HOME » NEWS » Coronavirus-latest-news » KARNATAKA CM BS YEDIYURAPPA SAYS WE HAVE RESERVED 1955 HOSPITAL BEDS FOR CORONAVIRUS PATIENTS IN KARNATAKA MAK

BS Yeddyurappa: ಕೋವಿಡ್‌ ರೋಗಿಗಳಿಗಾಗಿ ರಾಜ್ಯದ 1955 ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ: ಯಡಿಯೂರಪ್ಪ

ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಎಲ್ಲಾ ಜಿಲ್ಲೆಗಳ ಮೇಲೂ ಸಾಕಷ್ಟು ನಿಗಾ ವಹಿಸಿದೆ. ಮುಂದಿನ ದಿನಗಳಲ್ಲೂ ಸಹ ಕೊರೋನಾ ನಿಯಂತ್ರಣಕ್ಕೆ ಎಲ್ಲ ಕ್ರಮಗಳನ್ನೂ ಕೈಗೊಳ್ಳಲಾಗುವುದು. ಈ ನಡುವೆ ಪ್ರವಾಹವನ್ನೂ ಎದುರಿಸಲು ರಾಜ್ಯ ಸಿದ್ಧವಾಗಬೇಕಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

news18-kannada
Updated:July 13, 2020, 12:38 PM IST
BS Yeddyurappa: ಕೋವಿಡ್‌ ರೋಗಿಗಳಿಗಾಗಿ ರಾಜ್ಯದ 1955 ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ: ಯಡಿಯೂರಪ್ಪ
ಬಿ.ಎಸ್‌. ಯಡಿಯೂರಪ್ಪ.
  • Share this:
ಬೆಂಗಳೂರು (ಜುಲೈ 13); ರಾಜ್ಯಾದ್ಯಂತ ಕೊರೋನಾ ಸೋಂಕು ನಿವಾರಣೆಗಾಗಿ ಈಗಾಗಲೇ 1955 ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ. ಅಲ್ಲದೆ, ಜಿ‌ಲ್ಲೆಗಳಿಗೆ ಸಹಾಯವಾಗಲಿ ಎಂದು 1 ಲಕ್ಷ ರ್‍ಯಾಪಿಡ್ ಆಂಟಿಜೆನ್ ಕಿಟ್‌ಗಳನ್ನು ಕಳುಹಿಸಿಕೊಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ.

ಕೊರೋನಾ ಸೋಂಕು ಅಧಿಕವಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ಸಿಎಂ ಯಡಿಯೂರಪ್ಪ ಇಂದು ವಿಡಿಯೋ ಕಾನ್ಫೆರೆನ್ಸ್‌ ಮೂಲಕ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಕೊರೋನಾ ಸಂಬಂಧ ಇಲ್ಲಿವರೆಗೂ ಜಿಲ್ಲಾಡಳಿತದಿಂದ ಏನೆಲ್ಲಾ ಕ್ರಮ ಕೈಗೊಳ್ಳಾಗಿದೆ? ಸದ್ಯ ಕ್ರಮದಿಂದ ಕೊರೋನಾ ಎಷ್ಟರ ಮಟ್ಟಿಗೆ ನಿಯಂತ್ರಣವಾಗಿದೆ? ಸೋಂಕಿತರ ಸಂಖ್ಯೆ ಎಷ್ಟಿದೆ? ಜಿಲ್ಲೆಯಲ್ಲಿ ಸಾವಿನ ಪ್ರಮಾಣ ಎಷ್ಟಿದೆ? ಎಂಬುದರ ಬಗ್ಗೆ ಸಿಎಂ ಮಾಹಿತಿ ಪಡೆಯಲಾಗುತ್ತಿದೆ ಎಂದು ತಿಳಿದುಬಂದಿದೆ.

ಈ ಸಭೆಯ ನಂತರ ಮಾತನಾಡಿರುವ ಅವರು, "ಕೊರೋನಾ ಸೋಂಕಿಗೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳ ಬಗ್ಗೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆಯಲಾಗುತ್ತಿದೆ. ಮಳೆ, ಪ್ರವಾಹ ಕುರಿತೂ ಅವರುಮಾಹಿತಿ ಕೊಡಲಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಕೊರೊನಾ ಸೋಂಕಿತರ ಸಂಖ್ಯೆ 38 ಸಾವಿರ ದಾಟಿದೆ. 694 ಜನ ಸಾವನ್ನಪ್ಪಿದ್ದಾರೆ. ಒಟ್ಟು ಸೋಂಕಿತರಿಗೆ 2,774 ಕೋವಿಡ್ ಚಿಕಿತ್ಸಾ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನೂ ಕೊರೋನಾ ಸೋಂಕಿತರ ಚಿಕಿತ್ಸೆಗೆ ಉಪಯೋಗವಾಗಲಿ ಎಂದು 27,718ಕ್ಕೂ ಹೆಚ್ಚು ಸರ್ಕಾರಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ. ಇನ್ನೂ 1955 ಖಾಸಗಿ ಆಸ್ಪತ್ರೆಗಳಲ್ಲೂ ಹಾಸಿಗೆಗಳ ಕಾಯ್ದುರಿಸಲಾಗಿದೆ. ಜಿಲ್ಲೆಗಳಿಗೆ ಸಹಕಾರಿಯಾಗಲಿ ಎಂದು ಜಿಲ್ಲಾ ಆಸ್ಪತ್ರೆಗಳಲ್ಲಿ ಐಸಿಯು ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. 120 ಹೆಚ್ಚುವರಿ ಆಂಬುಲೆನ್ಸ್ ಗಳ ಖರೀದಿಗೆ ಕ್ರಮ ವಹಿಸಲಾಗಿದೆ. ಜಿಲ್ಲೆಗಳಿಗೆ 1 ಲಕ್ಷ ರ್‍ಯಾಪಿಡ್ ಆಂಟಿಜೆನ್ ಕಿಟ್ ಗಳನ್ನು ಕಳುಹಿಸಿಕೊಡಲಾಗಿದೆ" ಎಂದು ಮಾಹಿತಿ ನೀಡಿದ್ದಾರೆ.

"ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಎಲ್ಲಾ ಜಿಲ್ಲೆಗಳ ಮೇಲೂ ಸಾಕಷ್ಟು ನಿಗಾ ವಹಿಸಿದೆ. ಮುಂದಿನ ದಿನಗಳಲ್ಲೂ ಸಹ ಕೊರೋನಾ ನಿಯಂತ್ರಣಕ್ಕೆ ಎಲ್ಲ ಕ್ರಮಗಳನ್ನೂ ಕೈಗೊಳ್ಳಲಾಗುವುದು. ಈ ನಡುವೆ ಪ್ರವಾಹವನ್ನೂ ಎದುರಿಸಲು ರಾಜ್ಯ ಸಿದ್ಧವಾಗಬೇಕಿದೆ" ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ : ರಾಜ್ಯಾದ್ಯಂತ ಮತ್ತೆ ಲಾಕ್‌ಡೌನ್?; ಎಲ್ಲಾ ಜಿಲ್ಲೆ ಡಿಸಿಗಳ ಜೊತೆಗೆ ಸಿಎಂ ವಿಡಿಯೋ ಕಾನ್ಪೆರೆನ್ಸ್‌
Youtube Video
ರಾಜ್ಯ ಆರೋಗ್ಯ ಇಲಾಖೆ ಭಾನುವಾರ ಬಿಡುಗಡೆ ಮಾಡಿರುವ ಅಂಕಿಅಂಶದ ಪ್ರಕಾರ ರಾಜ್ಯದಲ್ಲಿ ನಿನ್ನೆ ಒಂದೇ ದಿನದಲ್ಲಿ 2,798 ಪ್ರಕರಣಗಳು ದಾಖಲಾಗಿವೆ. 70 ಮಂದಿ ಅಸುನೀಗಿದ್ಧಾರೆ. ಇಲ್ಲಿಯವರೆಗೆ ದಾಖಲಾಗಿರುವ ಕೊರೋನಾ ಪ್ರಕರಣಗಳ ಸಂಖ್ಯೆ 36,216 ತಲುಪಿದ್ದರೆ, ಸಾವಿನ ಪ್ರಮಾಣ 613ಕ್ಕೇ ಏರಿಕೆಯಾಗಿದೆ ಎಂದು ತಿಳಿಸಲಾಗಿದೆ.
Published by: MAshok Kumar
First published: July 13, 2020, 12:36 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories