ದೇಶದಲ್ಲಿ 24 ಗಂಟೆಗಳಲ್ಲಿ 3,900 ಮಂದಿಗೆ ಕೊರೋನಾ; ಸೋಂಕಿತರ ಸಂಖ್ಯೆ 46,711ಕ್ಕೆ ಏರಿಕೆ

ದೇಶದ ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕೇವಲ ಮಹಾರಾಷ್ಟ್ರವೊಂದರಲ್ಲೇ 14,541 ಮಂದಿಗೆ ಕೊರೋನಾ ಬಂದಿದೆ. ಜತೆಗೆ 583 ಮಂದಿ ಬಲಿಯಾಗಿದ್ದಾರೆ. ಇನ್ನು, ಗುಜರಾತ್​​​ 5,804 ಕೋವಿಡ್​​-19 ಪಾಸಿಟಿವ್​​ ಪ್ರಕರಣಗಳ ಮೂಲಕ ಎರಡನೇ ಸ್ಥಾನದಲ್ಲಿದೆ. ರಾಜಸ್ಥಾನ 3,061, ತಮಿಳುನಾಡು 3,550, ದೆಹಲಿ 4,898 ಹೀಗೆ ಕೊರೋನಾ ಪ್ರಕರಣಗಳು ದಾಖಲಾಗಿವೆ.

news18-kannada
Updated:May 5, 2020, 7:58 PM IST
ದೇಶದಲ್ಲಿ 24 ಗಂಟೆಗಳಲ್ಲಿ 3,900 ಮಂದಿಗೆ ಕೊರೋನಾ; ಸೋಂಕಿತರ ಸಂಖ್ಯೆ 46,711ಕ್ಕೆ ಏರಿಕೆ
ಸಾಂದರ್ಭಿಕ ಚಿತ್ರ
  • Share this:
ನವದೆಹಲಿ(ಮೇ.05):ಚೀನಾದಲ್ಲಿ ಕಾಣಿಸಿಕೊಂಡ ಕೊರೋನಾ ವೈರಸ್ ಆರ್ಭಟ ದೇಶದಲ್ಲಿ ಹೆಚ್ಚಾಗುತ್ತಲೇ ಇದೆ. ಇಂದು ಒಂದೇ ದಿನ ಅಂದರೆ ಕೇವಲ 24 ಗಂಟೆಗಳಲ್ಲಿ 3,900 ಮಂದಿಯಲ್ಲಿ ಹೊಸದಾಗಿ ವೈರಸ್ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 46,711ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರದ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 19 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಇದುವರೆಗೂ ಈ ಮಾರಕ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,583ಕ್ಕೆ ಏರಿಕೆಯಾಗಿದೆ. ಇನ್ನು 46,711 ಪೈಕಿ 13,160 ಜನ ಗುಣಮುಖರಾಗಿದ್ದಾರೆ. ಹಾಗಾಗಿ ಸದ್ಯ ದೇಶದಲ್ಲಿ 31,967 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.

ದೇಶದ ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕೇವಲ ಮಹಾರಾಷ್ಟ್ರವೊಂದರಲ್ಲೇ 14,541 ಮಂದಿಗೆ ಕೊರೋನಾ ಬಂದಿದೆ. ಜತೆಗೆ 583 ಮಂದಿ ಬಲಿಯಾಗಿದ್ದಾರೆ. ಇನ್ನು, ಗುಜರಾತ್​​​ 5,804 ಕೋವಿಡ್​​-19 ಪಾಸಿಟಿವ್​​ ಪ್ರಕರಣಗಳ ಮೂಲಕ ಎರಡನೇ ಸ್ಥಾನದಲ್ಲಿದೆ. ರಾಜಸ್ಥಾನ 3,061, ತಮಿಳುನಾಡು 3,550, ದೆಹಲಿ 4,898 ಹೀಗೆ ಕೊರೋನಾ ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಕೊರೋನಾ: ಇವತ್ತು 2 ಸಾವು; 22 ಹೊಸ ಪ್ರಕರಣ; ಒಟ್ಟು ಸಂಖ್ಯೆ 673ಕ್ಕೇರಿಕೆ

ಇನ್ನು, ವಿಜಯಪುರ ಮತ್ತು ದಾವಣಗೆರೆಯಲ್ಲಿ ಇಬ್ಬರು ಕೋವಿಡ್ ರೋಗಿಗಳು ಮೃತಪಟ್ಟಿದ್ದಾರೆ. ಇದರೊಂದಿಗೆ ಕೊರೋನಾದಿಂದ ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ 29ಕ್ಕೆ ಏರಿದೆ. ನಿನ್ನೆ ಸಂಜೆ 5ರಿಂದ ಇವತ್ತು ಸಂಜೆಯವರೆಗೆ 22 ಹೊಸ ಸೋಂಕು ಪ್ರಕರಣ ಬೆಳಕಿಗೆ ಬಂದಿದೆ. ಇದರೊಂದಿಗೆ ಒಟ್ಟಾರೆ ಸೋಂಕು ಪ್ರಕರಣ ಸಂಖ್ಯೆ 673ಕ್ಕೇರಿದೆ. ಕರ್ನಾಟಕ ಆರೋಗ್ಯ ಇಲಾಖೆ ಇಂದು ಸಂಜೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್​ನಲ್ಲಿ ಈ ಮಾಹಿತಿ ಇದೆ.
First published: May 5, 2020, 7:58 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading