21 ದಿನ ಲಾಕ್​ಡೌನ್ ಹಿನ್ನೆಲೆ; ಏ. 14ರವರೆಗೂ ಅಂತಾರಾಷ್ಟ್ರೀಯ ವಿಮಾನಗಳ ಪ್ರವೇಶ ನಿಷೇಧ

ಕರ್ನಾಟಕದಲ್ಲಿ ಇಬ್ಬರು, ಮಧ್ಯಪ್ರದೇಶ, ತಮಿಳುನಾಡು, ಬಿಹಾರ, ಪಂಜಾಬ್, ದೆಹಲಿ, ಹಿಮಾಚಲ ಪ್ರದೇಶ, ಪಶ್ಚಿಮ ಬಂಗಾಳ, ಜಮ್ಮು ಮತ್ತು ಕಾಶ್ಮೀರದಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

Sushma Chakre | news18-kannada
Updated:March 27, 2020, 8:00 AM IST
21 ದಿನ ಲಾಕ್​ಡೌನ್ ಹಿನ್ನೆಲೆ; ಏ. 14ರವರೆಗೂ ಅಂತಾರಾಷ್ಟ್ರೀಯ ವಿಮಾನಗಳ ಪ್ರವೇಶ ನಿಷೇಧ
ಸಾಂದರ್ಭಿಕ ಚಿತ್ರ
  • Share this:
ನವದೆಹಲಿ (ಮಾ. 27): ಮಾ. 22ರಿಂದ ಭಾರತದಲ್ಲಿ 21 ದಿನಗಳ ಕಾಲ ಲಾಕ್​ಡೌನ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಾ. 31ರವರೆಗೆ ನಿಷೇಧ ಹೇರಲಾಗಿದ್ದ ಅಂತಾರಾಷ್ಟ್ರೀಯ ವಿಮಾನಗಳ ನಿರ್ಬಂಧದ ಗಡುವನ್ನು ಕೂಡ ವಿಸ್ತರಿಸಲಾಗಿದೆ. ಈ ಬಗ್ಗೆ ಭಾರತದ ನಾಗರಿಕ ವಿಮಾನಯಾನ ಸಚಿವಾಲಯ ಪ್ರಕಟಣೆ ಹೊರಡಿಸಿದೆ.

ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುತ್ತಿದೆ. ಇದುವರೆಗೂ ದೇಶದಲ್ಲಿ ಪತ್ತೆಯಾಗಿರುವ ಎಲ್ಲ ಕೊರೋನಾ ವೈರಸ್​ ಪ್ರಕರಣಗಳೂ ವಿದೇಶದಿಂದ ಆಗಮಿಸಿದವರಿಂದಲೇ ಹರಡಿರುವ ಹಿನ್ನೆಲೆಯಲ್ಲಿ ವಿದೇಶಗಳಿಂದ ಆಗಮಿಸುವ ವಿಮಾನಗಳಿಗೆ ಭಾರತದ ಗಡಿಯಲ್ಲಿ ನಿಷೇಧ ಹೇರಲು ನಿರ್ಧರಿಸಲಾಗಿದೆ. ಮಾರ್ಚ್​ 22ರಿಂದ ಈ ನಿಯಮ ಜಾರಿಗೆ ಬರಲಿದೆ.

ನಾಗರಿಕ ವಿಮಾನಯಾನ ಇಲಾಖೆಯ ಪ್ರಕಟಣೆ


ಬೇರೆ ದೇಶಗಳಿಂದ ಭಾರತಕ್ಕೆ ಬರುವ ಮತ್ತು ಭಾರತದಿಂದ ವಿದೇಶಗಳಿಗೆ ತೆರಳುವ ಎಲ್ಲ ಕಮರ್ಷಿಯಲ್ ವಿಮಾನಗಳನ್ನು ಏ. 14ರವರೆಗೆ ನಿಷೇಧಿಸಲಾಗಿದೆ. ವಿದೇಶಗಳಿಂದ ಆಗಮಿಸುವವರಿಂದ ಕೊರೋನಾ ವೈರಸ್ ಹರಡುವಿಕೆ ಹೆಚ್ಚುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: ಜಗತ್ತಿನಾದ್ಯಂತ ಮುಂದುವರೆದ ಕೊರೋನಾ ಅಟ್ಟಹಾಸ; 23 ಸಾವಿರ ಬಲಿ, ಸೋಂಕಿತರ ಸಂಖ್ಯೆ 5 ಲಕ್ಷಕ್ಕೆ ಏರಿಕೆ

ಇದೇ ರೀತಿ ಆಸ್ಟ್ರೇಲಿಯ ಮತ್ತು ನ್ಯೂಜಿಲೆಂಡ್ನಲ್ಲಿ ಕೂಡ ಅಂತಾರಾಷ್ಟ್ರೀಯ ವಿಮಾನಗಳ ಮೇಲೆ ನಿರ್ಬಂಧ ಹೇರಲಾಗಿದೆ. ಅದೇ ಮಾದರಿಯಲ್ಲಿ ಇದೀಗ ಭಾರತದಲ್ಲೂ ಇನ್ನೂ 19 ದಿನಗಳ ಕಾಲ ಅಂತಾರಾಷ್ಟ್ರೀಯ ವಿಮಾನಗಳನ್ನು ನಿಷೇಧಿಸಲಾಗಿದೆ.

ವಿಶ್ವಾದ್ಯಂತ 5 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ. ಸುಮಾರು 22,000 ಜನರು ಕೊರೋನಾಗೆ ಬಲಿಯಾಗಿದ್ದಾರೆ. ಭಾರತದಲ್ಲಿ ನಿನ್ನೆ ಒಂದೇ ದಿನ 88 ಹೊಸ ಕೊರೋನಾ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಭಾರತದಲ್ಲಿ ಸೋಂಕಿತರ ಸಂಖ್ಯೆ 700 ತಲುಪಿದೆ. ಕರ್ನಾಟಕದಲ್ಲಿ ಇಬ್ಬರು, ಮಧ್ಯಪ್ರದೇಶ, ತಮಿಳುನಾಡು, ಬಿಹಾರ, ಪಂಜಾಬ್, ದೆಹಲಿ, ಹಿಮಾಚಲ ಪ್ರದೇಶ, ಪಶ್ಚಿಮ ಬಂಗಾಳ, ಜಮ್ಮು ಮತ್ತು ಕಾಶ್ಮೀರದಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.ಇದನ್ನೂ ಓದಿ: ದೆಹಲಿ ವೈದ್ಯರಿಗೆ ಕೊರೋನಾ ಸೋಂಕು ದೃಢ​; ಅವರೊಂದಿಗೆ ಸಂಪರ್ಕ ಹೊಂದಿದ್ದ 800 ಜನಕ್ಕೆ ಗೃಹ ದಿಗ್ಬಂಧನ

 
First published: March 27, 2020, 7:54 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading