ಸಿಎಂ ಗೃಹ ಕಚೇರಿಯಲ್ಲಿ ಕೊರೋನಾ ಪತ್ತೆ; ಇಂದಿನಿಂದ ಕೆಲವು ದಿನ ಸಿಎಂ ಯಡಿಯೂರಪ್ಪ ಮನೆಯಿಂದಲೇ ಕೆಲಸ

Karnataka Coronavirus Updates: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಗೃಹ ಕಚೇರಿಯ ಸಿಬ್ಬಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿರುವುದರಿಂದ ಸಿಎಂ ಯಡಿಯೂರಪ್ಪ ಹೋಂ ಕ್ವಾರಂಟೈನ್ ಆಗಿದ್ದಾರೆ. ಇಂದಿನಿಂದ ಕೆಲವು ದಿನಗಳವರೆಗೆ ಅವರು ಮನೆಯಿಂದಲೇ ಕೆಲಸಗಳನ್ನು ನಿರ್ವಹಿಸಲಿದ್ದಾರೆ.

news18-kannada
Updated:July 10, 2020, 1:03 PM IST
ಸಿಎಂ ಗೃಹ ಕಚೇರಿಯಲ್ಲಿ ಕೊರೋನಾ ಪತ್ತೆ; ಇಂದಿನಿಂದ ಕೆಲವು ದಿನ ಸಿಎಂ ಯಡಿಯೂರಪ್ಪ ಮನೆಯಿಂದಲೇ ಕೆಲಸ
ಸಿಎಂ ಬಿ.ಎಸ್.ಯಡಿಯೂರಪ್ಪ.
  • Share this:
ಬೆಂಗಳೂರು (ಜು. 10): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಕೆಲ ಸಿಬ್ಬಂದಿಗೆ ಕೊರೋನಾ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೆಲವು ದಿನಗಳ ಕಾಲ ಸಿಎಂ ಬಿ.ಎಸ್. ಯಡಿಯೂರಪ್ಪ ಹೋಂ ಕ್ವಾರಂಟೈನ್ ಆಗಲು ನಿರ್ಧರಿಸಿದ್ದಾರೆ.

ಕೃಷ್ಣಾ ಕಚೇರಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿರುವುದರಿಂದ ಇಂದಿನಿಂದ ಕೆಲ ದಿನಗಳ ಕಾಲ ನಾನು ಮನೆಯಿಂದಲೇ ನನ್ನ ಕರ್ತವ್ಯಗಳನ್ನು ನಿರ್ವಹಿಸಲಿದ್ದೇನೆ. ವೀಡಿಯೋ ಕಾನ್ಫರೆನ್ಸ್ ‌ಮುಖಾಂತರ ಅಗತ್ಯ ಸಲಹೆ ಸೂಚನೆಗಳನ್ನು ನೀಡಲಿದ್ದೇನೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ, ನಾನು ಆರೋಗ್ಯವಾಗಿದ್ದೇನೆ. ಎಲ್ಲರೂ ಮುನ್ನೆಚ್ಚರಿಕೆಯ ಕ್ರಮಗಳು ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ. ಸಾಮಾಜಿಕ ಅಂತರ ಹಾಗು ಕಡ್ಡಾಯವಾಗಿ ಮಾಸ್ಕ್ ಧರಿಸಿ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ: ಬಿ.ಎಸ್. ಯಡಿಯೂರಪ್ಪಗೂ ಕೊರೋನಾ ಭೀತಿ; ಸಿಎಂ ಮನೆ, ಗೃಹ ಕಚೇರಿಯ 10 ಸಿಬ್ಬಂದಿಗೆ ಸೋಂಕು ಪತ್ತೆ

ಮುಖ್ಯಮಂತ್ರಿಗಳ ಗೃಹ ಕಚೇರಿಯ ಟೆಲಿಫೋನ್ ಆಪರೇಟರ್, ಇಬ್ಬರು ಎಸ್ಕಾರ್ಟ್​, ಧವಳಗಿರಿ ನಿವಾಸದಲ್ಲಿ ಅಡುಗೆ ಮಾಡುವವನಿಗೆ, ಒಬ್ಬ ಕಾರು ಚಾಲಕನಿಗೆ ಸೇರಿ ಸಿಎಂ ಯಡಿಯೂರಪ್ಪ ಸುತ್ತಮುತ್ತಲಿರುವ ಒಟ್ಟು 10 ಜನರಿಗೆ ಕೊರೋನಾ ಸೋಂಕು ಹರಡಿದೆ. ಈ ಹಿನ್ನೆಲೆಯಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸ್ಯಾನಿಟೈಸ್ ಮಾಡಲಾಗಿದೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲೂ ಕೊರೋನಾ ಸೋಂಕು ಪತ್ತೆಯಾಗಿದೆ ಎನ್ನಲಾಗಿದ್ದು, ಈ ಬಗ್ಗೆ ಸಿಎಂ ಕಚೇರಿಯಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
Published by: Sushma Chakre
First published: July 10, 2020, 12:55 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading