ಈಗ ದಿನವೊಂದರಲ್ಲಿ 11 ಸಾವಿರಕ್ಕೂ ಹೆಚ್ಚು ಕೇಸ್ ಗಳು, 3 ಲಕ್ಷದ ಗಡಿ ದಾಟಿದ ಕೊರೋನಾ ಪೀಡಿತರ ಸಂಖ್ಯೆ

ಜೂನ್ 4ರಂದು 9,851, ಜೂನ್ 5ರಂದು 9,887, ಜೂನ್ 6ರಂದು 9,971, ಜೂ 7ರಂದು 9,983, ಜೂನ್ 8ರಂದು 9987, ಜೂನ್‌ 9ರಂದು 9,985, ಜೂನ್ 10ರಂದು 9,996, ಜೂನ್ 11ರಂದು 10,956 ಹಾಗೂ ಜೂನ್ 12ರಂದು‌ 11,458. ಹೊಸ ಪ್ರಕರಣಗಳು ಕಂಡುಬಂದಿವೆ. 

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ನವದೆಹಲಿ: ಕೊರೋನಾ ಸೋಂಕು ಹರಡುವಿಕೆ ಬಹಳ‌ ಕಡಿಮೆ ಇದ್ದಾಗ ಲಾಕ್ಡೌನ್ ಜಾರಿ ಮಾಡಿ, ಸೋಂಕು ಹರಡುವಿಕೆ ಹೆಚ್ಚಾದಾಗ ನಾಮಕಾವಸ್ತೆಗೆ ಮಾತ್ರ ಲಾಕ್ಡೌನ್ ಜಾರಿಗೊಳಿಸಿದ ಪರಿಣಾಮ ಭಾರತದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಶರವೇಗದಲ್ಲಿ ಸಾಗುತ್ತಿದೆ. ಮೊನ್ನೆಯಷ್ಟೇ ಅತಿಹೆಚ್ಚು ಕೊರೋನಾ ಇರುವ ದೇಶಗಳ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ್ದ ಭಾರತದ ಕೊರೋನಾ ಪೀಡಿತರ ಸಂಖ್ಯೆ ಈಗ 3 ಲಕ್ಷದ ಗಡಿ ದಾಟಿದೆ.

ಭಾರತದಲ್ಲಿ ಮೇ 30ರಿಂದ ಪ್ರತಿನಿತ್ಯ 8 ಸಾವಿರಕ್ಕೂ ಹೆಚ್ಚು ಕೊರೋನಾ ಪ್ರಕರಣಗಳು, ಜೂನ್‌ 3ರಿಂದ ದಿನವೊಂದರಲ್ಲಿ 9 ಸಾವಿರಕ್ಕೂ ಅಧಿಕ ಪ್ರಕರಣಗಳು, ಜೂನ್ 11ರಿಂದ 10 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿದ್ದವು. ಜೂನ್ 12ತಾರೀಖು, ಅಂದರೆ ನಿನ್ನೆ 11 ಸಾವಿರಕ್ಕೂ ಹೆಚ್ಚು‌ ಸೋಂಕು ಪೀಡಿತರು ಕಾಣಿಸಿಕೊಂಡಿದ್ದಾರೆ. ಶುಕ್ರವಾರ 11,458 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ದೇಶದಲ್ಲಿ ಕೊರೋನಾ ಪೀಡಿತರ ಸಂಖ್ಯೆ 3,08,993ಕ್ಕೆ ಏರಿಕೆಯಾಗಿದೆ.

ಇದಲ್ಲದೆ ಶುಕ್ರವಾರ ಒಂದೇ ದಿನ ಕೊರೋನಾದಿಂದ 386 ಜನ ಮೃತಪಟ್ಟಿದ್ದು, ದೇಶದಲ್ಲಿ ಕೊರೋನಾದಿಂದ ಸತ್ತವರ ಸಂಖ್ಯೆ 8,884ಕ್ಕೆ ಏರಿಕೆಯಾಗಿದೆ. ಕೊರೋನಾದಿಂದ ಈವರೆಗೆ 1,54,330 ಜನ ಮಾತ್ರ  ಗುಣಮುಖ ಆಗಿದ್ದಾರೆ. 1,45,779 ಪ್ರಕರಣಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.

ಇದನ್ನು ಓದಿ: ದಿಲ್ಲಿ ಪೋಸ್ಟ್ | ಮುಂದಿನ ವಾರ ಸಿಎಂ ಯಡಿಯೂರಪ್ಪಗೆ ಮತ್ತೊಂದು ಶಾಕ್; ಕೈ ಕೊಟ್ಟವರ ಜೊತೆಗೇ ಡಿಕೆಶಿ ಕುಚುಕು!

ಕೇಂದ್ರ ಆರೋಗ್ಯ ಇಲಾಖೆ ಮಾಹಿತಿಗಳ ಪ್ರಕಾರ ಮೇ 10ರಿಂದ  ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಪ್ರತಿನಿತ್ಯ ನಾಲ್ಕು ಸಾವಿರಕ್ಕಿಂತ ಹೆಚ್ಚಾಗುತ್ತಲೇ ಇದೆ.‌ ಮೇ 10ರಂದು 4,213 ಜನರಿಗೆ, ಮೇ 11ರಂದು 3,064 ಮಂದಿಗೆ, ಮೇ 12 ರಂದು 3,525 ಜನರಿಗೆ, ಮೇ 13ರಂದು 3,722 ಮಂದಿಗೆ ಹಾಗೂ ಮೇ 14ರಂದು 3,967 ಜನರಿಗೆ, ಮೇ 15ರಂದು 3,970 ಮಂದಿಗೆ, ಮೇ 16ರಂದು 4,987 ಜನರಿಗೆ, ಮೇ 17ರಂದು 5,242, ಮೇ 18ರಂದು 4,970, ಮೇ 19ರಂದು 5,611, ಮೇ 20ರಂದು 5,609, ಮೇ 21ರಂದು 6,088, ಮೇ 22ರಂದು 6,654, ಮೇ 23ರಂದು 6,767, ಮೇ 24ರಂದು 6,977, ಮೇ 25ರಂದು 6,535, ಮೇ 26ರಂದು 6,387, ಮೇ 27ರಂದು 6,566, ಮೇ 28ರಂದು 7,466, ಮೇ 29ರಂದು 7,964, ಮೇ 30ರಂದು 8,380, ಮೇ 31ರಂದು 8,392, ಜೂನ್ 1ರಂದು 8,171, ಜೂನ್ 2ರಂದು 8,909, ಜೂನ್ 3ರಂದು 9,304, ಜೂನ್ 4ರಂದು 9,851, ಜೂನ್ 5ರಂದು 9,887, ಜೂನ್ 6ರಂದು 9,971, ಜೂ 7ರಂದು 9,983, ಜೂನ್ 8ರಂದು 9987, ಜೂನ್‌ 9ರಂದು 9,985, ಜೂನ್ 10ರಂದು 9,996, ಜೂನ್ 11ರಂದು 10,956 ಹಾಗೂ ಜೂನ್ 12ರಂದು‌ 11,458. ಹೊಸ ಪ್ರಕರಣಗಳು ಕಂಡುಬಂದಿವೆ.
First published: