HOME » NEWS » Coronavirus-latest-news » INDIA REPORTS OVER 7K BLACK FUNGUS CASES AND KARNATAKA GOVT ANNOUNCES FREE TREATMENT FOR BLACK FUNGUS KVD

Black Fungus: ದೇಶಾದ್ಯಂತ 7,250 ಬ್ಲ್ಯಾಕ್ ಫಂಗಸ್ ಕೇಸ್ ಪತ್ತೆ: ರಾಜ್ಯದಲ್ಲಿ ಉಚಿತ ಚಿಕಿತ್ಸೆ ಘೋಷಣೆ

ರಾಜ್ಯದಲ್ಲೂ ದಿನೇ ದಿನೇ ಬ್ಲ್ಯಾಕ್​ ಫಂಗಸ್​ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬ್ಲ್ಯಾಕ್​ ಫಂಗಸ್​ ರೋಗಿಗಳಿಗೆ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಸಿಎಂ ಬಿ.ಎಸ್​.ಯಡಿಯೂರಪ್ಪ ಘೋಷಿಸಿದ್ದಾರೆ.

Kavya V | news18-kannada
Updated:May 21, 2021, 8:11 PM IST
Black Fungus: ದೇಶಾದ್ಯಂತ 7,250 ಬ್ಲ್ಯಾಕ್ ಫಂಗಸ್ ಕೇಸ್ ಪತ್ತೆ: ರಾಜ್ಯದಲ್ಲಿ ಉಚಿತ ಚಿಕಿತ್ಸೆ ಘೋಷಣೆ
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು: ಕೊರೋನಾ ಸೋಂಕಿನಿಂದ ಗುಣಮುಖರಾದವರಲ್ಲಿ ಬ್ಲ್ಯಾಕ್​​ ಫಂಗಸ್​​ ಕಾಯಿಲೆ ವ್ಯಾಪಕವಾಗಿ ಕಾಣಿಸಿಕೊಳ್ಳುತ್ತಿದೆ. ಕೊರೋನಾ ಶುರುವಾದಗಿನಿಂದ ದೇಶಾದ್ಯಂತ 7 ಸಾವಿರಕ್ಕೂ ಹೆಚ್ಚು ಬ್ಲ್ಯಾಕ್​​ ಫಂಗಸ್​ ಪ್ರಕರಣಗಳು ಪತ್ತೆಯಾಗಿವೆ. ಇದರಲ್ಲಿ 200ಕ್ಕೂ ಹೆಚ್ಚು ಮಂದಿ ಕಪ್ಪು ಶಿಲೀಂದ್ರಿ ಕಾಯಿಲೆಗೆ ಬಲಿಯಾಗಿದ್ದಾರೆ ಎನ್ನಲಾಗುತ್ತಿದೆ. ಮಹಾರಾಷ್ಟ್ರ, ಗುಜರಾತ್​ ಹಾಗೂ ಮಧ್ಯಪ್ರದೇಶದಲ್ಲಿ ಹೆಚ್ಚಿನ ಪ್ರಕರಣಗಳು ಪತ್ತೆಯಾಗಿವೆ. ಈಗಾಗಲೇ ಕೇಂದ್ರ ಸರ್ಕಾರ ಬ್ಲ್ಯಾಕ್​ ಫಂಗಸ್​ ಕಾಯಿಲೆಯಲ್ಲಿ ಸಾಂಕ್ರಾಮಿಕ ಕಾಯಿಲೆ ಕಾಯ್ದೆಯಡಿ ಸೇರಿಸುವಂತೆ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ. ಜೊತೆ ಇದು ಸರ್ಕಾರದ ಗಮನಕ್ಕೆ ತರಬೇಕಾದ ಕಾಯಿಲೆ ಎಂದೂ ಆದೇಶಿಸಲಾಗಿದೆ.

ರಾಜ್ಯದಲ್ಲೂ ದಿನೇ ದಿನೇ ಬ್ಲ್ಯಾಕ್​ ಫಂಗಸ್​ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬ್ಲ್ಯಾಕ್​ ಫಂಗಸ್​ ರೋಗಿಗಳಿಗೆ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಸಿಎಂ ಬಿ.ಎಸ್​.ಯಡಿಯೂರಪ್ಪ ಘೋಷಿಸಿದ್ದಾರೆ. ಸೋಂಕಿನಿಂದ ಗುಣಮುಖರಾಗಿ ಅನಿಯಂತ್ರಿಕ ಮಧುಮೇಹ ಇರುವವರಲ್ಲಿ, ರೋಗನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ, ಸ್ಟಿರಾಯಿಡ್ಸ್​​​ ಹೆಚ್ಚಿನ ಬಳಕೆ ಮಾಡಿದವರಲ್ಲಿ ಬ್ಲ್ಯಾಕ್​​ ಫಂಗಸ್​ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ.

ಯಾರಲ್ಲಿ ಬ್ಲ್ಯಾಕ್​ ಫಂಗಸ್​ ಕಾಣಿಸಿಕೊಳ್ಳಬಹುದು?

  • ಅನಿಯಂತ್ರಿತ ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರು

  • ಅತಿ ಹೆಚ್ಚು ಸ್ಟಿರಾಯಿಡ್ಸ್​ ಬಳಸುವವರರು

  • ಕ್ಯಾನ್ಸರ್​ ಚಿಕಿತ್ಸೆ ಪಡೆಯುತ್ತಿರುವವರು
  • ದೀರ್ಘ ಕಾಲದ ಆರೋಗ್ಯ ಸಮಸ್ಯೆ ಇರುವವರು

  • ಅತಿಯಾದ ಶೀತ, ಥಂಡಿ ಸಮಸ್ಯೆ ಎದುರಿಸುತ್ತಿರುವವರು

  • ಉಸಿರಾಟದ ಸಮಸ್ಯೆಯಿಂದ ಮೆಡಿಕಲ್​ ಆಕ್ಸಿಜನ್​ ಸಹಾಯ ಪಡೆದವರು

  • ರೋಗನಿರೋಧಕ ಶಕ್ತಿ ಶಮನ ಮಾಡುವ ಔಷಧ ಪಡೆದವರು


ಮೇಲಿನ ಲಕ್ಷಣಗಳಿರುವವರಿಗೆ ಬ್ಲ್ಯಾಕ್​ ಫಂಗಸ್​ ಕಾಣಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಇವರು ಅತ್ಯಂತ ಎಚ್ಚರಿಕೆಯಿಂದ ಇರಬೇಕಾಗುತ್ತದೆ.

ಬ್ಲ್ಯಾಕ್​ ಫಂಗಸ್​ ಬಂದಿದೆಯಾ ಎಂದು ಪರೀಕ್ಷಿಸುವುದು ಹೇಗೆ?

  • ಮೂಗಿನಲ್ಲಿ ಅಸಹಜ ಕಪ್ಪು ವಿಸರ್ಜನೆ, ರಕ್ತ ಬರುವುದು, ಮೂಗಿನಲ್ಲಿ ಕಿರಿಕಿರಿ

  • ತಲೆನೋವು, ಕಣ್ಣಿನ ನೋವು, ಕಣ್ಣಿನ ಸುತ್ತ ಊತ, ಕಣ್ಣು ಕೆಂಪಾಗುವುದು

  • ದೃಷ್ಟಿ ಮಂಜಾಗುವುದು, ರೆಪ್ಪೆ ತೆರೆಯಲು/ಮುಚ್ಚಲು ಕಷ್ಟವಾಗುವುದು, ಕಣ್ಣು ಕಾಣದಿರುವುದು

  • ಮುಖ ಮರಗಟ್ಟುವಿಕೆ, ಜುಮ್​​ ಎನಿಸುವ ಅನುಭವ

  • ಆಹಾರ ಸೇವಿಸುವ ವೇಳೆ ನೋವು, ಬಾಯಿ ತೆರೆಯಲು ಕಷ್ಟವಾಗುವುದು

  • ಮುಖದಲ್ಲಿ ಊತ, ಮುಖ ಕಪ್ಪುಗಟ್ಟುವಿಕೆ , ಮುಖದಲ್ಲಿ ನೋವು

  • ಹಲ್ಲು ಉದುರುವುದು, ಬಾಯಿಯಲ್ಲಿ ಕಪ್ಪು ಬಣ್ಣ, ಊತ ಕಾಣಿಸಿಕೊಳ್ಳುವುದು


ಮೇಲಿನ ಈ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ವೈದ್ಯರನ್ನು ಕಾಣಬೇಕು. ಹೈ ಶುಗರ್​ ಇರುವವರು, ಅನಾರೋಗ್ಯ ಪೀಡಿತರು ಈ ಲಕ್ಷಣಗಳ ಬಗ್ಗೆ ಗಮನ ಹರಿಸಬೇಕು. ಸ್ವಯಂ ನಿಗಾ ವಹಿಸಬೇಕು. ಸಣ್ಣ ನಿರ್ಲಕ್ಷ್ಯವೂ ಮುಂದೆ ದೊಡ್ಡ ಅಪಾಯ ತಂದೊಡ್ಡಬಹುದು.

ಇದನ್ನೂ ಓದಿ: Karnataka Lockdown: ಕರ್ನಾಟಕದಲ್ಲಿ ಲಾಕ್​​ಡೌನ್​ ವಿಸ್ತರಣೆ; ಜೂ.7ರವರೆಗೆ ಟಫ್ ಲಾಕ್ ಘೋಷಿಸಿದ ಸಿಎಂ



ಬ್ಲ್ಯಾಕ್​ ಫಂಗಸ್​ ಕಾಣಿಸಿಕೊಂಡಾಗ ಏನು ಮಾಡಬೇಕು?

  • ಬ್ಲ್ಯಾಕ್​ ಫಂಗಸ್​​ ಲಕ್ಷಣಗಳು ಕಂಡು ಬಂದೊಡನೆ ENT ವೈದ್ಯರನ್ನು ಸಂಪರ್ಕಿಸಿ

  • ENT ವೈದ್ಯರ ಬಳಿ ಪರೀಕ್ಷಿಸಿ, ಚಿಕಿತ್ಸೆ ಪಡೆಯಬೇಕು

  • ರಕ್ತದಲ್ಲಿ ಮಧುಮೇಹ ಪ್ರಮಾಣವನ್ನು ಸದಾ ಪರೀಕ್ಷಿಸುತ್ತಿರಬೇಕು, ನಿಯಂತ್ರಣದಲ್ಲಿರಿಸಿಕೊಳ್ಳಲು ಪ್ರಯತ್ನಿಸಬೇಕು

  • ಇತರೆ ಆರೋಗ್ಯ ಸಮಸ್ಯೆಗಳಿದ್ದರೆ ಕೂಡಲೇ ಚಿಕಿತ್ಸೆ ಪಡೆಯಬೇಕು, ನಿರ್ಲಕ್ಷ್ಯ ಮಾಡಬಾರದು

  • ವೈದ್ಯರನ್ನು ಕೇಳದೆ ಸ್ಟಿರಾಯಿಡ್​​, ಆ್ಯಂಟಿ ವೈರಲ್​ ಔಷಧಗಳನ್ನು ತೆಗೆದುಕೊಳ್ಳಬಾರದು

  • ವೈದ್ಯರ ಸಲಹೆ ಮೇರೆಗೆ ಸಿಟಿ ಸ್ಕ್ಯಾನ್​, ಎಂಆರ್​ಐ ಮಾಡಿಸಬೇಕು.


ಅನಗತ್ಯವಾಗಿ ವೈದ್ಯರನ್ನು ಕೇಳದೆ ಸ್ಟಿರಾಯಿಡ್​​ಯುಕ್ತ ಔಷಧಗಳನ್ನು ತೆಗೆದುಕೊಳ್ಳುವುದು ಪ್ರಾಣಕ್ಕೆ ಕುತ್ತು ತರಬಹುದು. ಅತಿಯಾದ ಹೆದರಿಕೆಯಿಂದ ಅಗತ್ಯವಿಲ್ಲದಿದ್ದರೂ ಸಿಟಿ ಸ್ಕ್ಯಾನ್​, ಎಂಆರ್​ಐ ಮಾಡಿಸಬಾರದು. ಭಯಕ್ಕಿಂತ ಹೆಚ್ಚಾಗಿ ಎಲ್ಲರೂ ಎಚ್ಚರಿಕೆಯಿಂದ ಇದ್ದರೆ ಬ್ಲ್ಯಾಕ್​ ಫಂಗಸ್​ನಿಂದ ಬಚಾವ್​ ಆಗಬಹುದು.
Published by: Kavya V
First published: May 21, 2021, 8:11 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories