್ 26ರಂದು 18,552, ಜೂನ್ 27ರಂದು 19,906, ಜೂನ್ 28ರಂದು 19,459, ಜೂನ್ 29ರಂದು 18,522, ಜೂನ್ 30ರಂದು 18,653, ಜುಲೈ 1ರಂದು 19,148, ಜುಲೈ 2ರಂದು 20,903, ಜುಲೈ 3 ರಂದು 22,771, ಜುಲೈ 4ರಂದು 24,850, ಜುಲೈ 5 ರಂದು 24,248, ಜುಲೈ 6ರಂದು 22,252, ಜುಲೈ 7ರಂದು 22,752, ಜುಲೈ 8ರಂದು 24,879, ಜುಲೈ 9ರಂದು 26,506 ಹಾಗೂ ಜುಲೈ 10ರಂದು 27,114 ಹೊಸ ಪ್ರಕರಣಗಳು ಪತ್ತೆಯಾಗಿವೆ.
Published by: Ganesh Nachikethu
First published: July 11, 2020, 11:38 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading