HOME » NEWS » Coronavirus-latest-news » KARNATAKA CM BS YEDIYURAPPA DISCHARGED FROM BANGALORE MANIPAL HOSPITAL AFTER RECOVERING FROM COVID 19 SCT

BS Yediyurappa Health: ಕೊರೋನಾದಿಂದ ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಯಡಿಯೂರಪ್ಪ ಡಿಸ್ಚಾರ್ಜ್

BS Yediyurappa Health: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಕಾವೇರಿ ನಿವಾಸದಲ್ಲಿ ಮಾತನಾಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ಇವತ್ತು ಸಂಪುಟ ಸಹೋದ್ಯೋಗಿಗಳ ಜೊತೆ ಕೊರೋನಾ ನಿಯಂತ್ರಣದ ಬಗ್ಗೆ ಚರ್ಚೆ ಮಾಡುತ್ತೇನೆ. ಕೋವಿಡ್ ನಿರ್ವಹಣೆ ನನ್ನ ಮೊದಲ ಆದ್ಯತೆಯಾಗಿದೆ. ಅನಗತ್ಯವಾಗಿ ಯಾರೂ ಮನೆಯಿಂದ ಹೊರಗೆ ಹೋಗಬೇಡಿ ಎಂದಿದ್ದಾರೆ.

news18-kannada
Updated:April 22, 2021, 2:55 PM IST
BS Yediyurappa Health: ಕೊರೋನಾದಿಂದ ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಯಡಿಯೂರಪ್ಪ ಡಿಸ್ಚಾರ್ಜ್
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸಿಎಂ ಯಡಿಯೂರಪ್ಪ
  • Share this:
ಬೆಂಗಳೂರು (ಏ. 22): ಕೊರೋನಾ ಸೋಂಕು ದೃಢಪಟ್ಟಿದ್ದರಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರೀಗ ಕೊರೋನಾದಿಂದ ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಆಸ್ಪತ್ರೆಯ ವೈದ್ಯರು ಯಡಿಯೂರಪ್ಪನವರಿಗೆ ನಮಸ್ಕರಿಸಿ, ಹೂಗುಚ್ಛ ನೀಡಿ ಬೀಳ್ಕೊಟ್ಟಿದ್ದಾರೆ. ಮಣಿಪಾಲ್ ಆಸ್ಪತ್ರೆಯಿಂದ ಯಡಿಯೂರಪ್ಪ ಕಾವೇರಿ ನಿವಾಸಕ್ಕೆ ತೆರಳಿದ್ದಾರೆ.

ಯಡಿಯೂರಪ್ಪ ಮಾತ್ರವಲ್ಲದೆ ಅವರ ಜೊತೆಯಲ್ಲಿ ಕೊರೋನಾದಿಂದ ಆಸ್ಪತ್ರೆಗೆ ದಾಖಲಾಗಿದ್ದ ಯಡಿಯೂರಪ್ಪನವರ ಮೊಮ್ಮಗಳು ಸೌಂದರ್ಯ ಕೂಡ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಯಿಂದ ಕಾವೇರಿ ನಿವಾಸಕ್ಕೆ ವಾಪಸ್ಸಾದ ಸಿಎಂ ಯಡಿಯೂರಪ್ಪ ರಾಜ್ಯದ ಕೊರೋನಾ ಪರಿಸ್ಥಿತಿ ಬಗ್ಗೆ ಇಂದು ಸಂಪುಟದ ಸಚಿವರ ಜೊತೆ ಸಭೆ ನಡೆಸಲಿದ್ದಾರೆ.

Karnataka Coronavirus Updates: Karnataka CM BS Yediyurappa Discharged from Bangalore Manipal Hospital after Recovering from Covid-19.
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸಿಎಂ ಯಡಿಯೂರಪ್ಪ


ಕಾವೇರಿ ನಿವಾಸದಲ್ಲಿ ಮಾತನಾಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ನಾನು ಮನೆಯಲ್ಲಿ ವಿಶ್ರಾಂತಿ ಪಡೆಯುವುದಿಲ್ಲ. ಆಸ್ಪತ್ರೆಯಲ್ಲಿದ್ದಾಗಲೇ ಸಾಕಷ್ಟು ವಿಶ್ರಾಂತಿ ಪಡೆದಿದ್ದೇನೆ. ಇವತ್ತು ಸಂಪುಟ ಸಹೋದ್ಯೋಗಿಗಳ ಜೊತೆ ಕೊರೋನಾ ನಿಯಂತ್ರಣದ ಬಗ್ಗೆ ಚರ್ಚೆ ಮಾಡುತ್ತೇನೆ. ಕೋವಿಡ್ ನಿರ್ವಹಣೆ ನನ್ನ ಮೊದಲ ಆದ್ಯತೆಯಾಗಿದೆ. ನಾನು ನಿರಂತರವಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ಜೊತೆ ಸಂಪರ್ಕದಲ್ಲಿದ್ದೆ. ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಬಿಗಿಯಾದ ನಿಯಮಗಳನ್ನು ಕೈಗೊಂಡಿದ್ದೇವೆ. ಅದರ ಪಾಲನೆಗೆ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದೇನೆ. ಅದರಂತೆ ಜನರು ಸಹಕಾರ ಕೊಡಬೇಕು ಎಂದು ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ.

KSRTC BMTC Loss: ಸಾರಿಗೆ ನೌಕರರ ಮುಷ್ಕರದಿಂದ 15 ದಿನದಲ್ಲಿ 287 ಕೋಟಿ ರೂ. ನಷ್ಟ!

ಕರ್ನಾಟಕದಲ್ಲಿ ಕೊರೋನಾ ದಿನೇ ದಿನೇ ಹೆಚ್ಚಾಗುತ್ತಿದೆ. ಒಂದು ಮನೆಯಲ್ಲಿ ಮೂರು- ನಾಲ್ಕು ಜನಕ್ಕೆ ಕೊರೋನಾ ಬರುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಹೇಳಿದಂತೆ ಮಾಸ್ಕ್, ಅಂತರ ಬಿಟ್ಟರೆ ಬೇರೆ ಪರಿಹಾರ ಇಲ್ಲ. ಜನ ಮನೆಯಿಂದ ಹೊರಗೆ ಬರಬಾರದು. ಅಗತ್ಯವಾಗಿ ಜನರು ಹೊರಗೆ ಬರಬೇಡಿ. ನಾವು ಬಿಗಿಯಾದ ಕ್ರಮ ಕೈಗೊಂಡಿದ್ದೇವೆ. ಇಂದು ಸಂಪುಟ ಸಹೋದ್ಯೋಗಿಗಳ ಜೊತೆ ಚರ್ಚೆ ನಡೆಸಲಿದ್ದೇನೆ. ಸಭೆಯಲ್ಲಿ ಕೊರೋನಾ ತಡೆ ಸಂಬಂಧ ಚರ್ಚೆ ಮಾಡುತ್ತೇನೆ. ಕೊರೋನಾ ನಿಯಂತ್ರಣ ಮಾಡದೆ ಇರುವ ಪರಿಸ್ಥಿತಿಗೆ ಬಂದು ತಲುಪಿದ್ದೇವೆ. ಇನ್ನಾದರೂ ಜನರು ಅನಗತ್ಯವಾಗಿ ಓಡಾಡೋದನ್ನು ನಿಲ್ಲಿಸಬೇಕು ಎಂದು ಸಿಎಂ ಯಡಿಯೂರಪ್ಪ ಎಚ್ಚರಿಸಿದ್ದಾರೆ.

ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮಂಗಳಾ ಅಂಗಡಿ ಪರವಾಗಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಸಿಎಂ ಬಿ.ಎಸ್. ಯಡಿಯೂರಪ್ಪ ತೀವ್ರ ಜ್ವರ ಮತ್ತು ಸುಸ್ತಿನಿಂದ ಪ್ರಚಾರ ಕಾರ್ಯವನ್ನು ಅರ್ಧಕ್ಕೇ ನಿಲ್ಲಿಸಿ ಬೆಂಗಳೂರಿಗೆ ವಾಪಾಸ್ ಬಂದಿದ್ದರು. ಆಗ ಅವರ ಪರೀಕ್ಷೆ ಮಾಡಿದಾಗ ಕೊರೋನಾ ಪಾಸಿಟಿವ್ ಬಂದಿದ್ದು ಖಚಿತವಾಗಿತ್ತು.

ಕಳೆದ ವರ್ಷ ಕೂಡ ಸಿಎಂ ಯಡಿಯೂರಪ್ಪ ಕೊರೋನಾದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಈ ಬಾರಿ 2 ಕೊರೋನಾ ಲಸಿಕೆ ಹಾಕಿಸಿಕೊಂಡ ಬಳಿಕವೂ ಮತ್ತೆ ಅವರಿಗೆ ಕೊರೋನಾ ಸೋಂಕು ತಗುಲಿತ್ತು. ಆಸ್ಪತ್ರೆಯಿಂದಲೇ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಸೇರಿದಂತೆ ಕೊರೋನಾ ನಿಯಮಾವಳಿಯನ್ನು ಸಿಎಂ ಯಡಿಯೂರಪ್ಪ ಜಾರಿ ಮಾಡಿದ್ದರು.
Published by: Sushma Chakre
First published: April 22, 2021, 12:53 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories