ಬೆಂಗಳೂರು (ಮೇ 17): ಕರ್ನಾಟಕದಲ್ಲಿ ಮೇ 19ರವರೆಗೆ ಲಾಕ್ಡೌನ್ ವಿಸ್ತರಣೆ ಮಾಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರ್ಧಾರ ಮಾಡಿದ್ದಾರೆ. ಇಂದಿಗೆ ದೇಶಾದ್ಯಂತ 3ನೇ ಹಂತದ ಲಾಕ್ಡೌನ್ ಅಂತ್ಯವಾಗಲಿದೆ. ನಾಳೆಯಿಂದ 4ನೇ ಹಂತದ ಲಾಕ್ಡೌನ್ ಜಾರಿಗೆ ಬರಲಿದ್ದು, ಹೊಸ ಮಾರ್ಗಸೂಚಿಗಳು ಇನ್ನಷ್ಟೇ ಘೋಷಣೆಯಾಗಬೇಕಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮೇ 19ರವರೆಗೆ ಲಾಕ್ಡೌನ್ ವಿಸ್ತರಣೆ ಮಾಡಲು ನಿರ್ಧರಿಸಿದೆ.
ಲಾಕ್ಡೌನ್ ವಿಸ್ತರಣೆ ಹಾಗೂ ಹೊಸ ಗೈಡ್ಲೈನ್ ಕುರಿತಂತೆ ಕೇಂದ್ರ ಸರ್ಕಾರದಿಂದ ಇನ್ನಷ್ಟೇ ಸುತ್ತೋಲೆ ಬರಬೇಕಿದೆ. ಅದಕ್ಕೂ ಮೊದಲೇ ತಮಿಳುನಾಡು ಹಾಗೂ ಮಹಾರಾಷ್ಟ್ರ ಸರ್ಕಾರ ಲಾಕ್ಡೌನ್ ವಿಸ್ತರಣೆ ಮಾಡುವ ಆದೇಶ ಹೊರಡಿಸಿವೆ. ತಮಿಳುನಾಡು, ಮಹಾರಾಷ್ಟ್ರದ ಬೆನ್ನಲ್ಲೇ ಕರ್ನಾಟಕ ಸರ್ಕಾರವೂ ಲಾಕ್ಡೌನ್ ವಿಸ್ತರಣೆ ಮಾಡಲು ನಿರ್ಧರಿಸಿವೆ.
ಸದ್ಯಕ್ಕೆ ಮೇ 19ರವರೆಗೆ ಲಾಕ್ಡೌನ್ ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ. ಅದಾದ ಮೇಲೆ ಮೇಲೆ ಮೇ 31ರವರೆಗೂ ಲಾಕ್ಡೌನ್ ವಿಸ್ತರಣೆಯಾಗುವ ಸಾಧ್ಯತೆಯಿದೆ. ರಾಜ್ಯದಲ್ಲಿ ಯಾವೆಲ್ಲ ಸೇವೆಗಳು ಲಭ್ಯವಾಗಲಿವೆ ಎಂಬ ಬಗ್ಗೆ ಇನ್ನಷ್ಟೇ ಮಾಹಿತಿಗಳು ಹೊರಬೀಳಬೇಕಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ