CM BS Yediyurappa: ಕರ್ನಾಟಕ ಸಿಎಂ ಬಿ.ಎಸ್ ಯಡಿಯೂರಪ್ಪಗೆ ಕೊರೋನಾ ಪಾಸಿಟಿವ್​​​

ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್​​ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದು ತನ್ನನ್ನು ಭೇಟಿ ಮಾಡಿದವರಿಗೆ ಮನವಿ ಮಾಡಿದ್ದಾರೆ ಸಿಎಂ ಬಿ.ಎಸ್​ ಯಡಿಯೂರಪ್ಪ.

news18-kannada
Updated:August 3, 2020, 8:00 AM IST
CM BS Yediyurappa: ಕರ್ನಾಟಕ ಸಿಎಂ ಬಿ.ಎಸ್ ಯಡಿಯೂರಪ್ಪಗೆ ಕೊರೋನಾ ಪಾಸಿಟಿವ್​​​
ಬಿ.ಎಸ್‌. ಯಡಿಯೂರಪ್ಪ.
  • Share this:
ಬೆಂಗಳೂರು(ಆ.02): ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆನ್ನಲ್ಲೀಗ ಸಿಎಂ ಬಿ.ಎಸ್​ ಯಡಿಯೂರಪ್ಪಗೆ ಕೊರೋನಾ ಸೋಂಕು ಒಕ್ಕರಿಸಿದೆ.  ಮುಂಜಾಗ್ರತಾ ಕ್ರಮವಾಗಿ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುವುದಾಗಿ ಸಿಎಂ ಟ್ವೀಟ್​​ ಮಾಡಿದ್ದಾರೆ.

ತನಗೆ ಕೊರೋನಾ ಬಂದಿರುವ ಬಗ್ಗೆ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಟ್ವೀಟ್​ ಮಾಡಿ ಖಾತ್ರಿಪಡಿಸಿದ್ದಾರೆ. ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ ಎಂದು ಸಿಎಂ ಟ್ವೀಟ್​​ನಲ್ಲಿ ಬರೆದುಕೊಂಡಿದ್ದಾರೆ.
ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್​​ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದು ತನ್ನನ್ನು ಭೇಟಿ ಮಾಡಿದವರಿಗೆ ಮನವಿ ಮಾಡಿದ್ದಾರೆ ಸಿಎಂ ಬಿ.ಎಸ್​ ಯಡಿಯೂರಪ್ಪ.
ಇನ್ನು, ಸಿಎಂ ಬಿಎಸ್​​ ಯಡಿಯೂರಪ್ಪ ಹೆಚ್ಎಎಲ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿಎಂ ಅವರ ಆರೋಗ್ಯವನ್ನು ಪ್ರತ್ಯೇಕ ವೈದ್ಯರ ತಂಡ ತಪಾಸಣೆ ಮಾಡುತ್ತಿದೆ. ‌

Published by: Ganesh Nachikethu
First published: August 2, 2020, 11:45 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading