Sushma ChakreSushma Chakre
|
news18-kannada Updated:June 28, 2020, 10:56 AM IST
ಸಾಂದರ್ಭಿಕ ಚಿತ್ರ
ನವದೆಹಲಿ (ಜೂ. 28): ದೇಶದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಅಟ್ಟಹಾಸ ಹೆಚ್ಚಾಗುತ್ತಲೇ ಇದೆ. ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ಗುಜರಾತ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಸೋಂಕಿತರ ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. ಭಾರತದಲ್ಲಿ ನಿನ್ನೆ ಒಂದೇ ದಿನ ಸುಮಾರು 20,000 ಕೊರೋನಾ ಕೇಸ್ಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 5.28 ಲಕ್ಷಕ್ಕೆ ಏರಿಕೆಯಾಗಿದೆ. ಇದುವರೆಗೂ 3 ಲಕ್ಷಕ್ಕೂ ಹೆಚ್ಚು ರೋಗಿಗಳು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಒಂದೇ ದಿನದಲ್ಲಿ ದಾಖಲಾದ ಅತಿಹೆಚ್ಚು ಕೊರೋನಾ ಪ್ರಕರಣ ಇದಾಗಿದೆ. ಶನಿವಾರ ಒಂದೇ ದಿನ 19,906 ಹೊಸ ಕೊರೋನಾ ಕೇಸ್ಗಳು ಪತ್ತೆಯಾಗಿವೆ. ಆರಂಭದಲ್ಲಿ ಕೊರೋನಾ ಸೋಂಕಿತ ದೇಶಗಳ ಪಟ್ಟಿಯಲ್ಲಿ ಟಾಪ್ 10ರಲ್ಲೇ ಇರದಿದ್ದ ಭಾರತ ಈಗ 4ನೇ ಸ್ಥಾನಕ್ಕೆ ಬಂದು ತಲುಪಿದೆ. ಅಮೆರಿಕ, ಬ್ರೆಜಿಲ್, ರಷ್ಯಾ ಬಳಿಕ ನಂತರದ ಸ್ಥಾನದಲ್ಲಿ ಭಾರತ ಇದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 410 ಕೊರೋನಾ ಸೋಂಕಿತರ ಸಾವಿನ ಪ್ರಕರಣಗಳು ದಾಖಲಾಗಿವೆ.
ಇದನ್ನೂ ಓದಿ: ದೆಹಲಿಯಲ್ಲಿ 2,948 ಕೊರೊನಾ ಪ್ರಕರಣಗಳು ಪತ್ತೆ; 80 ಸಾವಿರ ಗಡಿ ದಾಟಿದ ಒಟ್ಟು ಸಂಖ್ಯೆ
ಭಾರತದಲ್ಲಿ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 16,096ಕ್ಕೆ ಏರಿಕೆಯಾಗಿದೆ. ಕರ್ನಾಟಕದಲ್ಲಿಯೂ ನಿನ್ನೆ ಒಂದೇ ದಿನ 918 ಕೊರೋನಾ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಲಾಕ್ಡೌನ್ ನಿಯಮವನ್ನು ಬಿಗಿಗೊಳಿಸಲಾಗಿದೆ. ಮಹಾರಾಷ್ಟ್ರದಲ್ಲಿ 27,134 ಸಕ್ರಿಯ ಕೊರೋನಾ ಕೇಸ್ಗಳಿವೆ. ಅಮೆರಿಕದಲ್ಲಿ 25 ಲಕ್ಷ ಕೊರೋನಾ ಕೇಸ್, ಬ್ರೆಜಿಲ್ನಲ್ಲಿ 13 ಲಕ್ಷ, ರಷ್ಯಾದಲ್ಲಿ 6.27 ಲಕ್ಷ ಕೊರೋನಾ ಸೋಂಕಿತ ಪ್ರಕರಣಗಳಿವೆ. ನಾಲ್ಕನೇ ಸ್ಥಾನದಲ್ಲಿ ಭಾರತವಿದೆ.
First published:
June 28, 2020, 10:56 AM IST