HOME » NEWS » Coronavirus-latest-news » INDIAS CORONAVIRUS CASES CROSS 81 LAKH 48268 NEW CASES IN A DAY MAK

CoronaVirus Update: ಕೊರೋನಾ ಸಾವಿನ ಸಂಖ್ಯೆಯಲ್ಲಿ 2ನೇ ಸ್ಥಾನಕ್ಕೇರಿದ ಭಾರತ; 81 ಲಕ್ಷದ ಗಡಿ ದಾಟಿದ ಸಕ್ರೀಯ ಸೋಂಕಿತರ ಸಂಖ್ಯೆ

ದೇಶದಲ್ಲಿ ಕೊರೋನಾ ಸೋಂಕಿನಿಂದ ಅತಿಹೆಚ್ಚು ಹಾನಿಗೆ ಒಳಗಾದ ಮೊದಲ ರಾಜ್ಯ ಮಹಾರಾಷ್ಟ್ರ. ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 6190 ಹೊಸ ಪ್ರಕರಣಗಳು ದಾಖಲಾಗಿವೆ. ಅಲ್ಲದೆ, 127 ಜನ ಈ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.

news18-kannada
Updated:October 31, 2020, 10:25 AM IST
CoronaVirus Update: ಕೊರೋನಾ ಸಾವಿನ ಸಂಖ್ಯೆಯಲ್ಲಿ 2ನೇ ಸ್ಥಾನಕ್ಕೇರಿದ ಭಾರತ; 81 ಲಕ್ಷದ ಗಡಿ ದಾಟಿದ ಸಕ್ರೀಯ ಸೋಂಕಿತರ ಸಂಖ್ಯೆ
ಸಾಂದರ್ಭಿಕ ಚಿತ್ರ.
  • Share this:
ನವ ದೆಹಲಿ (ಅಕ್ಟೋಬರ್​​ 31); ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 48,268 ಕೊರೋನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ ಇದೀಗ 81,37,119 ಕ್ಕೆ ಏರಿಕೆಯಾಗಿದೆ. ಅಲ್ಲದೆ, 551 ಜನ ಸೋಂಕಿನಿಂದಾಗಿ ಮೃತಪಟ್ಟಿದ್ದು, ಸಾವಿನ ಸಂಖ್ಯೆಯೂ 1,21,641 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ. ಈ ಮೂಲಕ ಭಾರತ ಕೊರೋನಾ ಸೋಂಕಿನಿಂದ ಅತಿಹೆಚ್ಚು ಸಾವುನೋವುಗಳನ್ನು ಕಂಡ ಎರಡನೇ ರಾಷ್ಟ್ರ ಎಂಬ ಕುಖ್ಯಾತಿಗೆ ಒಳಗಾಗಿದೆ. ಭಾರತದಲ್ಲಿ ಕೊರೋನಾ ರಾಷ್ಟ್ರೀಯ ಚೇತರಿಕೆ ಪ್ರಮಾಣವು ಶೇ91 ನ್ನು ದಾಟಿದೆ. ಆದರೆ, ಸಾವಿನ ಪ್ರಮಾಣ ಶೇ. 1.49 ರಷ್ಟಿದೆ.

ದೇಶದಲ್ಲಿ ಕೊರೋನಾ ಸೋಂಕಿನಿಂದ ಅತಿಹೆಚ್ಚು ಹಾನಿಗೆ ಒಳಗಾದ ಮೊದಲ ರಾಜ್ಯ ಮಹಾರಾಷ್ಟ್ರ. ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 6190 ಹೊಸ ಪ್ರಕರಣಗಳು ದಾಖಲಾಗಿವೆ. ಅಲ್ಲದೆ, 127 ಜನ ಈ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ : ಸರ್ದಾರ್​ ವಲ್ಲಭಾಯಿ ಪಟೇಲರ 145ನೇ ಹುಟ್ಟುಹಬ್ಬ; ಏಕತಾ ಪ್ರತಿಮೆಯ ಬಳಿ ತೆರಳಿ ಗೌರವ ಅರ್ಪಿಸಿದ ಪ್ರಧಾನಿ ಮೋದಿ

ಮಹಾರಾಷ್ಟ್ರದಲ್ಲಿ ಒಟ್ಟು 16,72,858 ಕೊರೋನಾ ಪ್ರಕರಣಗಳು ದಾಖಲಾಗಿದ್ದು, 1,25,418 ಸಕ್ರೀಯ ಪ್ರಕರಣಗಳು ಇವೆ. ಕಳೆದ 24 ಗಂಟೆಯಲ್ಲಿ 8,241 ಜನ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಗುಣಮುಖರಾಗಿ ಮನೆಗೆ ತೆರಳಿದವರು ಸಂಖ್ಯೆಯೂ 15,03,050 ಕ್ಕೆ ತಲುಪಿದೆ ಎಂದು ರಾಜ್ಯ ಸಾರ್ವಜನಿಕ ಆರೋಗ್ಯ ಇಲಾಖೆ ಶುಕ್ರವಾರ ತಿಳಿಸಿದೆ.

ಇದಲ್ಲದೆ, ಅಧಿಕ ಸಂಖ್ಯೆ ಕೊರೋನಾ ಪ್ರಕರಣಗಳಿಂದ ಸಾಕಷ್ಟು ಚಿಂತೆಗೆ ಒಳಗಾಗಿದ್ದ ದೆಹಲಿ, ಉತ್ತರಪ್ರದೇಶ, ಬಿಹಾರ, ಕರ್ನಾಟಕ, ತಮಿಳುನಾಡಿನಲ್ಲಿ ಇದೀಗ ಸೋಂಕು ಹರಡುವ ಪ್ರಮಾಣ ಕಡಿಮೆಯಾಗಿದೆ. ಕಳೆದ ಸೆಪ್ಟೆಂಬರ್ನಿಂದ ಸೋಂಕಿನ ಹರಡುವ ಪ್ರಮಾಣ ಸ್ಥಿಮಿತಕ್ಕೆ ಬಂದಿದೆ. ಆದರೆ, ಮುಂದಿನ ದಿನಗಳಲ್ಲಿ ಸಾಲು ಸಾಲು ಹಬ್ಬಗಳಿದ್ದು, ಮತ್ತೆ ಸೋಂಕಿನ ಪ್ರಮಾಣ ಅಧಿಕವಾಗುವ ಸಾಧ್ಯತೆ ಇದೆ ಎಂದು ತಜ್ಞರು ಸರ್ಕಾರವನ್ನು ಎಚ್ಚರಿಸುತ್ತಿದ್ದಾರೆ.
Published by: MAshok Kumar
First published: October 31, 2020, 10:25 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories