ಬೆಂಗಳೂರು (ಮೇ 16); ಬಾಕಿಯಿರುವ ದ್ವಿತೀಯ ಪಿಯುಸಿ ಇಂಗ್ಲಿಷ್ ಭಾಷಾ ಪರೀಕ್ಷೆಯನ್ನು ಬಹುತೇಕ ಜೂನ್ ತಿಂಗಳಲ್ಲಿ ನಡೆಸಲು ಇಲಾಖೆ ಚಿಂತಿಸಿದೆ. ಈ ನಡುವೆ ಇಂದು ಸುತ್ತೋಲೆ ಹೊರಡಿಸಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ಲಾಕ್ಡೌನ್ನಿಂದಾಗಿ ವಿದ್ಯಾರ್ಥಿಗಳು ಯಾವ ಯಾವ ಜಿಲ್ಲೆಗಳಲ್ಲಿ ಸಿಲುಕಿಕೊಂಡಿದ್ದಾರೋ ಅಲ್ಲೇ ಪರೀಕ್ಷೆ ಬರೆಯಲು ಅನುಮತಿ ನೀಡಲಾಗುವುದು ಎಂದು ತಿಳಿಸಿದೆ. ಇದರೊಂದಿಗೆ ವಿದ್ಯಾರ್ಥಿಗಳಲ್ಲಿದ್ದ ಆತಂಕ ದೂರವಾದಂತಾಗಿದೆ.
ದೇಶದಲ್ಲಿ ಲಾಕ್ಡೌನ್ ಘೋಷಣೆಯಾಗುವ ಮುಂಚೆ ದ್ವಿತೀಯ ಪಿಯುಸಿ ಯ ಎಲ್ಲಾ ಪರೀಕ್ಷೆಗಳು ಮುಗಿದಿದ್ದವು. ಆದರೆ, ಆಂಗ್ಲ ಭಾಷೆ ಪತ್ರಿಕೆ ಮಾತ್ರ ಉಳಿದಿತ್ತು. ಈ ಸಂದರ್ಭದಲ್ಲಿ ಲಾಕ್ಡೌನ್ ಘೋಷಿಸಿದ ಪರಿಣಾಮ ಈ ಒಂದು ಪತ್ರಿಕೆಯ ಪರೀಕ್ಷೆಯನ್ನು ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಸಾಧ್ಯವಾಗಿರಲಿಲ್ಲ. ಹೀಗಾಗಿ ಮಾರ್ಚ್ 23ನೇ ತಾರೀಕಿನಂದೇ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿ ಶಿಕ್ಷಣ ಸಚಿವ ಸುರೇಶ್ ಕುಮಾರ್ಆದೇಶ ಹೊರಡಿಸಿದ್ದರು. ಇದರ ಜೊತೆಗೆ ಎಸ್ಎಸ್ಎಲ್ಸಿ ಪರೀಕ್ಷೆಯನ್ನೂ ಮುಂದೂಡಲಾಗಿತ್ತು.
![puc]()
ಪದವಿಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ.
ಇದೀಗ ದೇಶದಾದ್ಯಂತ ಲಾಕ್ಡೌನ್ ಅನ್ನು ಹಂತ ಹಂತವಾಗಿ ತೆರವುಗೊಳಿಸಲಾಗುತ್ತಿದೆ. ಕರ್ನಾಟಕದಲ್ಲೂ ಲಾಕ್ಡೌನ್ ಬಹುತೇಕ ತೆರವಾಗಿದೆ. ಆದರೆ, ಸಾರ್ವಜನಿಕ ಸಂಚಾರಕ್ಕೆ ಮಾತ್ರ ಈವರೆಗೆ ಅವಕಾಶ ನೀಡಲಾಗಿಲ್ಲ. ಹೀಗಾಗಿ ವಿದ್ಯಾರ್ಥಿಗಳು ವಿವಿಧ ಕಡೆಗಳಲ್ಲಿ ಸಿಲುಕಿಕೊಂಡಿದ್ದಾರೆ. ಹೀಗಾಗಿ ಜೂನ್ ತಿಂಗಳಲ್ಲಿ ಪರೀಕ್ಷೆ ನಡೆಸಲು ನಿರ್ಧರಿಸಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳು ಎಲ್ಲಿದ್ದಾರೋ ಅದೇ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲು ಅನುಮತಿ ನೀಡಿದೆ.
ಇದನ್ನೂ ಓದಿ : ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಠಿ-4; ಇಂದು ಯಾವ್ಯಾವ ಕ್ಷೇತ್ರಗಳಿಗೆ ಏನೆಲ್ಲಾ ಕೊಡುಗೆ?
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ