ಬೆಂಗಳೂರು: ಕೊರೋನಾ ಹೆಮ್ಮಾರಿ ದಿನದಿಂದ ದಿನಕ್ಕೆ ತನ್ನ ಕಬಂಧ ಬಾಹುಗಳನ್ನು ವಿಸ್ತರಿಸುತ್ತಲೇ ಇದ್ದು, ಸಾವಿನ ಸಂಖ್ಯೆ ಹೆಚ್ಚುತ್ತಲೇ ಇದೆ. ಇಂದು ಕಲಬುರಗಿಯ 55 ವರ್ಷದ ವ್ಯಕ್ತಿಯೊಬ್ಬರು ಮಾರಕ ಸೋಂಕಿಗೆ ಬಲಿಯಾಗುವ ಮೂಲಕ ರಾಜ್ಯದಲ್ಲಿ ಮೃತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ರಾಜ್ಯದಲ್ಲಿ ಕೋವಿಡ್ 19 ಸೋಂಕಿತ ಮತ್ತೊಬ್ಬರು ಸಾವನ್ನಪ್ಪಿದ್ದಾರೆ. 57ವರ್ಷದ ಅಳಂದದ ನಿವಾಸಿಯಾಗಿದ್ದ ಇವರಲ್ಲಿ ಏಪ್ರಿಲ್ 21ರಂದು ಕೊರೋನಾ ಪಾಸಿಟಿವ್ ಬಂದಿತ್ತು. ಉಸಿರಾಟದ ತೊಂದರೆಯಿಂದ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ತೀವ್ರ ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದರು. ಇದರೊಂದಿಗೆ ಕಲ್ಬುರ್ಗಿ ಜಿಲ್ಲೆಯಲ್ಲಿ ಒಟ್ಟು ಐದು ಮಂದಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಸೋಮವಾರ ಸಂಜೆಯ ವೇಳೆಗೆ ಇಂದು ರಾಜ್ಯದಲ್ಲಿ 9 ಪ್ರಕರಣಗಳು ದಾಖಲಾಗಿದ್ದು, ಒಂದೇ ದಿನ ಇಬ್ಬರು ಕೊರೋನಾ ರೋಗಿಗಳು ಮೃತಪಟ್ಟಿದ್ದಾರೆ (ಒಬ್ಬರು ಆತ್ಮಹತ್ಯೆ ಮಾಡಿಕೊಂಡು) ರಾಜ್ಯದಲ್ಲಿ ಒಟ್ಟು 512 ಕೊರೋನಾ ಪ್ರಕರಣಗಳು ದಾಖಲಾಗಿದ್ದು, ಈವರೆಗೂ 20 ಮಂದಿ ಮೃತಪಟ್ಟಿದ್ದಾರೆ. ಇಂದು 11 ಜನ ಮಾರಕ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇದನ್ನು ಓದಿ: ರಾಜ್ಯದ ಎಲ್ಲಾ ಇಲಾಖೆ, ನಿಗಮ, ಮಂಡಳಿ ಸಿಬ್ಬಂದಿಗೆ ಕೆಲಸಕ್ಕೆ ಹಾಜಾರಾಗುವಂತೆ ಸರ್ಕಾರ ಆದೇಶ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ